ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Written by Ramlinganna

Updated on:

Application invited for post ವಿವಿಧ ಹುದ್ದೆಗಳ ಭರ್ತಿಗೆ ಎಸ್.ಎಸ್.ಎಲ್ಸಿ, ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ನವೆಂಬರ್ 22 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಟ್ಯಾಲಿ ಸೋಲ್ಯುಷನ್ಸ್ ದಲ್ಲಿ ಟೆಲಿಕಾಲರ್, ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಬಿಕಾಂ, ಬಿಬಿಎ, ಎಂಬಿಎ, ಎಂಕಾಂ, ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 30 ವಯೋಮಾನದೊಳಗಿರಬೇಕು. ಐಐಎಫ್ಎಲ್ ನಲ್ಲಿ ಡಿಎಸ್ಸಿ, ಆರ್.ಎಂ, ಕಲೆಕ್ಷನ್ ಹುದ್ದೆಗೆ ಪಿಯುಸಿ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು.

ಹೆಡ್ ಹಿಲ್ಡ್ ಹೈ ಫೌಂಡೇಶನ್ ದಲ್ಲಿ ಬಿಪಿಓ, ಐಟಿ, ಮ್ಯಾನ್ಯುಫಾಕ್ಟರಿಂಗ್ ರಿಟೇಲ್, ಬ್ಯಾಂಕಿಂಗ್, ಸೇಲ್ಸ್ ಹುದ್ದೆಗೆ ಎಸ್.ಎಸ್.ಎಲ್.ಸಿ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು. ಮುತ್ತುಟ್ ಫೈನಾನ್ಸ್ ದಲ್ಲಿ ಇಂಟರನ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇಪದವಿ ಪಾಸಾಗಿರಬೇಕು. ಪ್ರೋಬೇಷನರಿ ಆಫೀಸರ್ ಹುದ್ದೆಗೆ ಎಂಬಿಎ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 30 ವಯೋಮಾನದೊಳಗಿರಬೇಕು.

ಕಿಯಾ ಮೋಟರ್ಸ್ದಲ್ಲಿ ಹೆಚ್.ಆರ್. ಎಕ್ಸಿಕ್ಯೂಟಿವ್ ಮ್ಯಾನೇಜರ್ ಹುದ್ದೆಗೆ ಎಂಬಿಎ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳು ಮಾತ್ರ ಎರಡು ವರ್ಷಗಳ ಅನುಭವ ಹೊಂದಿರಬೇಕು. ಟ್ರೇನಿ ಕೇಂದ್ರ ಮ್ಯಾನೇಜರ್ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಪಿಯುಸಿ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು. ಸರ್ವಿಸ್ ಮ್ಯಾನೇಜರ್ ಹುದ್ದೆಗೆ ಡಿಪ್ಲೋಮಾ (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್ (ಬಯೋಡಾಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ08472 274846, 8003343944 ಗೆ ಬೆಳಗ್ಗೆ 10 ರಿಂದ ಸಾಯಂಕಾಲ 5 ರವರೆಗೆ ಸಂಪರ್ಕಿಸಲು ಕೋರಲಾಗಿದೆ.

Application invited for post ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೆಯುಐಡಿಎಫ್ಸಿನಿಗಮದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯಡಿ ಕೇಂದ್ರ ಕಚೇರಿ ಬೆಂಗಳೂರು ಹಾಗೂ ಯೋಜನಾ ಅನುಷ್ಠಾನ ಘಟಕ ಹುಬ್ಬಳ್ಳಿ, ಬೆಂಗಳೂರು, ಕಲಬುರಗಿಯಲ್ಲಿ ಖಾಲಿಯಿರುವ 10 ಹುದ್ದೆಗಳಿಗೆ ಹೆಚ್.ಆರ್. ಪಾಲಿಸಿ ಅನ್ವಯ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಹಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕೆಯುಡಬ್ಲೂಎಸ್ಎಂಪಿ , ಕೆಯುಐಡಿಎಫ್ಸಿ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಇದನ್ನೂ ಓದಿ ನಿಮ್ಮ ಜಮೀನಿನ ಮೇಲೆ ಸಾಲವೆಷ್ಟಿದೆ? ಇಲ್ಲೇ ಚೆಕ್ ಮಾಡಿ

(ಹೈದ್ರಾಬಾದ್ ಕರ್ನಾಟಕ ಅಭ್ಯರ್ಥಿಗಳಿಗಂ ಮೀಸಲಿರಿಸಿದ 1 ಹುದ್ದೆ ಹಾಗೂ ಹೈದ್ರಾಬಾದ್ ಕರ್ನಾಟಕ ಮೀಸಲಾತಿ ಹೊರತುಪಡಿಸಿದ 9 ಹುದ್ದೆಗಳು)  ಸೇರಿದಂತೆಒಟ್ಟು 10 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅನುಭವ, ವೇತನ, ಭತ್ಯೆಗುತ್ತಿಗೆ ನೇಮಕಾತಿ ಷರತ್ತು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ಅಧೀಕೃತ ವೆಬ್ಸೈಟ್ ದಿಂದ ಪಡೆಯಬಹುದು.

ಅರ್ಹ ಅಭ್ಯರ್ಥಿಗಳು ನಿಗಮದ www.kuidfc.com/carees

ರ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ  ಡಿಸೆಂಬರ್ 19 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಖುದ್ದಾಗಿ ಅಥವಾ ಅಂಚೆ ಕೋರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ವಿದ್ಯಾರ್ಹತೆ, ಅನುಭವ ಇತರೆ ಸಂಬಂಧಪಟ್ಟ ದಾಖಲೆಗಳನ್ನು ಅರ್ಜಿಗಳೊಂದಿಗೆ ಅಪ್ಲೋಡ್ ಮಾಡದಿರುವ ಅಪೂರ್ಣ ಅರ್ಜಿಗಳನ್ನು ಹಾಗೂ ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ನೇಮಕಾತಿ ವಿಷಯದಲ್ಲಿ  ಸಂಸ್ಥೆಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Leave a Comment