ಒಂದು ವಾರದೊಳಗೆ ಬರ ಪರಿಹಾರ ಜಮೆ- ಕೃಷ್ಣ ಭೈರೇಗೌಡ

Written by Ramlinganna

Published on:

Bara Parihara hana : ರೈತರಿಗೆ ಭರ್ಜರಿ ಗುಡ್ ನ್ಯೂಸ್. ಅದೇನಪಾ ಅಂದ್ರೆ, ಒಂದು ವಾರದೊಳಗೆ ಎಲ್ಲಾರೈತರ ಖಾತೆಗೆ 3 ಸಾವಿರ ರೂಪಾಯಿ ಬರ ಪರಿಹಾರಹಣ ಜಮೆಯಾಗಲಿದೆ.

ಹೌದು, ರೈತ ಬಾಧವರೇ ತಮಗೆಲ್ಲಾ ಗೊತ್ತಿದ್ದ ಹಾಗೆ  ಈ ಕುರಿತು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದ್ದಾರೆ.

ಅವರು ಕಲಬುರಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ, ಕಳೆದ ವರ್ಷ ಅತ್ಯಂತ ಭೀಕರ ಬರಗಾಲದಿಂದ ರೈತ ಸಮುದಾಯ ತತ್ತರಿಸಿತ್ತು. ಹೀಗಾಗಿ ರೈತ ಸಮುದಾಯದ ರಕ್ಷಣೆಗೆ ಸರ್ಕಾರ ಮುಂದಾಗಿದೆ ಎಂದರು.

ರಾಜ್ಯದಲ್ಲಿ ಕಳೆದ ವರ್ಷ ಬರಗಾಲ ಕಾರಣ ಸಣ್ಣ, ಅತೀ ಸಣ್ಣ ರೈತರ ವಾರ್ಷಿಕ ಬೆಳೆ ನಷ್ಟದಿಂದ ತುಂಬಾ ಕಂಗಾಲಾಗಿದ್ದು, ಅವರ ಜೀವನೋಪಾಯಕ್ಕಾಗಿ ಸುಮಾರು 18 ಲಕ್ಷ ರೈತರಗಿ ತಲಾ 3000 ರೂಪಾಯಿಯಂತೆ ಒಟ್ಟು 500 ಕೋಟಿ ರೂಪಾಯಿ ಪರಿಹಾರ ವಿತರಣೆ ಮಾಡಲಾಗುವುದು. ಮುಂದಿನ ಒಂದು ವಾರದಲ್ಲಿ ರೈತರ ಖಾತೆಗೆ ಈ ಹಣ ಜಮೆಯಾಗಲಿದೆ ಎಂದರು.

ಕೇಂದ್ರ ಸರ್ಕಾರ ಎನ್.ಡಿ.ಆರ್.ಎಫ್ ಹಣ ಬಿಡುಗಡೆಯಲ್ಲಿ ವಿಳಂಬ ಧೋರಣೆ ಅನುಸರಿಸಿದ ಕಾರಣ ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್  ಕದ ತಟ್ಟಿದ ಕಾರಣ ಕೇಂದ್ರ ಹಣ ಬಿಡುಗಡೆ ಮಾಡಿತು. ಅದು ಹಣ ಸಹ ರೈತರಿಗೆ ನೀಡಲಾಗಿದೆ. ಇನ್ನೂ ಬೆಳೆ ವಿಮೆ ಅಡಿ 1756 ಕೋಟಿ ರೂಪಾಯಿ ಪರಿಹಾರ ರೈತರ ಖಾತೆಗೆ ಹಣ ನೀಡಲಾಗಿದೆ. ಒಟ್ಟಾರೆ ಬರಗಾಲ ಕಾರಣ ಎಸ್.ಡಿ.ಆರ್.ಎಫ್ ಎನ್.ಡಿ.ಆರ್.ಎಫ್ ಹಣ, ಬೆಳೆ ವಿಮೆ, ಪ್ರಕೃತಿ ವಿಕೋಪ ಪರಿಹಾರ ಹೀಗೆ ಸುಮಾರು 6000 ಕೋಟಿ ರೂಪಾಯಿ ಪರಿಹಾರ ಹಣವನ್ನು ರೈತರ ಖಾತೆಗೆ ಡಿಬಿಟಿ ಮೂಲಕ ನೀಡಲಾಗಿದೆ.

Bara Parihara hana ಬರ ಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ

ಯಾವ ಯಾವ ರೈತರಿಗೆ ಬರಗಾಲ ಪರಿಹಾರ ಹಣ ಅಂದರೆ ಮೊದಲು ಮತ್ತು ಎರಡನೇ ಕಂತಿನ ಹಣ ಜಮೆಯಾಗಿಲ್ಲವೋ ಅವರ ಖಾತೆಗೆ ಈಗ ಹಣ ಜಮೆಯಾಗುತ್ತಿದೆ. ಹೌದು, ಬರ ಪರಿಹಾರ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://parihara.karnataka.gov.in/service92/       

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ  ನಿಮಗೆ ಭೂಮಿ ಆನ್ಲೈನ್ ಪರಿಹಾರ ಇನ್ಪುಟ್ ಸಬ್ಸಿಡಿ ಪಾವತಿ ವಿವರಗಳು ಪೇಜ್ ಓಪನ್ ಆಗುತ್ತದೆ.

ಅಲ್ಲಿ ನೀವು Select Year / ವರ್ಷ  2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.

ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ರೈತರ ಗುರುತಿನ ಸಂಖ್ಯೆ, ಮೊಬೈಲ್ ಸಂಖ್ಯೆಹಾಗೂ ಸರ್ವೆ ನಂಬರ್ ಈ ನಾಲ್ಕರಲ್ಲಿ ಯಾವುದಾದರೊಂದು ಒಂದನ್ನು ಆಯ್ಕೆಮಾಡಿಕೊಳ್ಳಬೇಕು.

ಇದನ್ನೂ ಓದಿ ನಿಮಗೆ ಗೊತ್ತಿಲ್ಲದೆ ಬೆಳೆಸಾಲ ಪಡೆಯಲಾಗಿದೆಯೇ? ಇಲ್ಲೇ ಚೆಕ್ ಮಾಡಿ

ಆಧಾರ್ ನಂಬರ್ ಹಾಕಿ ಬರಗಾಲ ಪರಿಹಾರ ಸ್ಸೇಟಸ್ ಚೆಕ್ ಮಾಡಲು ನೀವು ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ನಂತರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಆಧಾರ್ ಕಾರ್ಡ್ ಕೊನೆಯ ಸಂಖ್ಯೆ,ನಿಮ್ಮ ಹೆಸರು ನಿಮ್ಮಎಫ್ಐಡಿ ಕಾಣಿಸುತ್ತದೆ. ಅಲ್ಲಿ ಕಾಣುವ ಸರ್ಕಲ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು.

ತರ ನಿಮಗೆ ಮಾಲಿಕರ ಹೆಸರು ಕಾಣಿಸುತ್ತದೆ. ಆ ಮಾಲಿಕರಿಗೆ  ಯಾವ ಬ್ಯಾಂಕಿನಲ್ಲಿ ಯಾವಾಗ ಬರ ಪರಿಹಾರ ಹಣ ಜಮೆಯಾಗಿದೆ ಎಂಬುದು ಕಾಣಿಸುತ್ತದೆ.

 

Leave a Comment