ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ರೈತರಿಗೆ 2.25 ಲಕ್ಷ ರೂಪಾಯಿಯವರೆಗೆ ವೆಚ್ಚದಲ್ಲಿ ಉಚಿದವಾಗಿ ಬೋರವೆಲ್ ಕೊರೆಯಲು ಅರ್ಜಿ ಆಹ್ವಾನಿಸಲಾಗದೆ.
ಹೌದು, ಈ ಯೋಜನೆಯಡಯಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಉಚಿತವಾಗಿ ಬೋರ್ವೆಲ್ ಕೊರೆಯಲು 2.25 ಲಕ್ಷ ರೂಪಾಯಿ ನೀಲಾಗುವುದು.
ಈ ಯೋಜನೆಯಡಿಯಲ್ಲಿ ಕನಿಷ್ಠ 1.20 ಎಕರೆಯಿಂದ ಗರಿಷ್ಠ 5 ಎಕರೆ ಜಮೀನು ಹೊಂದಿರುವ ರೈತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ರೈತರಿಗೆ 2.25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿಗಮದ ವತಿಯಿಂದ ಕೊಳವೆ ಬಾವಿಕೊರೆಸಿ ಪಂಪು ಮೋಟಾರು ಹಾಗೂ ವಿದ್ಯುದ್ದೀಕರಣಗೊಳಿಸಲಾಗುವುದು.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅರ್ಜಿದಾರರು ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲ ಇಂಡಿಯನ್ ಜನಾಂಗದವರಾಗಿರಬೇಕು. ಅರ್ಜಿ ಸಲ್ಲಿಸಬಯಸುವ ಫಲಾನುಭವಿಯು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ರೈತರಿಗೆ 1 ಎಕರೆ 20 ಗುಂಟೆ ಎಕರೆಯಿಂದ 5 ಎಖರೆಯವರೆಗೆ ಖುಷ್ಕಿ ಜಮೀನು ಇರಬೇಕು. ರೈತರು ವ್ಯವಸಾಯ ವೃತ್ತಿಯನ್ನೇ ಅವಲಂಬಿಸಿರಬೇಕು. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉುಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಕಡಿಮೆ ಇರುವುದರಿಂದ ಗರಿಷ್ಠ 1 ಎಕರೆ ಜಮೀನು ಜಮೀನುಹೊಂದಿರಬೇಕು.
ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 96 ರೂಪಾಯಿ ಮೀರಬಾರದು.ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
ಅರ್ಜಿದಾರರು ಯಾವ ಯಾವ ದಾಖಲೆ ಸಲ್ಲಿಸಬೇಕು?
ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಇತ್ತೀಜಿನ ಪಹಣಿ ಹೊಂದಿರಬೇಕು. ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಪ್ರತಿ ಇರಬೇಕು. ಭೂ ಕಂದಾಯ ಪಾವತಿಸಿದ ರಸೀದಿ ಇರಬೇಕು. ಸ್ವಯಂ ಘೋಷಣೆ ಪತ್ರ ಇರಬೇಕು. ಖಾತ್ರಿ ನೀಡುವವರ ಸ್ವಯಂ ಘೋಷಣೆ ಪತ್ರ ಇರಬೇಕು.
ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಹೇಗೆ ಸಲ್ಲಿಸಬೇಕು?
ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ
https://kmdconline.karnataka.gov.in/Portal/login
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿನಿಗಮ ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಕಿ ಸಲ್ಲಿಸು ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಅಲ್ಲಿಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.
ಅರ್ಜಿದಾರರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿರುವವರು ಮತ್ತೆ ಸೌಲಭ್ಯ ಪಡೆದಿರುವವರು ಮತ್ತೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. ಅರ್ಜಿದಾರರ ಬ್ಯಾಂಕ್ ಪಾಸ್ ಪುಸ್ತಕದ ಝಿರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಲಿಂಕ್ ಮಾಡಿರಬೇಕು.
ಹೆಚ್ಚಿನ ಮಾಹಿತಿಗಾಗಿ ರೈತರು
https://kmdc.karnataka.gov.in/kn
ಅಥವಾ ಆಯಾ ಜಿಲ್ಲೆಗಳಲ್ಲಿರುವ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕಚೇರಿಗೆ ಸಂಪರ್ಕಿಸಬೇಕು.
ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ ಅಥವಾ ಗಂಗಾ ಕಲ್ಯಾಣ ಯೋಜನೆ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಪಡೆಯಬೇಕಾದರೆ 080 22860999 ಗೆ ಬೆಳಗ್ಗೆ 10 ರಿಂದ ಸಾಯಂಕಾಲ 5.30 ರವರೆಗೆ ಕರ್ನಾಟಕ ಸರ್ಕಾರದ ರಜಾ ದಿನಗಳನ್ನು ಹೊರತುಪಡಿಸಿ ಕರೆ ಮಾಡಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದವರೆಗೆ ಕಾಯದೆ ಇಂದೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು.