Baragala parihara list released ಬರಗಾಲ ಪರಿಹಾರ ಪಡೆಯುವವರ ಪಟ್ಟಿ ಬಿಡುಗಡೆಯಾಗಿದೆ. ಹೌದು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ಹಾನಿಯಾಗಿರುವ ರೈತರಿಗೆ ಸರ್ಕಾರದ ವತಿಯಿಂದ ಬರ ಪರಿಹಾರ ಹಣ ನೀಡಲಾಗುವುದು.
ತಮಗೆಲ್ಲಾ ಗೊತ್ತಿದ್ದ ಹಾಗೆ ರಾಜ್ಯದಲ್ಲಿ 216 ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ.ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಬಹುತೇಕ ಜಿಲ್ಲೆಗಳಲ್ಲಿ ರೈತರ ಖಾತಗೆ ಬರಗಾಲ ಪರಿಹಾರದ ಹಣ ಜಮೆಯಾಗಿದೆ. ಇನ್ನೂ ಯಾರ ಯಾರ ಖಾತೆಗೆ ಬರಗಾಲ ಪರಿಹಾರ ಹಣ ಜಮೆಯಾಗಿಲ್ಲವೋ ಅವರಿಗೆ ಮುಂದಿನ ವಾರದಲ್ಲಿ ಜಮೆ ಮಾಡಲಾಗುವುದು ಎಂದು ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕುರಿತು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಯಾವ ಬೆಳೆಗೆ ಎಷ್ಟು ವಿಮೆ ಜಮೆ ಆಗಲಿದೆ? ಇಲ್ಲೇ ಚೆಕ್ ಮಾಡಿ
ಯಾರ ಖಾತೆಗೆ ಬರಗಾಲ ಪರಿಹಾರದ ಮೊದಲ ಕಂತು ಜಮೆಯಾಗಿಲ್ಲವೋ ಅವರು ಆತಂಕ ಪಡಬೇಕಿಲ್ಲ, ಅತೀ ಶೀಘ್ರದಲ್ಲಿ ಜಮೆಯಾಗದ ರೈತರ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು.
Baragala parihara list released ಬರಗಾಲ ಪರಿಹಾರ ಪಟ್ಟಿಯಲ್ಲಿ ನಿಮ್ಮಹೆಸರಿದೆಯೇ? ಇಲ್ಲೇ ಚೆಕ್ ಮಾಡಿ
ಬರಗಾಲ ಪರಿಹಾರ ಹಣ ಸಿಗುವವರ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ
https://fruitspmk.karnataka.gov.in/MISReport/FarmerDeclarationReport.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಎಫ್ಎಸ್.ಡಿ ಪಡೆದ ರೈತರ ಪಟ್ಟಿ ಕಾಣಿಸುತ್ತದೆ. ಅಲ್ಲಿ ನಿಮ್ಮ ಜಿಲ್ಲೆಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ವೀಕ್ಷಿಸು ಮೇಲೆಕ್ಲಿಕ್ ಮಾಡಿದರೆ ಸಾಕು ಯಾರು ಯಾರು ಬರಗಾಲ ಪರಿಹಾರ ಹಣ ಪಡೆಯಬಲ್ಲರೋ ಅವರ ಹೆಸರು ಕಾಣಿಸುತ್ತದೆ.
ನಿಮ್ಮ ಖಾತೆಗೆ ಜಮೆಯಾಗಿದೆಯೇ? ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು.ಅಲ್ಲಿ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ ಡ್ರಾಟ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಇಯರ್ ಟೈಪ್ ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮಗೆ ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.
ಬೆಳೆ ಹಾನಿ ಪರಿಹಾರ ಪಾವತಸಲು ಅನುಮತಿ
ರಾಜ್ಯ ಸರ್ಕಾರದ ವತಿಯಿಂದ 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್.ಡಿ.ಆರ್.ಎಫ್ / ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 2000 ರೂಪಾಯಿಯವರೆಗೆ ರೈತರಿಗೆ ಪಾವತಿಸಲು ಸರ್ಕಾರವು ಅನುಮತಿ ನೀಡಿದೆ.ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್.ಡಿ.ಆರ್.ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹಾಗಾಗಿ ಅತೀ ಶೀಘ್ರದಲ್ಲಿ ಎಲ್ಲಾ ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲಿದೆ.