ಮೀನುಗಾರಿಕೆ ಮಾಡಲಿಚ್ಚಿಸುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ರೈತರು ಮೀನುಗಾರಿಕೆ ಮಾಡಲು ಸಹಾಯಧನ ಪಡೆಯಬಹುದು. ಹೌದು, ಕೋಲಾರ, ಧಾರವಾಡ, ಮಡಿಕೇರಿ ಸೇರಿದಂತೆ ಇನ್ನಿತರ ಕಡೆ ಮೀನುಗಾರಿಕೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಕೋಲಾರ ಜಿಲ್ಲಾ ವಲಯದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ (ಬಲೆ) ಹಾಗೂ ಮೀನು ಮಾರುಕಟ್ಟೆಗಳ ನಿರ್ಮಾಣ ಸಹಾಯಧನ ನೀಡಲಾಗುವುದು. ಮೀನು ಮಾರಟಕ್ಕೆ ಸಹಾಯ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಕಾರ್ಯಕ್ರಮದಡಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮೀನುಗಾರರು ಸಂಬಂಧಿಸಿದ ತಾಲೂಕು ಮೀನುಗಾರಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೋಲಾರ ಮೀನುಗಾರಿಕೆ ಉಪ ನಿರ್ದೇಶಕರ ದೂರವಾಣಿ ಸಂಖ್ಯೆ 9740138511, ಕೋಲಾರ ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9964583932, ಮಾಲೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9972717346, ಮುಳಬಾಗಿಲು ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9482475770 , ಶ್ರೀನಿವಾಸಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9964583932, ಬೇತಮಂಗಲ (ಕೆಜಿಎಫ್ ಬಂಗಾರಪೇಟೆ) ಮೀನುಗಾರಿಕೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 9036991112 ಹಾಗೂ ಮೀನುಗಾರಿಕೆ ಸಹಾಯವಾಣಿ ಸಂಖ್ಯೆ 8277200300 ಗೆ ಸಂಪರ್ಕಿಸಬಹುದು ಎಂದು ಕೋಲಾರ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೀನುಮರಿ ಪಡೆಯಲು ಅರ್ಜಿ ಆಹ್ವಾನ
ಪ್ರತಿ ವರ್ಷದಂತೆ ಈ ವರ್ಷವೂ 2022-23ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗದಿಪಡಿಸಿದ ದರಗಳಲ್ಲಿ ಮಡಿಕೇರಿ ತಾಲೂಕಿನ ರೈತರು ಬಿತ್ತನೆಗೆ ಯೋಗ್ಯವಾದ, ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದು.
ಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ.
ಹೆಚ್ಚಿ ಮಾಹಿತಿಗಾಗಿ ಮಡಿಕೇರಿ ತಾಲೂಕು ವಿನಯ 9769070850, ಸೋಮವಾರಪೇಟೆ ನಿರ್ವಾಣಿ 9448918782, 7338218782, ವಿರಾಜಪೇಟೆ ಬಿ.ಕೆ. ನಿಶಾಂತ್ 9731363143 ಮೀನುಗಾರಿಕೆ ಇಲಾಖಾ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೀನುಗಾರರಿಗೆ ವಿವಿದ ಯೋಜನೆಗಳಡಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ಮೀನುಗಾರಿಕೆ ಇಲಾಖೆಯ ವತಿಯಿಂದ ಒಳನಾಡು ಮೀನುಕೃಷಿ ಮತ್ತು ಮೀನುಗಾರಿಕೆ ಅಭಿವೃದ್ಧಿಗಾಗಿ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಗಳು ಹಾಗೂ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗಳಡಿ ಧಾರವಾಡ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೆರೆಗಳು ಮತ್ತು ಜಲಾಶಯದ ವ್ಯಾಪ್ತಿಯ ವೃತ್ತಿಪರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟಪಂಗಡದ ಮೀನುಗಾರರು, ಮೀನು ಕೃಷಿಕರಿಗೆ ಮೀನು ಹಿಡಿಯುವ ಬಲೆ ಅಥವಾ ಫೈಬರ್ ಗ್ಲಾಸ್ ಹರಿಗೋಲು ಖರೀದಿಗೆ ಸಹಾಯಧನ ನೀಡಲಾಗುವುದು. ೀಡಲಾಗುವುದು.ಕೆರೆ ಜಲಾಶಯಗಳ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ನೆರವು, ಕೆರೆಯನ್ನು ಗುತ್ತಿಗೆ ಪಡೆದ ಮೀನುಗಾರಿಕೆ ಸಹಕಾರಿ ಸಂಘಗಳಿಗೆ ಮೀನುಮರಿ ಬಿತ್ತನೆಗೆ ನೆರವಿಗೆ ಸಹಾಯಧನ ನೀಡಲಾಗುವುದು.
ಸಾಮಾನ್ಯ ವರ್ಗದವರಿಗೆ ಶೇ. 40 ಹಾಗೂ ಮಹಿಳೆಯರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆಶೇ. 60 ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ಜುಲೈ 15 ರೊಳಗಾಗಿ ತಾಲೂಕು ಅಧಿಕಾರಿಗಳ ಮೂಲಕ ಅರ್ಜಿಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆ ದೂರವಾಣಿ 0836 2447416, 9845453065, 8880483957, 7411278429 ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೀನುಗಾರಿಕೆಗೆ ಪರವಾನಗಿ ಪಡೆಯಲು ಅರ್ಜಿ ಆಹ್ವಾನ
ಪ್ರಸ್ತುತ ಚಾಲ್ತಿಯಲ್ಲಿರುವ ಒಳನಾಡು ಮೀನುಗಾರಿಕೆ ಕಾರ್ಯನೀತಿಯನ್ವಯ ಮೀನುಗಾರಿಕೆ ಇಲಾಖೆಯ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕೆರೆಗಳ, ಜಲಸಂಪನ್ಮೂಲಗಳ ಮೀನುಪಶುವಾರು ಹಕ್ಕು ಮೀನುಗಾರರಿಗೆ ಸಹಕಾರ ಸಂಘಗಳಿಗೆ ರೈತ ಮೀನುಗಾರ ಉತ್ಪಾದಕ ಸಂಸ್ಥೆಗಳಿಗೆ ಗುತ್ತಿಗೆ ಹಾಗೂ ಮೀನುಗಾರರಿಗೆ ಪರವಾನಗಿ ಮೂಲಕ ಮೀನುಗಾರಿಕೆ ನಡೆಸಲು ಅವಕಾಶ ನೀಡಲಾಗಿದೆ.
ಜಲಸಂಪನ್ಮೂಲಗಳ ಹೊರತುಪಡಿಸಿ ಉಳಿದ ಇಲಾಖಾ ವ್ಯಾಪ್ತಿಯ ಜಲಸಂಪನ್ಮೂಲಗಳನ್ನು ಇ-ಟೆಂಡರ್ ಪ್ರಕ್ರಿಯೆ ಮೂಲಕ 2022-23 ನೇ ಸಾಲಿನಿಂದ ವಿಲೇವಾರಿ ಮಾಡಲು ಸರ್ಕಾರವು ಆದೇಶ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಹಾಗೂ ಸಹಾಯವಾಣಿ ಕೇಂದ್ರ 8277200300 ಕ್ಕೆ ಅಥವಾ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ತಿಳಿಸಿದ್ದಾರೆ.