Bara parihara village list ಬಿಡುಗಡೆ- ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

Written by Ramlinganna

Published on:

Bara parihara village list : ಬರಗಾಲ ಪರಿಹಾರ ಪಡೆಯುವ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರೈತರ ಬಳಿ ಮೊಬೈಲ್ ಇದ್ದರೆ ಸಾಕು, ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Bara parihara village list ಬರ ಪರಿಹಾರ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡುವುದು ಹೇಗೆ?

ಬರ ಪರಿಹಾರ ಪಡೆಯುವವರ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರಿರುವದನ್ನು ಚೆಕ್ ಮಾಡಲು ಈ

https://parihara.karnataka.gov.in/service89/PaymentDetailsReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇನಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು Select Year / ವರ್ಷ ಆಯ್ಕೆ ಮಾಡಿಯಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. Select Season / ಋತು ಆಯ್ಕೆ ಮಾಡಿಯಲ್ಲಿ ಯಲ್ಲಿ Kharif / ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ನಂತರ Calamity Type / ವಿಪತ್ತಿನ ವಿಧ ದಲ್ಲಿ DROUGHT / ಬರ ಆಯ್ಕೆ ಮಾಡಿಕೊಳ್ಳಬೇಕು.

ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು.

Bara parihara village list ಬರ ಪರಿಹಾರ ಗೆಟ್ ರಿಪೋರ್ಟ್ ವರದಿ ಓಪನ್ ಆಗದಿದ್ದರೆ ಏನು ಮಾಡಬೇಕು?

ಬರ ಪರಿಹಾರ ವರದಿ ಓಪನ್ ಆಗದಿದ್ದರೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಬೇಕು.

ಬರಗಾಲ ಪರಿಹಾರ ಹಣ ಯಾವ ಯಾವ ರೈತರಿಗೆ ಜಮೆ ಮಾಡಲಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://parihara.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪರಿಹಾರ ಹಣ ಸಂದಾಯ ವರದಿ ( Parihara payment Report) ಪೇಜ್ ತೆರೆದುಕೊಳ್ಳುತ್ತದೆ.ಅಲ್ಲಿ ನಿಮಗೆ ಪರಿಹಾರ ನಮೂದು ಸಂಖ್ಯೆ ಹಾಗೂ ಆಧಾರ್ ಸಂಖ್ಯೆ ಹೀಗೆ ಎರಡು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು.  ಆಗ Select Calamity Type ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು.  Select Year Type 2023-24 ಆಯ್ಕೆ ಮಾಡಿಕೊಳ್ಳಬೇಕು.

ನಿಮ್ಮ 12 ಅಂಕಿಗಳ ಆಧಾರ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.  ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್  ಹಾಕಿ ವಿವರಗಳನ್ನು ಪಡೆಯಲು / Fetch Details ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ಪ್ರಸಕ್ತಸಾಲಿನ ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ.  ಒಂದು ವೇಳೆ ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗದಿದ್ದರೆ Payment No mode ಎಂಬ ಸಂದೇಶ ಕಾಣಿಸುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಇಲ್ಲೇ ಚೆಕ್ ಮಾಡಿ

ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗದರು ನಿಮ್ಮ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಸಂಪರ್ಕಿಸಬೇಕು. ಏಕೆಂದರೆ  ಗ್ರಾಮ ಪಂಚಾಯತ್ ಬರ ಪರಿಹಾರಕ್ಕೆ ರೈತರ ಹೆಸರುಗಳ ಪಟ್ಟಿಯನ್ನು ಕಳಿಸುತ್ತದೆ. ಗ್ರಾಮ ಪಂಚಾಯತ್  ಕಳಿಸಿದ ರೈತರ ಹೆಸರಿಗೆ ಮಾತ್ರ ಬರ ಪರಿಹಾರ ಹಣ ಜಮೆಯಾಗಲಿದೆ.

Leave a Comment