ಕೋವಿಡ್ ಎರಡನೇ ಅಲೆಯ ಲಾಕ್‌ಡೌನ್ ಪರಿಣಾಮ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಒಂದು ಬಾರಿ 2000 ರೂಪಾಯಿಗಳ ಆರ್ಥಿಕ ನೆರವು ನೀಡುತ್ತಿದೆ. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್  http://sevasindhu.karnataka.gov.in  ಮೂಲಕ 2021 ರ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಕಲಬುರಗಿ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಸಂಘಟಿತ ವರ್ಗದ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು (ಮನೆ ಕೆಲಸ), ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ.

ಯೋಜನೆ ಕುರಿತು ಮತ್ತು ಅರ್ಜಿ ಸಲ್ಲಿಸಲು ಮಾರ್ಗದರ್ಶನಕ್ಕಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇವಾ ಕೇಂದ್ರಗಳು, ವಾರ್ಡ್ ಮಟ್ಟದ ಸೇವಾ ಕೇಂದ್ರಗಳು (ಸಿ.ಎಸ್.ಸಿ.),  ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳ ಕಚೇರಿಗಳಿಗೆ ಅಥವಾ ಕಾರ್ಮಿಕ ಸಹಾಯವಾಣಿ ಸಂಖ್ಯೆ 155214 ಅಥವಾ ಸೇವಾ ಸಿಂಧು ಸಂಸ್ಥೆಯ ಮೊಬೈಲ್ ಸಂಖ್ಯೆಗಳಾದ 8088304855,  6361799796,  9380204364 ಹಾಗೂ 9380206704 ಗಳಿಗೆ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ  ರಜಾದಿನಗಳನ್ನು ಹೊರತುಪಡಿಸಿ ಸಂಪರ್ಕಿಸಬಹುದಾಗಿದೆ

ಹೆಚ್ಚಿನ ಮಾಹಿತಿಗಾಗಿ 8088304855/ 6361799796 /9380204364 / 9380206704 – 9AM TO 6PM (ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ) ಸಂಪರ್ಕಿಸಬಹುದು.

Leave a Reply

Your email address will not be published. Required fields are marked *