Baragala parihara ನನ್ನ ಖಾತೆಗೆ ಜಮೆ: ನಿಮಗೆಷ್ಟು ಜಮೆ? ಚೆಕ್ ಮಾಡಿ

Written by Ramlinganna

Published on:

Baragala parihara ಪರಿಹಾರ ಹಣ ನನ್ನ ಖಾತೆಗೆ ಜಮೆಯಾಗಿದೆ. ನಿಮ್ಮ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ರೈತರು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗುತ್ತಿದೆ.  ನನ್ನ ಖಾತೆಗೆ ಬೆಳೆಹಾನಿ ಪರಿಹಾರ ಹಣ ಜಮೆಯಾಗಿರುವ ಮೆಸೆಜ್ ಬಂದಿದೆ. ನಿಮಗೂ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿರಬಹುದು. ಒಮ್ಮೆ ನೀವು ನಿಮ್ಮ ಮೊಬೈಲಿಗೆ ಮೆಸೆಜ್ ಬಂದಿದೆಯೋ ಇಲ್ಲವೋ ಎಂಬುದನ್ನು ಒಮ್ಮೆ ಚೆಕ್ ಮಾಡಿಕೊಳ್ಳಬಹುದು. ಒಂದು ವೇಳೆ ನಿಮ್ಮ ಮೊಬೈಲಿಗೆ ಮೆಸೆಜ್ ಬಂದಿಲ್ಲವಾದರೆ ಬ್ಯಾಲೆನ್ಸ್ ಚೆಕ್ ಮಾಡಿ ನೋಡಿಕೊಳ್ಳಬಹುದು.

Baragala parihara ಪರಿಹಾರ ಹಣ ಯಾರಿಗೆ ಎಷ್ಟು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ

2023-24ನೇ ಸಾಲಿನಲ್ಲಿ ಬೆಳೆ ಹಾನಿಯಾದ ರೈತರ ಖಾತೆಗೆ ಹಣ ಜಮೆಯಾಗಿರುವುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲಕ್ಟ್ ಇಯರ್ ಟೈಪ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಸಂಖ್ಯೆ ನಮೂದಿಸಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು.

ಇದನ್ನೂ ಓದಿ ಗೃಹಲಕ್ಷ್ಮೀ ಯೋಜನೆಯ 4ನೇ ಕಂತಿನ ಹಣ ಜಮೆ: ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರೈತರ ಅಪಾರ ಬೆಳೆ ಹಾನಿಯಾಗಿತ್ತು. ಹಾಗಾಗಿ ರಾಜ್ಯ ಸರ್ಕಾರವು 216 ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿತ್ತು. ಈಗ ಬರಗಾಲ ಘೋಷಣೆಯಾದ ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡಲಾಗುತ್ತಿದೆ.

ಬೆಳೆ ವಿಮೆ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡುವುದು ಹೇಗೆ?

ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/publichome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಫಾರ್ಮರ್ಸ್ ಕೆಳಗಡೆ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಪ್ರೊಪೋಸಲ್ , ಮೊಬೈಲ್ ನಂಬರ್ ಹಾಗೂ ಆಧಾರ್ ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು.  ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು.  ಅಲ್ಲಿ ಕ್ಯಾಪ್ಚ್ಯಾ ಕೋಡ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ಬೆಳೆ ವಿಮೆ ಹಣ ಯಾವಾಗ ಜಮೆಯಾಗುತ್ತದೆ?

ರೈತರು ಮುಂಗಾರು ಅಥವಾ ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಿದ ನಂತರ ಪ್ರಾಕೃತಿಕ ವಿಕೋಪದಿಂದಾಗಿ ರೈತರ ಬೆಳೆಹಾನಿಯಾದರೆ 72 ಗಂಟೆಯೊಳಗೆ ವಿಮಾ ಕಂಪನಿಗೆ ದೂರು ನೀಡಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ದೂರು ನೀಡಿದ ರೈತರ ಜಮೀನಿಗೆ ಬಂದು ಬೆಳೆ ಹಾನಿಯಾಗಿರುವ ಕುರಿತು ಪರಿಶೀಲನೆ ನಡೆಸುತ್ತಾರೆ. ರೈತರ ಬೆಳೆ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದನ್ನು ಪರಿಶೀಲಿಸಿ ವಿಮೆ ಪಾವತಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು. ಆಗ ರೈತರ ಖಾತೆಗೆ ವಿಮಾ ಹಣ ಜಮೆಯಾಗುವುದು. ರೈತರ ಎಷ್ಟು ಎಕರೆಗೆ ವಿಮೆ ಮಾಡಿಸಿದ್ದಾರೋ ಹಾಗೂ ಅವರ ಬೆಳೆ ಯಾವ ಹಂತದಲ್ಲಿ ಹಾನಿಯಾಗಿದೆಯೋ ಅದನ್ನು ಆಧರಿಸಿ ರೈತರಿಗೆ ವಿಮೆ ಹಣ ಜಮೆ ಮಾಡಲಾಗುವುದು.

Leave a Comment