Apply for Agriculture labour certificate ರೈತರು, ಕೃಷಿ ಕೂಲಿ ಕಾರ್ಮಿಕರು ಮನೆಯಲ್ಲಿಯೇ ಕುಳಿತು ಕೃಷಿ ಕಾರ್ಮಿಕ ಪ್ರಮಾಣ ಪತ್ರ ಪಡೆಯಲು ಎಲ್ಲಿಯೂ ಹೋಗಬೇಕಿಲ್ಲ, ಮನೆಯಲ್ಲಿಯೇ ಕುಳಿತು ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು.
ಹೌದು, ಜಮೀನು ದಾಖಲೆಗಳನ್ನು ಪಡೆಯಲು ಈಗ ಕೃಷಿ ಕೂಲಿ ಕಾರ್ಮಿಕರು ಕಚೇರಿಗಳಿಗೆ ಹೋಗಬೇಕಿಲ್ಲ, ಕಚೇರಿಗಳ ಎದುರು ಗಂಟೆಗಟ್ಟಲೇ ಕಾಯುವ ಅಗತ್ಯವೂ ಇಲ್ಲ, ಮನೆಯಲ್ಲಿಯೇ ಕುಳಿತು ಆನ್ಲನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಅಂದುಕೊಂಡಿದ್ದರಾ? ಇಲ್ಲಿದೆ ನೋಡಿ ಮಾಹಿತಿ.
Apply for Agriculture labour certificate ಕೃಷಿ ಕಾರ್ಮಿಕ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕೃಷಿ ಕಾರ್ಮಿಕ ಪ್ರಮಾಣ ಪತ್ರ ಆನ್ಲೈನ್ ನಲ್ಲಿ ಪಡೆಯಲು ಈ
https://nadakacheri.karnataka.gov.in/AJSK/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ Online Application ಮೇಲೆ ಕ್ಲಿಕ್ ಮಾಡಬೇಕು. ನಂತರ Apply Online ಮೇಲೆ ಕ್ಲಿಕ್ ಮಾಡಬೇಕು.ಆಗ ಮೊಬೈಲ್ ನಂಬರ್ ಬರೆದು ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ New Request ಮೇಲೆ ಕ್ಲಿಕ್ ಮಾಡಿ Agri services ಮೇಲೆ ಕ್ಲಿಕ್ ಮಾಡಿದ ನಂತರ ನೀವು ಯಾವ ಯಾವ ದಾಖಲೆ ಪಡೆಯಬಹುದು ಎಂಬ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕೃಷಿ ಕಾರ್ಮಿಕ ಪ್ರಮಾಣ ಪತ್ರ ಮೇಲೆ ಕ್ಲಿಕ್ ಮಾಡಬೇಕು.
ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನೀವ ಗ್ರಾಮೀಣ ಪ್ರದೇಶವರಾಗಿದ್ದರೆ ಗ್ರಾಮೀಣ ಪ್ರದೇಶ ಆಯ್ಕೆಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು.
ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಖಾಯಂ ವಿಳಾಸ, ದಾಖಲೆ ಯಾವ ಉದ್ದೇಶಕ್ಕಾಗಿ ಬೇಕಾಗಿದೆ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ಅರ್ಜಿದಾರನ ಐಡಿ ಪ್ರಕಾರದಲ್ಲಿ ನಿಮ್ಮ ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್, ಪಡಿತರ ಚೀಟಿ ಹೀಗೆ ಅಲ್ಲಿ ಕಾಣುವ ದಾಖಲೆಗಳಲ್ಲಿ ಯಾವುದಾದರೊಂದನ್ನು ಆಯ್ಕೆ ಮಾಡಿಕೊಳ್ಳಬೇಕು. ನೀವು ಆಯ್ಕೆ ಮಾಡಿಕೊಂಡ ಐಡಿ ನಂಬರ್ ಹಾಕಬೇಕು. ಇಲಾಖೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಕುಟುಂಬದ ವಾರ್ಷಿಕ ಆದಾಯ ಆಯ್ಕೆ ಮಾಡಿಕೊಳ್ಳಬೇಕು.ನಂತರ ನೀವು ಯಾವುದೇ ಸಂಸ್ಥೆಯಿಂದ ಆದಾಯ ಪಡೆಯುತ್ತಿದ್ದರೆ ನಮೂದಿಸಬೇಕು.
ಇದನ್ನೂ ಓದಿ : ನಿಮ್ಮ ಯಾವ ಸರ್ವೆ ನಂಬರ್ ಮೇಲೆ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಈ ದಾಖಲೆ ಪಡೆಯಲು 40 ರೂಪಾಯಿ ಶುಲ್ಕವಿರುತ್ತದೆ. ಆ ಸುಲ್ಕವನ್ನು ಆನ್ಲೈನ್ ನಲ್ಲಿ ಪಾವತಿಸಬಹುದು. ಎಲ್ಲಾ ಮಾಹಿತಿಗಳನ್ನು ಮತ್ತೊಮ್ಮೆ ಸರಿಯಾಗಿ ಓದಿ ಉಳಿಸು ಮೇಲೆ ಕ್ಲಿಕ್ ಮಾಡಿದರೆ ಮಾಹಿತಿ ಸೇವ್ ಆಗುತ್ತದೆ. ನಂತರ ಪ್ರೊಸೀಡ್ ಟು ಇ ಸೈನ್ ಮೇಲೆ ಕ್ಲಿಕ್ ಮಾಡಿ ನೀವು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಸ್ಟೇಟಸ್ ಸಹ ಚೆಕ್ ಮಾಡಿಕೊಳ್ಳಬಹುದು.
ಇದೇ ರೀತಿ ರೈತರು ಗೇಣಿರಹಿತ ದೃಢೀಕರಣ ಪ್ರಮಾಣ ಪತ್ರ, ವ್ಯವಸಾಯಗಾರರ ಕುಟುಂಬದ ದೃಢೀಕರಣ ಪ್ರಮಾಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಢೀಕರಣ ಪ್ರಮಾಣ ಪತ್ರ, ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ, ವ್ಯವಸಾಯಗಾರ ದೃಢೀಕರಣ ಪ್ರಮಾಣ ಪತ್ರಕ್ಕಾಗಿ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು.