ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ನೀಡಲು ಅರ್ಜಿ ಆಹ್ವಾನ

Written by Ramlinganna

Updated on:

incentives who have passed first class ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ರೂಪಾಯಿಯವರೆಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ.

 incentives who have passed first class ಯಾವ ವಿದ್ಯಾರ್ಥಿಗಳಿಗೆ ಎಷ್ಟು ಪ್ರೋತ್ಸಾಹ ಧನ ನೀಡಲಾಗುವುದು?

ಪಿಯುಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 20,000 ರೂಪಾಯಿ ನೀಡಲಾಗುವುದು. ಪದವಿ (ಡಿಗ್ರಿ) ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 25000 ರೂಪಾಯಿ ನೀಡಲಾಗುವುದು. ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30,000 ರೂಪಾಯಿ ನೀಡಲಾಗುವುದು. ಕೃಷಿ, ಎಂಜಿನೀಯರಿಂಗ್, ವೈದ್ಯಕೀಯ, ಪಶುವೈದ್ಯಕೀಯ ವಿದ್ಯಾರ್ಥಿಗಳಿಗೆ 35,000 ರೂಪಾಯಿ  ಪ್ರೋತ್ಸಾಹಧನ ನೀಡಲಾಗುವುದು.

ಅರ್ಜಿ ಎಲ್ಲಿ ಸಲ್ಲಿಸಬೇಕು?

ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು

https://sw.kar.nic.in/swprizemoney/Home.aspx?ReturnUrl=%2fswprizemoney%2f

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸಮಾಜ ಕಲ್ಯಾಣ ಇಲಾಖೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪಿಯುಸಿ, ಡಿಗ್ರಿ, ಎಂಎ, ಎಂಎಸ್.ಸಿ ಹಾಗೂ ಅಗ್ರಿಕಲ್ಚರ್, ಇಂಜಿನಿಯರಿಂಗ್, ವೆಟರನರಿ, ಮೆಡಿಕಲ್ ವಿದ್ಯಾರ್ಥಿಗಳಿಗೆ ಎಷ್ಟು ಪ್ರೋತ್ಸಾಹಧನ ನೀಡಲಾಗುವುದು ಎಂಬ ಮಾಹಿತಿ ಕಾಣುತ್ತದೆ. ಅಲ್ಲಿ ಕಾಣುವ ಆನ್ಲೈನ್ ಅರ್ಜಿ/Online Application (passed in 2022 only) ಮೇಲೆ ಕ್ಲಿಕ್ ಕ್ಲಿಕ್ ಮಾಡಬೇಕು. ಆಗ ಆನ್ಲೈನ್ ಎಸ್.ಎಸ್.ಎಲ್ಸಿ ಬೋರ್ಡ್ ಆಯ್ಕೆ ಮಾಡಿಕೊಳ್ಳಬೇಕು. ಎಸ್.ಎಸ್.ಎಲ್ಸಿಪರೀಕ್ಷೆ ಪಾಸಾದ ವರ್ಷ ಆಯ್ಕೆ ಮಾಡಿಕೊಳ್ಳಬೇು. ರೆಜಿಸ್ಟರ್ ನಂಬರ್ ಜಾತಿ, ವಿದ್ಯಾರ್ಥಿಯ ಹೆಸರು ಆಧಾರ್ ಕಾರ್ಡ್ ನಲ್ಲಿರುವಂತೆ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡನಂತರ ಅರ್ಜಿಯನ್ನುಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬೇಕು. ಅರ್ಜಿಯಲ್ಲಿ ಏನಾದರೂ ತಪ್ಪು ಮಾಹಿತಿ ಟೈಪ್ ಆಗಿದ್ದರೆ ತಿದ್ದುಪಡಿ ಮಾಡುವ ಅವಕಾಶವೂ ಇದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಸ್ಟೇಟಸ್ ಸಹ ಚೆಕ್ ಮಾಡಬಹುದು.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಏನು ಮಾಡಬೇಕು?

ವಿದ್ಯಾರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ 4 ದಿನಗಳೊಳಗೆ ಡೌನ್ಲೋಡ್ ಮಾಡಿದ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರದ ದೃಢೀಕೃತ ಝರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಝರಾಕ್ಸ್, ಮೂಲ ಅಂಕಪಟ್ಟಿಗಳ ದೃಢೀಕೃತ ಝರಾಕ್ಸ್ ಪ್ರತಿ, ಎಲ್ಲಾ ಸೆಮಿಸ್ಟರ್ ಗಳ ಅಂಕಪಟ್ಟಿ, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿಯನ್ನು ಕಾಲೇಜು ಪ್ರಾಂಶುಪಾಲರ ಸಹಿ ಹಾಗೂ ಮೊಹರಿನೊಂದಿಗೆ ಅರ್ಜಿ ಸಲ್ಲಿಸಬೇಕು.  ಈ ದಾಖಲಾತಿಗಳನ್ನುಆಯಾ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಗೆ  ಸಲ್ಲಿಸಬಹುದು.

ಇದನ್ನೂ ಓದಿ ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ

ಅರ್ಜಿಯನ್ನು ಅಕ್ಟೋಬರ್ 31 ರೊಳಗಾಗಿಯೇಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಅರ್ಜಿ ಸಲ್ಲಿಸವಾಗ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿ ಭರ್ತಿ ಮಾಡಬೇಕು.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಸಮಾಜ ಕಲ್ಯಾಣ ಇಲಾಖೆ ವೆಬ್ ಸೈಟ್ ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆಭೇಟಿ ನೀಡಬಹುದು.

Leave a Comment