ಕಾರ್, ಜೀಪ್, ಬಸ್ ಚಾಲನೆ ಮಾಡಲಿಚ್ಚಿಸುವ ಅಭ್ಯರ್ಥಿಗಳಿಗಿಲ್ಲಿದೆ. ಸಂತಸದ ಸುದ್ದಿ.  30 ದಿನಗಳ ಕಾಲ ಚಾಲನಾ ತರಬೇತಿಯೊಂದಿಗೆ ಉಚಿತ ಊಟ, ವಸತಿ ಸೌಲಭ್ಯ ಹಾಗೂ  ವಾಹನ ಚಾಲನಾ ಪರವಾನಗಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ 2022-23ನೇ ಸಾಲಿಗೆ ಪರಿಶಿಷ್ಟ ಪಂಗಡದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ವಾಹನ (ಕಾರ್/ಜೀಪ್) ಹಾಗೂ ಭಾರಿವಾಹನ ಬಸ್ ಚಾಲನಾ ತರಬೇತಿ ಜೊತೆಗೆವಾಹನ ಚಾಲನಾ ಪರವಾನಗಿ ನೀಡಲು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದೊಂದಿಗೆ ನಡೆಯುತ್ತಿದೆ.

ಲಘು ವಾಹನ ಚಾಲನಾ ತರಬೇತಿಗೆ ಅರ್ಹತೆ

ಲಘು ವಾಹನ ಚಾಲನಾ ತರಬೇತಿಗೆ ಕನಿಷ್ಠ 18 ವರ್ಷ ವಯೋಮಿತಿ ತುಂಬಿರಬೇಕು. ಜನ್ಮದಿನಾಂಕದ ಬಗ್ಗೆ ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ) ಅಥವಾ ನೋಟರಿಯಿಂದ ಪ್ರಮಾಣ ಪತ್ರ ಪಡೆದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಪಾಸ್ಪೋರ್ಟ್ ಅಳತೆಯ 5 ಭಾವಚಿತ್ರವಿರಬೇಕು.

ಭಾರಿ ವಾಹನ ಚಾಲನಾ ತರಬೇತಿಗೆ ಅರ್ಹತೆ

ಭಾರಿ ವಾಹನ ಚಾಲನಾ ತರಬೇತಿಗೆ ಕನಿಷ್ಠ 20 ವರ್ಷ ವಯೋಮಿತಿ ತುಂಬಿರಬೇಕು. ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರೈಸಿರಬೇಕು.  ಜನ್ಮದಿನಾಂಕದ ಬಗ್ಗೆ ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ (ಟಿ.ಸಿ) ಅಥವಾ ನೋಟರಿಯಿಂದ ಪ್ರಮಾಣ ಪತ್ರ ಪಡೆದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಪಾಸ್ಪೋರ್ಟ್ ಅಳತೆಯ 5 ಭಾವಚಿತ್ರವಿರಬೇಕು.

ತರಬೇತಿ ನಡೆಯುವ ಸ್ಥಳ

ಲಘುವಾಹನ ಹಾಗೂ ಭಾರಿ ವಾಹನ ಚಾಲನಾ ತರಬೇತಿಯು ಬೆಂ. ಮ. ಸಾ.ಸಂ ತರಬೇತಿ ಕೇಂದ್ರ, ವಡ್ಡರಹಳ್ಳಿ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ 562130 ರಲ್ಲಿ ನಡೆಯಲಿದೆ.

ಇದನ್ನು ಓದಿ : ಮೊಬೈಲ್ ನಲ್ಲೇ ಜಮೀನಿನ ಅಳತೆ ಮಾಡುವುದು ಹೇಗೆ? ಇಲ್ಲಿದೆ ರೈತರಿಗೆ ಸಂಪೂರ್ಣ ಮಾಹಿತಿ

ತರಬೇತಿಯು 30 ದಿನಗಳ ಕಾಲ ನಡೆಯುತ್ತದೆ. ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ, ವಸತಿ ಮತ್ತು ಊಟೋಪಚಾರದ ವ್ಯವಸ್ಥೆ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು ಆಯಾ ಜಿಲ್ಲಾ ನಿಗಮದ ಕಚೇರಿಗಳಿಂದ ಅರ್ಜಿಗಳನ್ನುಪಡೆದು ನಿಗದಿತ ದಿನಾಂಕದೊಳಗೆ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 7760991348, 7892529634, 8549060653, 6366267114, 7760979980, 080-22537481 ಗೆ ಸಂಪರ್ಕಿಸಲು ಕೋರಲಾಗಿದೆ.

ತರಬೇತಿ ಕುರಿತು ಪ್ರಕಟಣೆ ನೋಡಲು ಈ https://kmvstdcl.karnataka.gov.in/storage/pdf-files/Latest%20news/valmiki%20tender.pdf

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಡಿಎಫ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ಎಲ್ಲಾ ಜಿಲ್ಲಾ ಕಚೇರಿಯ ಮೊಬೈಲ್ ನಂಬರ್ ಗಳನ್ನು ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ  ನಂಬರ್ ಗಳಿಗೆ ಕರೆ ಮಾಡಿ ಸಂಪರ್ಕಿಸಬಹುದು.

ಹಾಗೂ ವಿವರ ಮತ್ತು ಮಾಹಿತಿಯನ್ನು ನಿಗಮದ ವೆಬ್ಸೈಟ್

https://kmvstdcl.karnataka.gov.in/  ನಿಂದ ಪಡೆಯಬಹುದು. ಆನ್ಲೈನ್ ಹಾಗೂ ಆಫ್ಲೈನ್ ಅರ್ಜಿ ಸಲ್ಲಿಸುವ ದಿನಾಂಕ 7-04-2022 ರಿಂದ ಆರಂಭವಾಗಿ 20-04-2022 ರವರೆಗೆ ಮುಗಿಯುತ್ತದೆ  ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕದವರೆಗೆ ಕಾಯದೆ ಬೇಗನೆ ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *