ಭತ್ತ ಬೆಳೆಯುವ (paddy farmer) ರೈತರಿಗಿಲ್ಲಿದೆ ಸಂತಸದ ಸುದ್ದಿ.  ಕಡಿಮೆ ಜಮೀನಿಲ್ಲಿ ಹೆಚ್ಚು ಇಳುವರಿ ಪಡೆದ ರೈತರಿಗೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕೃಷಿ ಇಲಾಖೆ ವತಿಯಿಂದ ಪ್ರಸ್ತುತ ಮಂಗಳೂರು ಜಿಲ್ಲೆಯ ಭತ್ತ ಬೆಳೆಗಾರರಲ್ಲಿ ಉತ್ಪಾದನಾ ಮನೋಭಾವ ಬೆಳೆಸುವ ಉದ್ದೇಶದಿಂದ ಹೆಚ್ಚು ಇಳುವರಿ ಪಡೆದ ರೈತರಿಗೆ ತಾಲೂಕು, ಜಿಲ್ಲೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ರೈತರು ಕನಿಷ್ಟ ಒಂದು ಎಕರೆ ಜಮೀನಿನಲ್ಲಿ ಭತ್ತ ಬೆಳೆದಿರಬೇಕು. ಸ್ವಂತ ಅಥವಾ ಸಾಮಾನ್ಯ ವ್ಯವಹಾರಿಕ ಅಧಿಕಾರ ಮಾಲಿಕರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿವವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 0824-2423601 ಗೆ ಸಂಪರ್ಕಿಸಬಹುದು.

ಇತ್ತೀಚೆಗೆ ರೈತರು ಕೃಷಿಯ ಕಡೆ ಒಲವು ಕಡಿಮೆಗೊಳಿಸಿದ್ದಾರೆ. ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿರುವುದರಿಂದ ಕೃಷಿ ಮಾಡುವವರ ಸಂಖ್ಯೆಯೂ ಕಡಿಮೆಯಾಗಿದೆ. ಕೊರೋನಾ ಲಾಕ್ಡೌನ್ ದಿಂದಾಗಿ ಮತ್ತೆ ನಗರ ಪ್ರದೇಶಗಳಿಂದ ರೈತರು ಹಳ್ಳಿಕಡೆ ಬರುತ್ತಿದ್ದಾರೆ. ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ಭತ್ತ ಬೆಳೆಯುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ಜಿಲ್ಲೆಯ ಆಸಕ್ತ ರೈತರು ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ (Krishi Pandit award)

ಕೃಷಿ ಇಲಾಖೆಯು ಪ್ರಸ್ತುತ ಸಾಲಿನ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಅರ್ಜಿಗಳನ್ನು ಮಂಗಳೂರಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

ರಾಜ್ಯ ಮತ್ತು ಕೃಷಿ ಕ್ಷೇತ್ರದಲ್ಲಿ ನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಸಂಶೋಧನೆ ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಗಳ ಝಿರಾಕ್ಸ್ ಫೊಟೊಗ್ರಾಫ್, ಸಿಡಿಗಳನ್ನು ಲಗತ್ತಿಸಬೇಕು.

ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕ ಕಚೇರಿ ದೂರವಾಣಿ ಸಂಖ್ಯೆ 0824-2423601ಗೆ ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *