Baragala parihara status 2024 ಮೊಬೈಲ್ ನಲ್ಲಿ ಚೆಕ್ ಮಾಡಿ

Written by Ramlinganna

Updated on:

Baragala parihara status check  ಬರಗಾಲ ಪರಿಹಾರ ಹಣ ಯಾರಿಗೆ ಜಮೆಯಾಗುತ್ತದೆ? ಯಾರಿಗೆ ಜಮೆ ಆಗುವುದಿಲ್ಲ ಎಂಬ ಸ್ಟೇಟಸನ್ನು  ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರೈತರು ಬರಗಾಲ ಪರಿಹಾರ ಹಣ ತಮಗೆ ಎಷ್ಟು ಜಮೆಯಾಗಿದೆ? ಇದರೊಂದಿಗೆ ಕಳೆದ ನಾಲ್ಕೈದು ವರ್ಷಗಳ ಹಿಂದೆ ಬೆಳೆ ಹಾನಿ ಪರಿಹಾರ ಹಣ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Baragala parihara status check  ಬರಗಾಲ ಪರಿಹಾರ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಬರಗಾಲ ಪರಿಹಾರ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪರಿಹಾರ ಹಣ ಸಂದಾಯ ವರದಿ ( Parihara Payment Report) ಕಾಣಿಸುತ್ತದೆ. ಅಲ್ಲಿ ನಿಮಗೆ ಎರಡು ಆಯ್ಕೆಗಳು ಕಾಣಿಸುತ್ತವೆ. ಪರಿಹಾರ ನಮೂದು ಸಂಖ್ಯೆಹಾಗೂ ಆಧಾರ್ ಸಂಖ್ಯೆ ಹೀಗೆ ಎರಡು ಆಯ್ಕೆಗಳಲ್ಲಿ ರೈತರು ಆಧಾರ್ ಸಂಖ್ಯೆ / Aadhar Number ಆಯ್ಕೆ ಮಾಡಿಕೊಳ್ಳಬೇಕು. ನಂತರ ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. Select Year Type ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಲು / Fetch Details ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ಓಪನ್ಆಗುವುದು. ಅಲ್ಲಿ ಬರಗಾಲ ಪರಿಹಾರ ಹಣ ಜಮೆಯಾಗಿದ್ದರೆ ಎಕರೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಮಾಹಿತಿ ಕಾಣಿಸುತ್ತದೆ.

ಯಾವ ಬೆಳೆಗೆ ಎಷ್ಟು ಬರಗಾಲ ಪರಿಹಾರ ಹಣ ಜಮೆಯಾಗುವುದು?

ಎನ್.ಡಿ.ಆರ್.ಎಫ್ ನಿಯಮದ ಪ್ರಕಾರ ಶೇ. 33 ಕ್ಕಿಂತ ಹೆಚ್ಚು ಹಾನಿಯಾದ ವಿಸ್ತೀರ್ಣಕ್ಕೆ ಪ್ರತಿ ಹೆಕ್ಟೇರ್ ಗೆ ಪರಿಹಾರ ನಿಗದಿ ಮಾಡಲಾಗಿದೆ.

ಹೌದು, ಪ್ರತಿ ಹೆಕ್ಟೇರ್ ಮಳೆ ಆಶ್ರಿತ ಬೆಳೆಗೆ 8500 ರೂಪಾಯಿ, ನೀರಾವರಿ ಪ್ರತಿ ಹೆಕ್ಟೇರ್  ಬೆಳೆಗೆ 17 ಸಾವಿರ ರೂಪಾಯಿ ಬಹುವಾರ್ಷಿಕ ಪ್ರತಿ ಹೆಕ್ಟೇರ್ ಬೆಳೆಗೆ 22500 ಪರಿಹಾರ ನಿಗದಿ ಮಾಡಿದೆ. ಮಾರ್ಗಸೂಚಿ ಅನ್ವಯ ಎರಡು ಹೆಕ್ಟೇರ್ ವರೆಗೆ ಮಾತ್ರ ಬೆಳೆ ಪರಿಹಾರ ನೀಡಲಾಗುತ್ತದೆ.

ಇದನ್ನೂ ಓದಿ ಗೃಹಲಕ್ಷ್ಮೀ ಯೋಜನೆಯ 4ನೇ ಕಂತಿನ ಹಣ ಜಮೆ: ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಅನುದಾನದಡಿ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರಿಗೆ ತಲಾ 2 ಸಾವಿರ ರೂಪಾಯಿ ಹಣವನ್ನು ಪಾವತಿಸಲು ತೀರ್ಮಾನಿಸಲಾಗಿದೆ. ಉಳಿಕೆ ಪರಿಹಾರದ ಮೊತ್ತವನ್ನು ಕೇಂದ್ರದಿಂದ ಅನುದಾನ ಬಂದ ಮೇಲೆ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಪರಿಹಾರ ನೀಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಮಾಹಿತಿ ತಿಳಿಸಿದ್ದಾರೆ.

ಮುಂದಿನ ವಾರದೊಳಗೆ ಎಲ್ಲಾ ರೈತರ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಲು ಕ್ರಮಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಹಾಗಾಗಿ ಮುಂದಿನ ವಾರದಲ್ಲಿ ರೈತರ ಖಾತೆಗೆ ಬರಗಾಲ ಪರಿಹಾರ ಹಣ ಜಮಯಾಗುವ ಸಾಧ್ಯತೆಯಿದೆ.

ತಮಗೆಲ್ಲಾ ಗೊತ್ತಿದ್ದ ಹಾಗೆ 216 ತಾಲೂಕುಗಳನ್ನು ಬರಗಾಲ ತಾಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದೆ. ಹಾಗಾಗಿ ಯಾವ ಯಾವ ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಲಾಗಿದೆ ಆ ರೈತರ ಖಾತೆಗೆ ಶೀಘ್ರದಲ್ಲಿ ಬರಗಾಲ ಪರಿಹಾರ ಹಣ ಜಮೆ ಮಾಡಲಾಗುವುದು. ಡಿಸೆಂಬರ್ 25 ರೊಳಗಾಗಿ ಎಲ್ಲಾ ರೈತರ ಖಾತೆಗೆ ಹಣ ಜಮೆಯಾಗುವ ಸಾಧ್ಯತೆಯಿದೆ.

Leave a Comment