ಈ ಜಿಲ್ಲೆಯ ರೈತರಿಗೆ 12.50 ಕೋಟಿ ಬರ ಪರಿಹಾರ ಜಮೆ

Written by Ramlinganna

Updated on:

Baragala parihara credited ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ  ಮೈಸೂರು, ಕಲಬುರಗಿ, ಯಾದಗಿರಿ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿರುವ ರೈತರಿಗೆ ಬರಗಾಲ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ. ಯಾರಿಗೆ ಜಮೆಯಾಗಿದೆ ಯಾರಿಗೆ ಜಮೆಯಾಗಿಲ್ಲ? ಮೊಬೈಲ್ ನಲ್ಲೇ ಚೆಕ್ ಮಾಡಿದೆ.

ಮುಂಗಾರು ಬೆಳೆ ಹಾನಿ ಸಂಬಂಧ ಮೈಸೂರು ಜಿಲ್ಲೆಯ 72277 ರೈತರಿಗೆ 12.51 ಕೋಟಿ ರೂಪಾಯಿ ಪರಿಹಾರ ಹಣವನ್ನು ವಿತರಿಸಲಾಗುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ಮೈಸೂರು ಜಿಲ್ಲೆಯ ಎಲ್ಲಾ 9 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದೆ. ಮುಂಗಾರು ಋತುವಿನಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇರೆಗೆ ಫ್ರೂಟ್ಸ್ ಐಡಿ ಹೊಂದಿರುವ ಪಹಣಿ ಜೋಡಣೆಯಾಗಿರುವ ರೈತರಿಗೆ ಡಿಬಿಟಿ ಮೂಲಕ ಎಸ್.ಡಿ.ಆರ್.ಎಫ್ / ಎನ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಮೊದಲನೇ ಕಂತಾಗಿ ಗರಿಷ್ಠ 2000 ರೂಪಾಯಿಯವರೆಗೆ ಬೆಳೆಹಾನಿ ಪರಿಹಾರವನ್ನು ವಿತರಿಸಲಾಗುತ್ತಿದೆ ಎಂದರು.

ಬೆಳೆ ಹಾನಿ ಪರಿಹಾರದ ಹಣ ಖಾತೆಗೆ ಜಮಾ ಆಗದೆ ಇರುವ ಬಗ್ಗೆ ದೂರುಗಳನ್ನು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕು ಹಂತದಲ್ಲಿ ಸಹಾಯವಾಣಿಗಳನ್ನು ತೆರೆಯಲಾಗಿದೆ.

ಮೈಸೂರು ತಾಲೂಕು ಕಚೇರಿಯ ದೂರವಾಣಿ ಸಂಖ್ಯೆ 0821 2414812, ನಂಜನಗೂಡು 08221 223108, ಟಿ. ನರಸಿಪುರ 91485 55170, ಎಚ್.ಡಿ. ಕೋಟೆ 08228 255325, ಹುಣಸೂರು 08222 252929, ಪಿರಿಯಾಪಟ್ಟಣ 08223 274175, ಸರಗೂರು 08228 296100, ಕೆ.ಆರ್. ನಗರ 08223 262371 ಹಾಗೂ ಸಾಲಿಗ್ರಾಮ 08223 262371 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಫ್ರೂಟ್ಸ್ ಐಡಿಗೆ ಪಹಣಿ ಜೋಡಣೆ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೂಟ್ಸ್ ಐಡಿ ಸೃಜಿಸಿಕೊಂಡಿಲ್ಲದ ರೈತರು ತಮ್ಮ ಆಧಾರ್ ಹಾಗೂ ಪಹಣಿ ಮಾಹಿತಿಯನ್ನು ನೀಡಿ ಪ್ರೂಟ್ಸ್ ಐಡಿ ಸೃಜಿಸಿಕೊಳ್ಳುವುದು. ಇಲ್ಲವಾದಲ್ಲಿ ಅಂತಹ ರೈತರಿಗೆ ಪರಿಹಾರಕ್ಕೆ ಅರ್ಹರಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಇತರ ಜಿಲ್ಲೆಯ ರೈತರಿಗೂ ಬರ ಪರಿಹಾರ ಜಮೆಯ ಪ್ರಕ್ರಿಯೆ ನಡೆಯುತ್ತಿದೆ. ಹಾಗಾಗಿ ರೈತರು ಫ್ರೂಟ್ಸ್ ಐಡಿ ಚೆಕ್ ಮಾಡಿಕೊಳ್ಳಬಹುದು.

ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಇದೆಯೇ? ಚೆಕ್ ಮಾಡುವು ಹೇಗೆ?

ನಿಮ್ಮ ಹೆಸರಿಗೆ ಫ್ರೂಟ್ಸ್ ಫ್ರೂಟ್ಸ್ ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ತಂತ್ರಾಂಶದ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಆಧಾರ್ ಕಾರ್ಡ್ ನಮೂದಿಸಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಫಾರ್ಮರ್ಸ್ ಡಿಟೇಲ್ಸ್ ಕೆಳಗಡೆ FruitID ಇರುತ್ತದೆ. ನಿಮ್ಮ ಎಫ್ಐಡಿ ಸಂಖ್ಯೆಯು  FID ಇದ್ದು, ಅದರ ಮುಂದುಗಡೆ ಕೆಲವು ಅಂಕಿಗಳು ಇರುತ್ತದೆ. ಉದಾಹರಣೆಗೆ FID……… ಇಲ್ಲಿ ಎಫ್ಐಡಿ ಅಂಕಿಗಳು ಕಾಣಿಸುತ್ತವೆ. ರೈತರು ತಮ್ಮ ಎಫ್ಐಡಿ ಸಹಾಯದಿಂದ ಯಾವ ಯಾವ ಸರ್ವೆ ನಂಬರ್ ಗಳನ್ನು ಎಫ್ಐಡಿಯಲ್ಲಿ ಸೇರಿಸಲಾಗಿದೆ ಎಂಬುದನ್ನ ಚೆಕ್ ಮಾಡಬಹುದು. ಇದರೊಂದಿಗೆ ಅಲ್ಲಿ ಕಾಣುವ ಪಿಎಂಕೆವೈಡಿ ಸಹಾಯದಿಂದ  ರೈತರು ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಬಹುದು. ಅಂದರೆ ಇಲ್ಲಿಯವರೆಗೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

Baragala parihara credited : ಫ್ರೂಟ್ಸ್ ತಂತ್ರಾಂಶದಲ್ಲಿ ಮೊಬೈಲ್ ನಲ್ಲಿ ನೋಂದಣಿ ಮಾಡಿಕೊಳ್ಳುವುದು ಹೇಗೆ?

ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಲು ಈ

https://fruits.karnataka.gov.in/OnlineUserLogin.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಕಾಣುವ citizen Registration ಮೇಲೆ ಕ್ಲಿಕ್ ಮಾಡಬೇಕು.  ನಂತರ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಬೇಕು. ಆಧಾರ್ ಕಾರ್ಡ್ ಹಾಕಬೇಕು. ನಂತರ I Agree to share my Aadhaar details  ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಲ್ಲಿಸಿ / Submit ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು.

ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಲು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು.ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ, ಜಾತಿ ದೃಡೀಕರಣ ಪತ್ರ, ಫೋಟೋ ಹಾಗೂ ಜಮೀನಿನ ಪಹಣಿ ದಾಖಲೆಗಳೊಂದಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಕೋರಲಾಗಿದೆ.

ಇದನ್ನೂ ಓದಿ ಅನ್ನಭಾಗ್ಯ ಹಣ ನಿಮಗೆ ಜಮೆಯಾಗಿಲ್ಲವೇ? ಸ್ಟೇಟಸ್ ಚೆಕ್ ಮಾಡಿ

Leave a Comment