ಈ ರೈತರಿಗೆ ಬರಗಾಲ ಪರಿಹಾರ ಜಮೆ-ಸ್ಟೇಟಸ್ ಚೆಕ್ ಮಾಡಿ

Written by Ramlinganna

Updated on:

Baragala Parihara beneficiary list : ಪ್ರಸಕ್ತ ಸಾಲಿನ ಬರಗಾಲ ಪರಿಹಾರ ಪಡೆಯಲಿರುವ ರೈತರ ಪಟ್ಟಿ ಬಿಡುಗಡೆಯಾಗಿದೆ. ಈ ಲಿಸ್ಟ್ ನಲ್ಲಿದ್ದ ರೈತರಿಗೆ ಮಾತ್ರ ಬರಗಾಲ ಪರಿಹಾರ ಹಣ ಜಮೆಯಾಗಲಿದೆ. ಹಾಗಾದರೆ ಯಾವ ಯಾವ ರೈತರು ಬರಗಾಲ ಪರಿಹಾರ ಪಡೆಯಲಿರುವರು? ಅವರ ಹೆಸರುಗಳನ್ನು ಎಲ್ಲಿ ಚೆಕ್ ಮಾಡಬೇಕು? ಈಗಾಗಲೇ ಬರಗಾಲ ಪರಿಹಾರ ಹಣ ಜಮೆಯಾಗಿದೆ? ಒಂದು ವೇಳೆ ಬರಗಾಲ ಪರಿಹಾರ ಹಣ ಬಿಡುಯಾಗಿದ್ದರೂ ಖಾತೆಗೆ ಏಕೆ ಜಮೆಯಾಗಿಲ್ಲ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ರಾಜ್ಯದಲ್ಲಿ 216ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು, ಮೊದಲ ಕಂತಿನ ಹಣವನ್ನು ಸಹ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಬಹುತೇಕ ಜಿಲ್ಲೆಗಳಲ್ಲಿ ರೈತರ ಖಾತೆಗೆ ಬರಗಾಲ ಪರಿಹಾರದ ಮೊದಲ ಕಂತು ಜಮೆಯಾಗಿದೆ. ಇನ್ನೂ ಯಾರ ಯಾರ ರೈತರ ಖಾತೆಗೆ ಬರಗಾಲ ಪರಿಹಾರ ಹಣ ಜಮೆಯಾಗಲಿದೆ ಎಂಬುದನ್ನು ಚೆಕ್ ಮಾಡೋಣ.

ಯಾರ ಖಾತೆಗೆ ಬರಗಾಲ ಪರಿಹಾರದ ಮೊದಲ ಕಂತು ಜಮೆಯಾಗಿಲ್ಲವೋ ಅವರು ಆತಂಕ ಪಡಬೇಕಿಲ್ಲ, ಅತೀ ಶೀಘ್ರದಲ್ಲಿ ಜಮೆಯಾಗದ ರೈತರ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು.

Baragala Parihara beneficiary list ನಲ್ಲಿ ನಿಮ್ಮಹೆಸರಿದೆಯೇ? ಇಲ್ಲೇ ಚೆಕ್ ಮಾಡಿ

ಬರಗಾಲ ಪರಿಹಾರ ಹಣ ಯಾರು ಯಾರು ಪಡೆಯಲಿದ್ದಾರೆ ಆ ಪಟ್ಟಿಯಲ್ಲಿ ಯಾವ ಯಾವ ರೈತರ ಹೆಸರಿದೆ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಜಿಲ್ಲೆಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ವೀಕ್ಷಿಸು ಮೇಲೆ ಕ್ಲಿಕ್ ಮಾಡಿದರೆ ಸಾಕು ಯಾರು ಯಾರು ಬರಗಾಲ ಪರಿಹಾರ ಹಣ ಪಡೆಯಬಲ್ಲರೋ ಅವರ ಹೆಸರು ಕಾಣಿಸುತ್ತದೆ.

Bara Parihara ನಿಮ್ಮ ಖಾತೆಗೆ ಜಮೆಯಾಗಿದೆಯೇ? ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು.ಅಲ್ಲಿ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ ಡ್ರಾಟ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಇಯರ್ ಟೈಪ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.

ಬೆಳೆ ಹಾನಿ ಪರಿಹಾರ ಪಾವತಸಲು ಅನುಮತಿ

ರಾಜ್ಯ ಸರ್ಕಾರದ ವತಿಯಿಂದ 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್.ಡಿ.ಆರ್.ಎಫ್ / ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 2000 ರೂಪಾಯಿಯವರೆಗೆ ರೈತರಿಗೆ ಪಾವತಿಸಲು ಸರ್ಕಾರವು ಅನುಮತಿ ನೀಡಿದೆ.

ಇದನ್ನೂ ಓದಿ : ಗ್ರಾಪಂ ವ್ಯಾಪ್ತಿಯ ಈ ಆಸ್ತಿಗಳ ದಾಖಲೆ ಹೀಗೆ ಡೌನ್ಲೋಡ್ ಮಾಡಿ

ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು

Leave a Comment