ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಟ್ರ್ಯಾಕ್ಟರ್, ಪವರ್ ಟಿಲ್ಲರ್ ಸೇರಿದಂತೆ ತೋಟಗಾರಿಕೆ ಬೆಳೆ ವಿಸ್ತರಣೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಹಣ್ಣಿನ ಬೆಳೆಗಳಾದ ಅಂಗಾಂಶ ಬಾಳೆ, ಗಡ್ಡೆಬಾಳೆ, ಹೈಬ್ರಿಡ್ ತರಕಾರಿ, ಕಾಳುಮೆಣಸು, ಹೊಸ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಾಗುವುದು.
ತೋಟಗಾರಿಕೆಯಲ್ಲಿ ಯಾಂತ್ರೀಕರಣಕ್ಕಾಗಿ 20 ಪಿಟಿಒಹೆಚಪಿಗಿಂತ ಕಡಿಮೆ ಸಾಮರ್ಥ್ಯದ ಟ್ರ್ಯಾಕ್ಟರ್ ಮತ್ತು 8 ಪಿಟಿಒಎಚಪಿ ಗಿಂತ ಕಡಿಮೆ ಸಾಮರ್ಥ್ಯದ ಟಿಲ್ಲರ್ ಖರೀದಿಗೆ ಕೊಯ್ಲೋತ್ತರ ನಿರ್ವಹಣೆಗಾಗಿ ಪ್ಯಾಕ್ ಹೌಸ್, ಹಣ್ಣು ತರಕಾರಿ ಮಾರಾಟ ಮಾಡಲು ತಳ್ಳುವ ಗಾಡಿ (ಸ್ಟ್ಯಾಟಿಕ್ ಮೊಬೈಲ್ ವೆಂಡಿಂಗ್ ಕಾರ್ಟ್) ಖರೀದಿಸಲು ಸಹಾಯಧನ ನೀಡಲಾಗುವುದು. ತೋಟಗಾರಿಕೆ ಇಲಾಖೆಯಿಂದ ಲಭ್ಯತೆಯ ಆಧಾರದ ಮೇಲೆ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ನೀಡಲಾಗುವುದು.
ಏನಿದು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ?
ದೇಶದ ರೈತರ ಆದಾಯ ಮತ್ತು ಜೀವನಮಟ್ಟ ಹೆಚ್ಚಿಸಲು ಕೃಷಿ ಚಟುವಟಿಕೆಗೆ ಬೇಕಾಗುವ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿಯಲ್ಲಿ ನೀಡಲು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ತೋಟಗಾರಿಕೆಯಲ್ಲಿ ಯಂತ್ರೋಪಕರಣಗಳ ಬಳಕೆಯನ್ನು ಉತ್ತೇಜಿಸಲು ಇಲಾಖಾ ಮಾರ್ಗಸೂಚಿಯನ್ವಯ ಯಂತ್ರೋಪಕರಣಗಳನ್ನು ಖರೀದಿಸಲು ರೈತ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.
ಸಬ್ಸಿಡಿ ಪಡೆಯಲು ಯಾವ ಯಾವ ದಾಖಲೆ ಬೇಕು?
ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಇಚ್ಚಿಸುವ ರೈತರು ಸ್ವಂತ ಜಮೀನು ಹಾಗೂ ನೀರಾವರಿ ಸೌಲಭ್ಯ ಹೊಂದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು.ಅರ್ಜಿ ಬರೆದು ಅದರಲ್ಲಿ ಮೊಬೈಲ್ ನಂಬರ್ ನಮೂದಿಸಬೇಕು. ಜಮೀನಿನ ಪಹಣಿ ಹೊಂದಿರಬೇಕು, ಬ್ಯಾಂಕ್ ಪಾಸ್ ಬುಕ್ ಹಾಗೂ ಫೊಟೋ ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ರೈತರು ಯಾವ ಕೃಷಿ ಯಂತ್ರೋಪಕರಣಕ್ಕಾಗಿ ಅರ್ಜಿ ಸಲ್ಲಿಸುತ್ತಾರೋ ಆ ಅರ್ಜಿ ಹೊಂದಿರಬೇಕು. ರೈತರು ಫ್ರೂಟ್ಸ್ ಐಡಿ ಹೊಂದಿರಬೇಕು. ಒಂದುವೇಳೆ ರೈತರು ಜಮೀನಿನ ಪಹಣಿ ಜಂಟಿಯಾಗಿದ್ದರೆ ಒಪ್ಪಿಗೆ ಪ್ರಮಾಣ ಪತ್ರ ಕಡ್ಡಾಯವಾಗಿ ಇರಬೇಕು. ಈ ಎಲ್ಲಾ ದಾಖಲಾತಿಗಳೊಂದಿಗೆ ರೈತರು ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬಹುದು.
