ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

Written by Ramlinganna

Updated on:

Applications invited for sewing machine ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಪ್ರವರ್ಗ -1 , 2ಎ, 3ಎ, 3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ, ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಹಾಗೂ ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂಪಾಯಿಗಳಉ ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂಪಾಯಿ ಒಳಗಿರಬೇಕು. ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು.

ಇದನ್ನೂಓದಿ : ನಿಮ್ಮ ಹೊಲದ ಸರ್ವೆ ಟಿಪ್ಪಣಿ, ಪೋಡಿ ಟಿಪ್ಪಣಿ ಪುಸ್ತಕ ಮೊಬೈಲ್ ನಲ್ಲೇ ಚೆಕ್ ಮಾಡಿ

ಅರ್ಹ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧದು ಪೋರ್ಟ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 080 22374832, 7090400100, 7090400900 ಅಥವಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಕಲುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Applications invited for sewing machine ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.  ಪಡಿತರ ಚೀಟಿ ಇರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, ಮತ್ತು 3ಬಿ ಗೆ ಸೇರಿದವರಾಗಿರಬೇಕು. ಹೊಲಿಗೆ ಯಂತ್ರ ತರಬೇತಿ ಪ್ರಮಾಣ ಪತ್ರ ಇರುವುದು ಕಡ್ಡಾಯವಾಗಿದೆ.  ಅರ್ಜಿ ಸಲ್ಲಿಸುವಾಗ ಈ ದಾಖಲೆ ಸಲ್ಲಿಸಬೇಕು.

ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮುಖಾಂತರ ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅಗತ್ಯದಾಖಲೆಗಳೊಂದಿಗೆ ಫೆಬ್ರವರಿ 20 ರೊಳಗೆ ಆಯಾ ಜಿಲ್ಲೆಗಳಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಅರ್ಜಿ ಸಲ್ಲಿಸಬೇಕು.

ಮೈಸೂರು ಜಿಲ್ಲೆಯವರು 0821 2341194 ಗೆ ಸಂಪರ್ಕಿಸಲು ಕೋರಲಾಗಿದೆ.

ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕದ ಜಮೀನು ಯಾರ ಹೆಸರಿಗೆ ಎಷ್ಟು ಎಕರೆಯಿದೆ? ಮೊಬೈಲ್ ನಲ್ಲೆ ಚೆಕ್ ಮಾಡಿ

ಕೋಲಾರ ಜಿಲ್ಲೆಯವರು 9606066389 ಗೆ ಸಂಪರ್ಕಿಸಲು ಕೋರಲಾಗಿದೆ.

ಗದಗ ಜಿಲ್ಲೆಯವರು ಜಿಲ್ಲಾ ಕಚೇರಿಯ ದೂವರಾಣಿ ಸಂಖ್ಯೆ 08372 232327 ಗೆ ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ ಜಿಲ್ಲೆಯವರು 08472 278635 ಗೆ ಸಂಪರ್ಕಿಸಲು ಕೋರಲಾಗಿದೆ.

ವಿಜಯಪುರ ಜಿಲ್ಲೆಯವರು ಹೊಲಿಗೆ ಯಂತ್ರ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ 08352 258128 ಗೆ ಸಂಪರ್ಕಿಸಲು ಕೋರಲಾಗಿದೆ.

ಇದೇ ರೀತಿ ಇತರ ಜಿಲ್ಲೆಗಳಿಂದಲೂ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸೇವಾಸಿಂಧು ಮುಖಾಂತರ ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಎರಡು ಸೆಟ್ ಗಳಲ್ಲಿ ಪ್ರಿಂಟ್ ತೆಗೆದುಕೊಳ್ಳಬೇಕು. ಒಂದು ಪ್ರತಿಯನ್ನು ನಿಮಗ ಕಚೇರಿಗೆ ಹೋಗಿ ಸಲ್ಲಿಸಿ ಸ್ವೀಕೃತಿ ಪಡೆಯುವುದನ್ನು ಮರೆಯಬಾರದು. ಈ ಹಿಂದೆ ಈ ಸೌಲಭ್ಯ ಪಡೆಯದ ಬಡವರಿಗೆ ಹೊಲಿಗೆ ಯಂತ್ರ ವಿತರಿಸಲಾಗುವುದು.  ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಹಾಗೂ ಸ್ವಾವಲಂಬಿಯಾಗಿ ಬದುಕಲು ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದೆ. ಅರ್ಹ ಮಹಿಳೆಯರು ಈ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.

Leave a Comment