ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಈ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://sevasindhu.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ಅರ್ಜಿ ಸಲ್ಲಿಸಬಹುದು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು
ಅರ್ಜಿದಾರರು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹೊಂದಿರಬೇಕು. ಜಾತಿ ಪ್ರಮಾಣ ಪತ್ರದ ದೃಢೀಕೃತ ಪ್ರತಿ ಹೊಂದಿರಬೇಕು. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ನ ದೃಢೀಕೃತ ಪ್ರತಿ ಇರಬೇಕು. ದ್ವಿಚಕ್ರ ಹಾಗೂ ಟ್ಯಾಕ್ಸಿ ಮತ್ತು ಗೂಡ್ಸ್ ವಾಹನಕ್ಕೆ ಅರ್ಜಿ ಸಲ್ಲಿಸುವವರಿಗೆ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಪಡೆದ ವಹಾನದ ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್ ಪ್ರತಿ ಇರಬೇಕು.
ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳಿಗಿರುವ ಅರ್ಹತೆಗಳು
ಫಲಾಫೇಕ್ಷಿಯು ಪರಿಶಿಷ್ಟ ಜಾತಿ ಭೋವಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕಳೆದ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಸ್ವಯಂ ಉದ್ಯೋಗ ಯೋಜನೆಯಡಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸುವವರು 21 ರಿಂದ 50 ವಯೋಮಾನದವರಾಗಿರಬೇಕು. ಭೂ ಒಡೆತನ ಯೋಜನೆಗೆ ಅರ್ಜಿ ಸಲ್ಲಿಸುವವರು 18 ರಿಂದ 50 ವಯೋಮಾನದವರಾಗಿರಬೇಕು. ಉಳಿದ ಯೋಜನಗಳಿಗೆ ಅರ್ಜಿ ಸಲ್ಲಿಸುವವರು 18 ರಿಂದ 60 ವರ್ಷದೊಳಗಿರಬೇಕು.
ಇದನ್ನೂ ಓದಿ : ಪಿಎಂ ಕಿಸಾನ್ ರೈತರಿಗೆ ಈ ಮೆಸೆಜ್ ಬಂದರೆ ಮಾತ್ರ 12ನೇ ಕಂತಿನ ಹಣ ಜಮೆ-ಯಾವ ಮೆಸೆಜ್ ಬರಬೇಕು? ಇಲ್ಲಿದೆ ಮಾಹಿತಿ
ಫಲಾಪೇಕ್ಷಿಯ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ 1,50 ಲಕ್ಷ ಹಾಗೂ ನಗರ ಪ್ರದೇಶದವರಿಗೆ 2 ಲಕ್ಷ ರೂಪಾಯಿ ಮಿತಿಯೊಳಗಿರಬೇಕು.ಫಲಾಪೇಕ್ಷಿಯ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಯಲ್ಲಿರಬಾರದು. ಈ ಹಿಂದೆ ನಿಗಮದ ಯಾವುದೇ ಯೋಜನೆಯಡಿ ಸೌಲಭ್ಯ ಪಡೆದಿರಬಾರದು. ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾಪೇಕ್ಷಿಯು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ವಾಹನ ಖರೀದಿಗಾಗಿ ಆರ್ಥಿಕ ನೆರವು ಬಯಸುವ ಫಲಾಪೇಕ್ಷಿಯು ಡ್ರೈವಿಂಗ್ ಲೈಸೆನ್ಸ್ ನೊಂದಿಗೆ ಬ್ಯಾಡ್ಜ್ ಹೊಂದಿರಬೇಕು.
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ಸಹಾಯಧನ
ಉದ್ಯಮ ಶೀಲತಾ ಯೋಜನೆ-3 ಅಡಿಯಲ್ಲಿ ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಉಳಿದ ಮೊತ್ತವನ್ನು ಬ್ಯಾಂಕ್ ಸಾಲದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.
ಉದ್ಯಮಶೀಲತಾ ಯೋಜನೆ-1 ಅಡಿಯಲ್ಲಿ 2 ಲಕ್ಷ ಸಾಲ
ಸಣ್ಣ ಕೈಗಾರಿಕೆ, ವಾಹನಗಳು, ಸೇವಾ ಕ್ಷೇತ್ರ ಮತ್ತು ವ್ಯಾಪಾರಿ ಕ್ಷೇತ್ರಗಳು ಹಾಗೂ ಇತರೆ ಕ್ಷೇತ್ರಗಳಲ್ಲಿ ಸ್ವಯಂ ಉದ್ಯೋಗ ಘಟಕ ಆರಂಭಿಸಲು ಘಟಕ ವೆಚ್ಚದಲ್ಲಿ 2 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಉಳಿದ ಮೊತ್ತವನ್ನು ಬ್ಯಾಂಕ್ ಸಾಲದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು.
ಸ್ವಯಂ ಉದ್ಯೋಗ ಯೋಜನೆ (ನೇರಸಾಲ)
ತರಕಾರಿ ಹಣ್ಣು ಹಂಪಲು, ಮೀನು, ಮಾಂಸ ಮಾರಾಟ, ಕುರಿ, ಹಂದಿ, ಮೊಲ ಸಾಕಾಣಿಕೆ ಮುಂತಾದ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ಮಳಿಗೆ, ತಳ್ಳುಗಾಡಿ ದುಡಿಮೆ ಬಂಡವಾಳ ಸೇರಿದಂತೆ ಗರಿಷ್ಠ ಘಟಕ ವೆಚ್ಚ 1ಲಕ್ಷ ರೂಪಾಯಿಯಲ್ಲಿ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.
ಗಂಗಾ ಕಲ್ಯಾಣ ಯೋಜನೆಯಡಿ 3 ಲಕ್ಷ ಸಹಾಯಧನ
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕರೆಯಲು 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಉಳಿದ 50 ಸಾವಿರ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.
ಭೂ ಒಡೆತನ ಯೋಜನೆಯಡಿ ಶೇ. 50 ರಷ್ಟು ಸಹಾಯಧನ
ಭೂ ಒಡೆತನ ಯೋಜನೆಯಡಿ ಕನಿಷ್ 2 ಎಕರೆ ಖುಷ್ಕಿ, ಅಥವಾ 1 ಎಕರೆ ತರಿ ಜಮೀನು ಖರೀದಿಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಜಮೀನಿನ ಮಾರ್ಗಸೂಚಿ ಬೆಲೆಯ ಮೂರುಪಟ್ಟು ಅಥವಾ ಜಿಲ್ಲೆ ಯೋಜನಾ ಅನುಷ್ಠಾನ ಘಟಕ ವೆಚ್ಚ ಗರಿಷ್ಠ 20 ಲಕ್ಷ ರೂಪಾಯಿ ವೆಚ್ಚದಲ್ಲಿಶೇ. 50 ರಷ್ಟು ಸಹಾಯಧನ ನೀಡಲಾಗುವುದು.