ಆಸಕ್ತ ರೈತರು ದಾಖಲಾತಿಗಳೊಂದಿಗೆ ಜುಲೈ 10 ರೊಳಗಾಗಿ ತುಮಕೂರು ಜಿಲ್ಲೆಯ ರೈತರು ಸಂಬಂಧಿಸಿದ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಲ್ಲಿಸಬಹುದು.
ಯಾದಗಿರಿ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ವಿವಿಧ ಯೋಜನಗಳಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿಬಾಳೆ ಅಂಗಾಂಶ, ಸಂಕರಣ ತರಕಾರಿ, ಹೂವಿನ ಬೆಳೆಗಳ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕ, ಟ್ರ್ಯಾಕ್ಟರ್, ಪ್ಯಾಕ್ ಹೌಸ್, ಸಂಸ್ಕರಣಾ ಘಟಕಗಳು ಹಾಗೂ ಈರುಳ್ಳಿ ಶೇಖರಣಾ ಘಟಕಗಳು, ಪ್ಲಾಸ್ಟಿಕ್ ಹೊದಿಗೆ ಇತರೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.
ಇದನ್ನೂ ಓದಿ : ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಹತ್ತಿಕುಣಿ ಸಹಾಯಕ ತೋಟಗಾರಿಕೆ ಅಧಿಕಾರಿ ಸುಂದರೇಶ ಮೊ. 7760731657, ಗುರುಮಟಕಲ ಸಹಾಯಕ ತೋಟಗಾರಿಕೆ ಅಧಿಕಾರಿ ಪವನಕುಮಾರ ಮೊ. 8792511787, ಬಳಿಚಕ್ರ ಸಹಾಯಕ ತೋಟಗಾರಿಕೆ ಅಧಿಕಾರಿ ಬೀರಲಿಂಗಪ್ಪ ಮೊ. 9482468975, ಯಾದಗಿರಿ ಸಹಾಯಕ ತೋಟಗಾರಿಕೆ ಅಧಿಕಾರಿ ಶಿವಪುತ್ರಪ್ಪ ಮೊ. 9164761727, ಸೈದಾಪೂರ ಸಹಾಯಕ ತೋಟಗಾರಿಕೆ ಅಧಿಕಾರಿ ಶಿವದತ್ತ ಮೊ. 8618236410, ಕೊಂಕಲ್ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀಮಂತ ಮೊ. 8639190169ಗೆ ಸಂಪರ್ಕಿಸಲು ಕೋರಲಾಗಿದೆ.
ರೈತರಿಗೆ ಸಿಗುವ ಸಬ್ಸಿಡಿ ಎಷ್ಟು?
ತೋಟಗಾರಿಕೆ ಯಾಂತ್ರೀಕರಣ ಕಾರ್ಯಕ್ರಮದಡಿಯಲ್ಲಿಕೆಲವು ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗಕ್ಕೆ ಶೇ. 40 ರಷ್ಟು ಸಬ್ಸಿಡಿ ಸಿಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 50 ರಷ್ಟು ಸಹಾಯಧನ ದೊರೆಯುತ್ತದೆ.
ತುಮಕೂರು, ಯಾದಗಿರಿ ಜಿಲ್ಲೆ ಸೇರಿದಂತೆ ಇತರ ಜಿಲ್ಲೆಗಳಿಂದಲೂ ಅರ್ಜಿ ಕರೆಯಲಾಗುತ್ತಿರುತ್ತದೆ. ಹಾಗಾಗಿ ರೈತರು ತಮ್ಮ ಹತ್ತಿರದ ತೋಟಗಾರಿಕೆ ಇಲಾಖೆಯಲ್ಲಿ ವಿಚಾರಿಸಿ ಅರ್ಜಿ ಸಲ್ಲಿಸಬಹುದು.