ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ- ಇಲ್ಲಿದೆ ಮಾಹಿತಿ

Written by Ramlinganna

Updated on:

Applications invited for agriculture awards ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ 10 ಜಿಲ್ಲೆಗಳ ರೈತರಿಂದ ರಾಜ್ಯಮಟ್ಟ, ಜಿಲ್ಲಾಮಟ್ಟ ಹಾಗೂ ತಾಲೂಕು ಮಟ್ಟದ ಕೃಷಿ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸರು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಯ ರೈತರು ಅರ್ಜಿ ಸಲ್ಲಿಸಬಹುದು.

ಹೌದು, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ರಾಜ್ಯ ಮಟ್ಟದಲ್ಲಿ ಎಚ್.ಡಿ. ದೇವೇಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ ಮತ್ತು ರೈತ ಮಹಿಳೆಯರಿಗೆ ಪ್ರಶಸ್ತಿ ನೀಡಲಾಗುವುದು. ಎಂ.ಹೆಚ್. ಮರಿಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕೆ ರೈತ ಪ್ರಶಸ್ತಿ, ಆರ್. ದ್ವಾರಕನಾಥ ಅತ್ಯುತ್ತಮ ರೈತ ಹಾಗೂ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದೇ ರೀತಿ ಕ್ಯಾನ್ ಬ್ಯಾಂಕ್ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿಗಳನ್ನುನೀಡಲು ಅರ್ಜಿ ಆಹ್ವಾನಿಸಲಾಗಿದೆ.

Applications invited for agriculture awards ಯಾವ ಪ್ರಶಸ್ತಿಗೆ ಎಷ್ಟು ಬಹುಮಾನ?

ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಗೆ  50 ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಗುವುದು.

ಕ್ಯಾನ್ ಬ್ಯಾಂಕ್ ಪ್ರಶಸ್ತಿಗೆ 25 ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಗುವುದು.

ಡಾ. ಆರ್. ದ್ವಾರಕಿನಾಥ ಅತ್ಯುತ್ತಮ ಪ್ರಶಸ್ತಿಗೆ 15 ಸಾವಿರ ರೂಪಾಯಿ ನಗದು ಪ್ರಶಸ್ತಿ ನೀಡಲಾಗುವುದು.

ಜಿಲ್ಲಾಮಟ್ಟದ ಪ್ರಗತಿಪರ ರೈತ ಪ್ರಶಸ್ತಿಗೆ 7500 ರೂಪಾಯಿ ನಗದು ಬಹುಮಾನ ನೀಡಲಾಗುವುದು.

ತಾಲೂಕು ಮಟ್ಟದ ರೈತರಿಗೆ 5000 ರೂಪಾಯಿ ನಗದು ಬಹುಮಾನ ನೀಡಲಾಗುವುದು.

ರೈತರು ಅರ್ಜಿ ನಮೂನೆಯನ್ನು ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ, ಮೀನುಗಾರಿಕೆ ಹಾಗೂ ಅರಣ್ಯ ಇಲಾಖೆಗಳ ಜಿಲ್ಲಾಮತ್ತು ತಾಲೂಕು ಕಚೇರಿಗಳಲ್ಲಿ ಅರ್ಜಿ ಪಡೆಯಬಹುದು. ಅರ್ಜಿ  ಸಲ್ಲಿಸಲು  ಜುಲೈ 31 ಕೊನೆಯ ದಿನಾಂಕವಾಗಿದೆ.

ರೈತರು ಹೆಚ್ಚಿನ ಮಾಹಿತಿಗಾಗಿ ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾನಿಲಯ , ಜಿಕೆವಿಕೆ, ಬೆಂಗಳೂರು ಕಚೇರಿಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080 23330153ಗೆ ಕರೆ ಮಾಡಬಹುದು.

ಅರ್ಜಿ ನಮೂನೆ ಹಾಗೂ ಸಂಪೂರ್ಣ ಮಾಹಿತಿಗಾಗಿ ರೈತರು

www.uasbangalore.edu.in

ಲಿಂಕ್ ಮೇಲೆ ಕ್ಲಿಕ್ ಮಾಡೇಕು. ಆಗ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ವೆಬ್ ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ ಬಲಗಡೆ ಸುದ್ದಿ ಮತ್ತು ಕಾರ್ಯಕ್ರಮಗಳ ಕೆಳಗಡೆ ಎಲ್ಲಾ ಪ್ರಶಸ್ತಿಗಳ ಮಾಹಿತಿ ಸ್ಕ್ರಾಲ್ ಆಗುತ್ತಿರುತ್ತದೆ. ಅಲ್ಲಿ ರೈತರು ಯಾವ ಪ್ರಶಸ್ತಿಯ ಅರ್ಜಿ ಪಡೆಯಲಿಚ್ಚಿಸುತ್ತಾರೋ ಆ ಪ್ರಶಸ್ತಿ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ಅದನ್ನು ರೈತರು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾದ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.

ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹೆಚ್ಚಿನ ಮಾಹಿತಿಗಾಗಿ ಡಾ. ಎಂ. ಪಾಪಿರೆಡ್ಡಿ, ವಿಸ್ತರಣಾ ಮುಂದಾಳು (ಕೋಲಾರ), ಮೊಬೈಲ್ ನಂಬರ್ 9449866930, 9480999802, 8618399352 ವಿಸ್ತರಣ ಶಿಕ್ಷಣ ಘಟಕ (ಕೋಲಾರ), ಕೃಷಿ ವಿಜ್ಞಾನ ಕೇಂದ್ರ, ಕುರುಬೂರು ಫಾರಂ, ಚಿಂತಾಮಣಿ ಇವರನ್ನು ಸಂಪರ್ಕಿಸಬಹುದು.

ಇದನ್ನೂ ಓದಿ : ಜಮೀನಿನ ಮೊಟೇಷನ್ ಮೊಬೈಲ್ ನಲ್ಲೇ ನೋಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಚಾಮರಾಜನಗರ ಜಿಲ್ಲೆಯ ರೈತರು ಹೆಚ್ಚಿನ ಮಾಹಿತಿಗಾಗಿ ಡಾ. ಚಂದ್ರಕಲಾ ಹಣಗಿ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ದೂರವಾಣಿ 9886642978, 9449866933 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರಶಸ್ತಿಗಳ ಪಟ್ಟಿ

1.ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ, ರೈತ ಮಹಿಳೆ ಪ್ರಶಸ್ತಿ

2.ಜಿಲ್ಲಾಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ

3.ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ

4.ಎಂ.ಎಚ್.ಮರಿಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ

5.ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ರಾಜ್ಯಮಟ್ಟದ ಪ್ರಶಸ್ತಿ

6.ಆರ್. ದ್ವಾರಕಿನಾಥ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಹಾಗೂ ಆರ್. ದ್ವಾರಕಿನಾಥ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ

Leave a Comment