Baragala parihara amount:1.26 ಲಕ್ಷ ರೈತರಿಗೆ ಬರ ಪರಿಹಾರ ಜಮೆ

Written by Ramlinganna

Published on:

Baragala parihara amount :1.26 ಲಕ್ಷ ರೈತರ ಖಾತೆಗೆ ತಾತ್ಕಾಲಿಕ ಬರಗಾಲ ಪರಿಹಾರ ಹಣ ಜಮೆ ಮಾಡಲಾಗಿದೆ. ಹೌದು, ಕಳೆದ ವರ್ಷ ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಭೀಕರ ಆವರಿಸಿದ್ದರಿಂದ ರೈತರಿಗೆ ಬರ ಪರಿಹಾರ ನೀಡಲಾಗುತ್ತಿದೆ.

ಹೌದು, ತುಮಕೂರು ಜಿಲ್ಲೆಯ ಒಟ್ಟು 1, 98, 387 ರೈತರಿಗೆ 35.66 ಕೋಟಿ ಬೆಳೆ ನಷ್ಟ ಪರಿಹಾರ ಒದಗಿಸಲು ಜಿಲ್ಲಾಡಳಿತದಿಂದ ಈಗಾಗಲೇ ಅನುಮೋದನೆ ನೀಡಲಾಗಿದೆ. ಇದುವರೆಗೆ 1,26,555 ರೈತರ ಖಾತೆಗಳಿಗೆ 22.74 ಕೋಟಿ ರೂಪಾಯಿ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ತಿಳಿಸಿದ್ದಾರೆ.

ಚಕ್ಕನಾಯಕನಹಳ್ಳಿ ತಾಲೂಕಿನ 14,168 ರೈತರು ಗುಬ್ಬಿಯ 8384, ಕೊರಟಗೆರೆ 11957, ಕುಣಿಗಲ್ 19393, ಮಧುಗಿರಿ 14582, ಪಾವಗಡ 4922, ಶಿರಾ 14977, ತಿಪಟೂರ 14464, ತುಮಕೂರು 11402 ಹಾಗೂ ತುರವೇಕೆರೆ ತಾಲೂಕಿನ12,304 ರೈತರ ಖಾತೆಗಳಿಗೆ ಈಗಾಗಲೇ ಹಣ ಜಮಾ ಆಗಿದೆ ಎಂದು ಹೇಳಿದ್ದಾರೆ.

ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಜೋಡಣೆ, ಇತರೆ ತಾಂತ್ರಿಕ ದೋಷಗಳಿಂದ 3389 ರೈತರಿಗೆ ಬೆಳೆ ನಷ್ಟ ಪರಿಹಾರ ಪಾವತಿಯಾಗಿಲ್ಲ. ಜಿಲ್ಲೆಯ ರೈತರು ತಮ್ಮ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆಯಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ತಾಲೂಕಿನ ಕೃಷಿ ಇಲಾಖೆಯ ಕಚೇರಿ, ರೈತರ ಸಂಪರ್ಕ ಕೇಂದ್ರ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Baragala parihara amount ಯಾವ ಬೆಳೆಗೆ ಎಷ್ಟುಹಣ ಜಮೆಯಾಗಲಿದೆ?

ಪ್ರತಿ ಹೆಕ್ಟೇರ್ ಮಳೆ ಆಶ್ರಿತ ಬೆಳೆಗಳಿಗೆ 8500 ರೂಪಾಯಿ ನೀಡಲಾಗುವುದು. ಅದೇ ರೀತಿ ನೀರಾವರಿ ಬೆಳೆಗಳಿಗೆ 17 ಸಾವಿರ ರೂಪಾಯಿ ನೀಡಲಾಗುವುದು. ಬಹುವಾರ್ಷಿಕ ಬೆಳೆಗಳಿಗೆ 22500 ರೂಪಾಯಿ ಪರಿಹಾರ ನಿಗದಿ ಮಾಡಿದೆ. ಸರ್ಕಾರ ಮಾರ್ಗ ಸೂಚಿಯನ್ವಯ ರೈತರಿಗೆ 2 ಹೆಕ್ಟೇರ್ ವರೆಗೆ ಮಾತ್ರ ಬೆಳೆ ಹಾನಿ ಪರಿಹಾರ ವಿತರಿಸಲಾಗುವುದು.

Baragala parihara amount: ಜಮೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಬೆಳೆ ಹಾನಿ ಪರಿಹಾರದ ಸ್ಟೇಟಸ್ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪರಿಹಾರ ಹಣ ಸಂದಾಯ ವರದಿ ಕಾಣಿಸುತ್ತದೆ. ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲಿ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ ಫ್ಲಡ್ ಅಥವಾ ಡ್ರಾಟ್ ಆಯ್ಕೆ ಮಾಡಿಕೊಳ್ಳಬೇಕು. ನಂತರ 2023ನೇ  ವರ್ಷ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಜಮೆಯಾಗಿರುವ ಸ್ಟೇಟಸ್ ಚೆಕ್ ಮಾಡಬಹುದು.

ಇದನ್ನೂ ಓದಿ Gruhalakshmi Annabhagya bele hani ಸ್ಟೇಟಸ್ ಇಲ್ಲೇ ಚೆಕ್ ಮಾಡಿ

ಕಳೆದ ಸಾಲಿನಲ್ಲಿ ಪ್ರವಾಹದಿಂದಾಗಿ ಉಂಟಾದ ಮಳೆಯಿಂದ ರೈತರ ಬೆಳೆಹಾಳಾಗಿತ್ತು. ಆಗ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡುವುದರೊಂದಿಗೆ ಪ್ರಸಕ್ತ ವರ್ಷದ ಬೆಳೆ ಹಾನಿ ಪರಿಹಾರ ಅತೀ ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ಆಗ ರೈತರು  ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನುಚೆಕ್ ಮಾಡಬಹುದು.

ಪ್ರಸಕ್ತ ಸಾಲಿನಲ್ಲಿ Baragala parihara amount ಮೊದಲ ಕಂತಿನ ಹಣ ಮಾತ್ರ ಜಮೆ ಮಾಡಲಾಗುತ್ತಿದೆ. ಅತೀ ಶೀಘ್ರದಲ್ಲಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದ ನಂತರ ರೈತರಿಗೆ ಹಣ ಜಮೆಯಾಗುವುದು.

ತುಮಕೂರು ಜಿಲ್ಲೆಯಂತೆ, ಚಾಮರಾಜನಗರ, ಕೊಡಗು, ದಾವಣಗೆರೆ ಜಿಲ್ಲೆ ಸೇರಿದಂತೆ ಇತರ ಜಿಲ್ಲೆಗಳ ರೈತರಿಗೂ ಬರಗಾಲ ಪರಿಹಾರ ಹಣ ಮೊದಲ ಕಂತು ಜಮೆಯಾಗಿದೆ. ಇತರ ಜಿಲ್ಲೆಯ ರೈತರು ತಮಗೆ ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

Leave a Comment