ಯುವ ನಿಧಿ ಯೋಜನೆಯಡಿ ನೋಂದಣಿ ಮಾಡಿ 3 ಸಾವಿರ ಪಡೆಯಿರಿ

Written by Ramlinganna

Updated on:

Apply for yuvanidhi scheme ನಿರುದ್ಯೋಗ ಯುವಕ ಯುವತಿಯರಿಗಿಲ್ಲಿದೆ ಸಂತಸದ ಸುದ್ದಿ. ರಾಜ್ಯ ಸರ್ಕಾರವು ಜಾರಿಗೆ ತಂದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಯುವನಿಧಿ ಯೋಜನೆಗೆ ಅರ್ಜಿ ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು? ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಕ ಯುವತಿಯರು ತಮ್ಮ ಹೆಸರು ನೋಂದಣಿ ಮಾಡಿಸಿ ಇದೇ ತಿಂಗಳಿಂದ ಯುವ ನಿಧಿ ಯೋಜನೆಯಡಿ ಸೌಲಭ್ಯ ಪಡೆಯಬಹುದು.

ಹೌದು, ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯಾದ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಯು ಆರಂಭವಾಗಿದೆ.

ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯಾದ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಯು ಆರಂಭವಾಗಿದೆ.

ಯುವನಿಧಿ ಯೋಜನೆಯಡಿಯಲ್ಲಿ ಈಗಾಗಲೇ 2023ರ ಡಿಸೆಂಬರ್ 26 ರಂದು ನೋಂದಣಿ ಪ್ರಕ್ರಿಯೆಗೆ ರಾಜ್ಯ ಸರ್ಕಾರವು ಚಾಲನೆ ನೀಡಿದೆ. 2023 ರಲ್ಲಿ ಪದವಿ / ಡಿಪ್ಲೋಮಾ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ವಾಸವಾಗಿರುವ ಪದವಿ / ಡಿಪ್ಲೋಮಾ ನಂತರ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ / ಖಾಸಗಿ ಉದ್ಯೋಗ ಮತ್ತು ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿಧ್ಯಾಭ್ಯಾಸ ಮುಂದುವರೆಸದೆ ಇರುವ ಕನಿಷ್ಟ 6 ವರ್ಷಗಳವರೆಗೆ ಪದವಿ ಅಥವಾ ಡಿಪ್ಲೋಮಾ ದವರಿಗೆ ಅಧ್ಯಯನ ಮಾಡಿದವರು) ಫಲಾನುಭವಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.  2022-23ನೇ ಸಾಲಿನಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಪದವೀಧರರಿಗೆ 3 ಸಾವಿರ ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿಗಳ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.

ಇದನ್ನೂಓದಿ ನೀವು ಯಾವ ವಾರ ಹುಟ್ಟಿದ್ದೀರಿ? ಮೊಬೈಲ್ ನಲ್ಲೇ ಚೆಕ್ ಮಾಡಿ

ಅರ್ಹ ಫಲಾನುಭವಿಗಳು ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ / ಡಿಪ್ಲೋಮಾ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಡಿತರಚೀಟಿ, ಆಭ್ಯರ್ಥಿಯ ಬ್ಯಾಂಕ್ ಪಾಸ್ ಪುಸ್ತಕ ಇತ್ಯಾದಿ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕಾಗುತ್ತದೆ.

ಆಸಕ್ತರು

https://sevasindhugs.karnataka.gov.in

ಪೋರ್ಟಲ್ ಗೆ ಭೇಟಿ ನೀಡಿ ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.  ಭತ್ಯೆಯನ್ನು ಡಿಬಿಟಿ ಮೂಲಕ ಒದಗಿಸಲಾಗುವುದು. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

Apply for yuvanidhi scheme ಯೋಜನೆಗೆ ಯಾರು ಅರ್ಹರಾಗಿರುವುದಿಲ್ಲ

ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿಧ್ಯಾಭ್ಯಾಸ ಮುಂದುವರೆಸುವವರು. ಶಿಶಿಕ್ಷು (ಅಪ್ರೆಂಟಿಸ್) ವೇತನವನ್ನು ಪಡೆಯುತ್ತಿರುವವರು. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು. ಪಡೆದಿರುವವರು. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕುಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಇದನ್ನೂ ಓದಿ ಯಾವ ಬ್ಯಾಂಕಿನಲ್ಲಿ ಎಷ್ಟು ಸಾಲ ಪಡೆದಿದ್ದೀರಿ? ಇಲ್ಲೇ ಚೆಕ್ ಮಾಡಿ

Leave a Comment