ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿಯಲ್ಲಿ ರಾಷ್ಟ್ರೀಯ ಕೃತಕ ಗರ್ಭಧಾರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ 17 ಜಿಲ್ಲೆಗಳಲ್ಲಿ ಅಂದರೆ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಕಲಬೂರಗೀ, ಕೊಪ್ಪಳ, ಕೊಡಗು, ಶಿವಮೊಗ್ಗ, ರಾಯಚೂರು, ಉತ್ತರಕನ್ನಡ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ.
ಯೋಜನೆಯುವ ಅವಧಿ 31ನೇ ಮೇ 2022 ರವರೆಗೆ ಇರುತ್ತದೆ. ದೇಶೀ ಅನಿರ್ಧಿಷ್ಟ ಮತ್ತು ಮಿಶ್ರ ತಳಿ ಹಾಗೂ ಎಮ್ಮೆಗಳಲ್ಲಿ ಉತ್ಕೃಷ್ಟ ದರ್ಜೆಯ ದೇಶಿ ಮತ್ತು ವಿದೇಶಿ ತಳಿ ಹೋರಿ, ಕೋಣಗಳ ವೀರ್ಯ ಬಳಸಿ ಕೃತಕ ಗರ್ಭಧಾರಣೆ ಕೈಗೊಳ್ಳಲಾಗುತ್ತಿದೆ. ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕೊರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಬಹುದು.
ಉಚಿತ ಸಹಾಯವಾಣಿಗೆ ಕರೆ ಮಾಡಿ ಪಡೆಯಿರಿ ಮಾಹಿತಿ
ರಾಜ್ಯ ಸರ್ಕಾರವು ಹೈನುಗಾರಿಕೆ,ಕುರಿ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ ಉಚಿತ ಸಹಾಯವಾಣಿಯನ್ನು ಆರಂಭಿಸಿದೆ. ಕೇವಲ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆಯಷ್ಟೇ ಅಲ್ಲ, , ಕೋಳಿ ಸಾಕಾಣಿಕೆ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತು ಸಹ ರೈತರಿಗೆ ಉಚಿತ ಮಾಹಿತಿ ನೀಡಲಾಗುವುದು.
ಇದಕ್ಕಾಗಿ ರೈತರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಮಾಹಿತಿ ಪಡೆಯಲು ಪಶು ಇಲಾಖೆ ಕಚೇರಿಗೂ ಹೋಗುವ ಅವಶ್ಯಕತೆಯಿಲ್ಲ. ಮನೆಯಲ್ಲಿಯೇ ಕುಳಿತು ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಉಚಿತ ಸಹಾಯವಾಣಿ ನಂಬರ್ 8277100200 ಗೆ ಕರೆ ಮಾಡಿದರೆ ಸಾಕು ನಿಮ್ಮ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ನೀಡಲಾಗುವುದು. ದಿನದ 24*7 ಗಂಟೆ ಉಚಿತ ಸಹಾಯಾವಾಣಿ ಸೌಲಭ್ಯವಿರುತ್ತದೆ. ಕರೆ ಮಾಡಿದ ರೈತರಿಗೆ ಪಶುವೈದ್ಯರು ಮತ್ತು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿ ನೀಡುವರು.
ಈ ಉಚಿತ ಸಹಾಯವಾಣಿಯಿಂದ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹೀಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು.
ಜಾನುವಾರು ಉತ್ಪನ್ನಗಳ ಮಾರಾಟ ದರ ಲಭ್ಯ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿರುವ ಜಾನುವಾರು ಹಾಗೂ ಇತರೆ ಉತ್ಪನ್ನಗಳ ಮಾರಾಟ ದರ ತಿಳಿಯಲು ಈ http://www.ahvs.kar.nic.in/kn_Sale.html
ಲಿಂಕ್ ಮೇಲೆ ಕ್ಲಿಕ್ ಮಾಡಬಹುದು. ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ಜಾನುವಾರು ಹಾಗೂ ಇತರೆ ಉತ್ಪನ್ನಗಳ ದರದ ಮಾಹಿತಿ ಕಾಣುತ್ತದೆ.