ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗ ಬಿ ಖಾತಾ ನೀಡುವ ಅವಧಿ ವಿಸ್ತರಣೆ

Written by Ramlinganna

Published on:

B khata date exchanged : ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗ ಬಿ ಖಾತಾ ನೀಡುವ ಅವಧಿಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಹೌದು, ಕರ್ನಾಟಕದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಸರ್ಕಾರವು ಮೂರು ತಿಂಗಳವರೆಗೆ ವಿಸ್ತರಿಸಿದೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಾಗರಿಕ ಸ್ನೇಹಿ ಸೌಲಭ್ಯ ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಬಿ ಖಾತಾ ವಿತರಣೆ ಪ್ರಕ್ರಿಯೆ ವಿಸ್ತರಿಸಲು ನಿರ್ಧರಿಸಲಾಗಿದೆ. ಸುಮಾರು 10 ಲಕ್ಷ ಆಸ್ತಿಗಳಿಗೆ ಬಿ ಖಾತಾ ಕೋರಿ ಅರ್ಜಿ ಸಲ್ಲಿಸಲಾಗಿದ್ದು, 2 ಲಕ್ಷ ಆಸ್ತಿಗಳಿಗೆ ವಿಸ್ತರಿಸಲಾಗಿದೆ. ಉಳಿದವುಗಳ ಪರಿಶೀಲನೆ ನಡೆಯುತ್ತಿದ್ದು, ಹಂತ ಹಂತವಾಗಿ ವಿತರಿಸಲಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ ಬುಧವಾರ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ ಅಂತಹವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿ ಖಾತಾ ನೀಡಿ ಸಕ್ರಮಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು  ಎಂದಿದ್ದಾರೆ.

B khata date exchanged ಬಿ ಖಾತೆ ವಿತರಣೆಗೆ ಅವಕಾಶ

ಇದರ ಅನ್ವಯ ನಾಗರಿಕರಿಗೆ ಒಂದು ಬಾರಿ ಬಿ ಖಾತೆ ವಿತರಣೆಗೆ ಅವಕಾಶವನ್ನು ನೀಡಲಾಗಿತ್ತು. ಮೇ ತಿಂಗಳ 10ರ ವೇಳೆಗೆ ಬಿ-ಖಾತಾ ಪಡೆದುಕೊಳ್ಳಲು ಸಮಯ ನೀಡಲಾಗಿತ್ತು. ನಾಗರಿಕರು ನಿಗದಿತ ಶುಲ್ಕಗಳನ್ನು ಪಾವತಿ ಮಾಡಿ ತಮ್ಮ ಕಟ್ಟಡಗಳಿಗೆ ಬಿ-ಖಾತಾ ಪಡೆದುಕೊಳ್ಳಬಹುದಾಗಿದೆ. ಇದೀಗ ಈ ನಾಗರಿಕ ಸ್ನೇಹಿ ಸೌಲಭ್ಯವನ್ನು ಇನ್ನೂ ಹೆಚ್ಚಿನ ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಸರ್ಕಾರವು ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತಾ ವಿತರಣೆ ಪ್ರಕ್ರಿಯೆಯನ್ನು ಇನ್ನೂ 3 ತಿಂಗಳ ಕಾಲ ವಿಸ್ತರಣೆ ಮಾಡಲು ನಿರ್ಧರಿಸಿದೆ ಎಂದು ಸಚಿವ ಸುರೇಶ್‌ ಮಾಹಿತಿ ನೀಡಿದ್ದಾರೆ.

ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಪ್ರದೇಶಗಳಲ್ಲಿ 30 ಲಕ್ಷಕ್ಕೂ ಅಧಿಕ ಇಂತಹ ಅನಧಿಕೃತ ಕಟ್ಟಡಗಳು, ಮನೆಗಳು, ನಿವೇಶನಗಳಿವೆ ಎಂದು ಅಂದಾಜಿಸಲಾಗಿದೆ. ಸರ್ಕಾರ ಒಂದು ಬಾರಿಯ ಅವಕಾಶ ನೀಡಿದ ನಂತರ ನಾಗರಿಕರು ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿ ತಮ್ಮ ಆಸ್ತಿಗಳಿಗೆ ಬಿ-ಖಾತಾ ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

2 ಲಕ್ಷ ಬಿ-ಖಾತಾ ವಿತರಣೆ

ಸರ್ಕಾರ ನೀಡಿದ ಅವಕಾಶವನ್ನು ಬಳಸಿಕೊಂಡಿರುವ ಜನರು ಸುಮಾರು 10 ಲಕ್ಷ ಆಸ್ತಿಗಳಿಗೆ ಬಿ-ಖಾತಾ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 2 ಲಕ್ಷ ಆಸ್ತಿಗಳಿಗೆ ಬಿ-ಖಾತೆಗಳನ್ನು ವಿತರಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ನಡೆಯುತ್ತಿದ್ದು, ಹಂತಹಂತವಾಗಿ ಬಿ-ಖಾತಾ ವಿತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ರೈತರಿಗೆ ಗುಡ್ ನ್ಯೂಸ್ ಮೇ 27 ಮುಂಗಾರು ಪ್ರವೇಶ

ಈ ಬಾರಿ ನೈರುತ್ಯ ಮುಂಗಾರು ಮೇ 27 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ.

ವಾಡಿಕೆಯಂತೆ ಜೂನ್ 1 ರಂದು ಮಳೆ ಕೇರಳಕ್ಕೆ ಕಾಲಿಡುತ್ತದೆ. ಆದರೆ ಈ ಬಾರಿ 5 ದಿನ ಮುಂಚಿತವಾಗಿ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಲ್ಕು ತಿಂಗಳ ಮುಂಗಾರು ಋತುವಿನಲ್ಲಿ (ಜೂನ್ ನಿಂದ ಸೆಪ್ಟೆಂಬರ್ ) ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಏ. 105 ರಷ್ಟು ಮಳೆಯಾಗಲಿದ್ದು, ಸರಾಸರಿ 97ಸೆಂ.ಮೀ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು  ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ. ರವಿಚಂದ್ರನ್ ಹೇಳಿದ್ದಾರೆ.

ಇದನ್ನೂ ಓದಿ : ನಿಮಗೆ ಗೊತ್ತಿಲ್ಲದೆ ನಿಮ್ಮ ಜಮೀನಿನ ಮೇಲೆ ಸಾಲಪಡೆದಿದ್ದಾರೆಯೇ? ಇಲ್ಲೇ ಚೆಕ್ ಮಾಡಿ

ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಒಡಿಸ್ಸಾ, ಛತ್ತಿಸಗಢಛತ್ತಿಸಗಢ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಜಮ್ಮುಮತ್ತು ಕಾಶ್ಮೀರ, ಲಡಾಖ್, ತಮಿಳುನಾಡು, ಬಿಹಾರಹಾಗೂ ಈಶಾನ್ಯ ರಾಜ್ಯಗಳಲ್ಲಿವಾಡಿಕೆಗಿಂತ ಕಡಿಮೆ ಮಳೆಯಾಗಬಹುದು.

ನಿಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ?

ನಿಮ್ಮೂರಿನಲ್ಲಿಇಂದು ಮಳೆಯಾಗುತ್ತೋ ಇಲ್ಲವೋ ಹಾಗೂ ನಿಮ್ಮೂರಿನಲ್ಲಿ ಮಳೆ ಯಾವಾಗಬರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದು.ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ಈಗ ನೀವು ದಿನನಿತ್ಯದ ಹವಾಮಾನ ವರದಿಯನ್ನುಪಡೆದುಕೊಳ್ಳಬಹುದು. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿಯನ್ನುಪಡೆಯಬಹುದು.

Leave a Comment