ಯುವನಿಧಿ ಯೋಜನೆಗೆ ಇಲ್ಲೇ ನೋಂದಣಿ ಮಾಡಿ

Written by Ramlinganna

Updated on:

Application invited for yuvanidhi  ಯುವ ನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಕ ಯುವತಿಯರು ನೋಂದಣಿ ಮಾಡಿ ಪ್ರತಿ ತಿಂಗಳು 1500 ರಿಂದ 3000 ರೂಪಾಯಿ ಪಡೆಯಬಹುದು.

ಹೌದು, ಯುವಕ ಯುವತಿಯರು ಈ ಕೆಳಗಿನ ಲಿಂಕ್ ಬಳಸಿ ಆನ್ಲೈನ್ ನಲ್ಲೇ ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ನೋಂದಣಿ ಮಾಡಲು ಯಾವ ಯಾವ ದಾಖಲೆ ಬೇಕು? ಅರ್ಹತೆಗಳೇನು ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ತಮಗೆಲ್ಲಾ ಗೊತ್ತಿದ್ದ ಹಾಗೆ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮೀ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಇಂದಿನಿಂದ ಯುವನಿಧಿ ಯೋಜನೆಗೆ ಚಾಲನೆ ದೊರೆತಿದೆ ನಿರುದ್ಯೋಗ ಯುವಕ ಯುವತಿಯರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು.

ಯಾರು ಯಾರು ಅರ್ಜಿ ಸಲ್ಲಿಸಲು ಅರ್ಹರು?

ಸ್ವಯಂ ಉದ್ಯೋಗ ಹೊಂದಿಲ್ಲದವರು ಹಾಗೂ ಉನ್ನತ ವಿಧ್ಯಾಭ್ಯಾಸ ಮುಂದುವರೆಸದೆ ಇರುವವರು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ ನನ್ನ ಖಾತೆಗೆ ಜಮೆಯಾಯಿತು ಬೆಳೆ ಹಾನಿ ಪರಿಹಾರ – ನಿಮಗೆಷ್ಟು ಜಮೆ? ಚೆಕ್ ಮಾಡಿ

2023 ರಲ್ಲಿ ಪದವಿ / ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಕನಿಷ್ಟ 6 ತಿಂಗಳುವರೆಗೆ ಸರ್ಕಾರಿ ಖಾಸಗಿ ಉದ್ಯೋಗ ಹೊಂದಿಲ್ಲದವರು ಮತ್ತು ಕರ್ನಾಟಕದಲ್ಲಿ ವಾಸವಿರುವವರು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

Application invited for yuvanidhi  ನೋಂದಣಿಗೆ ಬೇಕಾಗುವ ದಾಖಲೆಗಳು

ಯುವ ನಿಧಿ ಯೋಜನೆಗೆ ನೋಂದಣಿ ಮಾಡಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪದವಿ ಪ್ರಮಾಣ ಪತ್ರ ಸಲ್ಲಿಸಬೇಕು. ಆಧಾರ್ ಕಾರ್ಡ್, ವಾಸಸ್ಥಳ ಪ್ರಮಾಣ ಪತ್ರ ಸಲ್ಲಿಸಬೇಕು.

ಏನಿದು ಕರ್ನಾಟಕ ಯುವ ನಿಧಿ ಯೋಜನೆ?

ಕರ್ನಾಟಕ ಯುವ ನಿಧಿ ಯೋಜನೆಯನ್ನು ರಾಜ್ಯದ ಪದವೀಧರ / ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತ ಯುವ ಜನರಿಗೆ ನಿರುದ್ಯೋಗ ಭತ್ಯೆ ನೀಡಲು ಈ ಯೋಜನೆಯನ್ನು ಘೋಷಣೆ ಮಾಡಿದೆ.

ಯಾರಿಗೆ ಎಷ್ಟು ಹಣ ಸಿಗಲಿದೆ?

2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3000 ರೂಪಾಯಿ (ಮೂರು ಸಾವಿರ ರೂಪಾಯಿಗಳು ಮಾತ್ರ) ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ (ಒಂದು ಸಾವಿರದ ಐದುನೂರು ರೂಪಾಯಿಗಳು ಮಾತ್ರ) ರಂತೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವು ಈಗಾಗಲೇ ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.

ಯುವ ನವಿಧಿ ಯೋಜನೆಯ ಕೆಲವು ಷರತ್ತು ಹಾಗೂ ಅರ್ಹತೆಯ ಮಾನದಂಡಗಳ ಮಾಹಿತಿ

2023  ರ ವರ್ಷದಲ್ಲಿ ತೇರ್ಗಡೆಯಾಗಿ. ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಸಿಗದೆಯಿರುವ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್ಗಗಳು ಸೇರಿದಂತೆ) ಪ್ರತಿ ತಿಂಗಳು 3000 ರೂಪಾಯಿ (ಮೂರು ಸಾವಿರ ರೂಪಾಯಿ ಮಾತ್ರ) ನಿರುದ್ಯೋಗ ಭತ್ತೆ ನೀಡಲಾಗುವುದು. ಅದೇ ರೀತಿ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1500 ರೂಪಾಯಿ (ಒಂದು ಸಾವಿರದ ಐದನೂರು ರೂಪಾಯಿಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರಿಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು ಯುವ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಸರ್ಕಾರ ಆದೇಶಿಸಿದೆ.

ಯೋಜನೆ ಕುರಿತಂತೆ ಹೆಚ್ಚಿನ ಮಾಹಿತಿ ಪಡೆಯಲು 1800 599 9918 ಗೆ ಸಂಪರ್ಕಿಸಲು ಕೋರಲಾಗಿದೆ.

ಯುವನಿಧಿ ಯೋಜನೆಗೆ ನೋಂದಣಿ ಮಾಡಲು ಈ

https://sevasindhugs.karnataka.gov.in

ಲಿಂಕ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಯುವನಿಧಿ ಯೋಜನೆಯ ಷರತ್ತು ಹಾಗೂ ನಿಬಂಧನೆಗಳು

ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೆ ಇರುವ ಕನ್ನಡಿಗರಿಗೆ ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗಳಿಸಲಾಗುವುದು. ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲಾಗುವುದು.

ಒಂದು ವೇಳೆ 2 ವರ್ಷದೊಳಗೆ ಉದ್ಯೋಗ ದೊರೆತರೆ ಅವರನ್ನು ಯೋಜನೆಯ ಫಲಾನುಭವಿ ಪಟ್ಟಿಯಿಂದ ಹೊರಗಿಡಲಾಗುತ್ತದೆ.

Leave a Comment