ಬರ ಪರಿಹಾರ ಮೊದಲ ಕಂತಿನ 2500 ರೂಪಾಯಿ ಹಣ ಈ ಜಿಲ್ಲೆಯ ರೈತರ ಖಾತೆಗೆ ಜಮೆ

Written by Ramlinganna

Published on:

Baraparihara 1st installment released : ರಾಜ್ಯದಲ್ಲಿ ಸೃಷ್ಟಿಯಾಗಿರುವ ಬರ ಪರಿಸ್ಥಿತಿಯಿಂದ ಸಮಸ್ಯೆಗೊಳಗಾಗಿರುವ ರೈತರಿಗೆ ಗರಿಷ್ಠ 5 ಸಾವಿರ ರೂಪಾಯಿ ಬರ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ.

ಇದರ ಮೊದಲ ಕಂತಿನ 2500 ರೂಪಾಯಿ ಹಣವನ್ನು ಪಾವತಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಗುರುವಾರ ಯಾದಗಿರಿ ಜಿಲ್ಲೆಯ 1.06 ಲಕ್ಷ ರೈತರಿಗೆ ಮೊದಲ ಕಂತಿನ ತಲಾ 2500 ರೂಪಾಯಿ ಹಣವನ್ನು ಒಠ್ಟು 17.43 ಕೋಟಿ ರೂಪಾಯಿ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಿದ್ದಾರೆ. ಆ ಮೂಲಕ ರಾಜ್ಯದ ಬರ ಪೀಡಿತ 226 ತಾಲೂಕುಗಳ ರೈತರಿಗೆ ಮೊದಲ ಕಂತಿನ ಬರ ಪರಿಹಾರ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ ಅವರು, ಬರ ಪೀಡಿತ ತಾಲೂಕುಗಳ ರೈತರಿಗೆ ತಲಾ 5 ಸಾವಿರ ರೂಪಾಯಿ ಬರ ಪರಿಹಾರ ನೀಡಲು ತೀರ್ಮಾನಿಸಿದೆ. ಅದರ ಮೊದಲ ಕಂತಿನ ರೂಪದಲ್ಲಿ 2500 ರೂಪಾಯಿ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಹಣವನ್ನು ಬಿಡುಗಡೆ ಮಾಡಲಾಗುವುದು. ಪ್ರಾಯೋಗಿಕವಾಗಿ ಯಾದಗಿರಿ ಜಿಲ್ಲೆಯ ರೈತರ ಬರ ಪರಿಹಾರ ಹಣ ಪಾವತಿಸಲಾಗಿದೆ ಎಂದರು.

ಉತ್ತರ ಕನ್ನಡ, ಕೋಲಾರ, ಬೀದರ್, ಬೆಂಗಳೂರು, ಬಳ್ಳಾರಿ, ಧಾರವಾಡ, ಚಾಮರಾಜನಗರ, ಕೊಪ್ಪಳ, ಬೆಂಗಳೂರು ದಕ್ಷಿಣ ಸೇರಿದಂತೆ 15 ಜಿಲ್ಲೆಗಳಿಗೆ ಬರ ಪರಿಹಾರ ಪಾವತಿ ಕಡತಗಳ ತಯಾರಿಕೆ ಪ್ರಕ್ರಿಯೆಯಲ್ಲಿದೆ. ಎಲ್ಲಾ ಜಿಲ್ಲೆಗಳಲ್ಲಿನ ಅರ್ಹ ರೈತರಿಗೆ ಮೊದಲ ಕಂತಿನ ಇನ್ ಪುಟ್ ಸಬ್ಸಿಡಿ ಶೀಘ್ರ ವಿತರಿಸಲಾಗುವುದು. ಮುಂದಿನ 15 ರಿಂದ 20 ದಿನಗಳಲ್ಲಿ 2ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ವಿವರಿಸಿದರು.

Baraparihara 1st installment released ಬರ ಪರಿಹಾರ ನಿಮಗೆ ಜಮೆಯಾಗಿದೆಯೇ ಹೀಗೆ ಚೆಕ್ ಮಾಡಿ

ಬರ ಪರಿಹಾರ ಹಣ ನಿಮ್ಮ ಖಾತೆಗ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://parihara.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗ  ಪರಿಹಾರ ನಮೂದು ಸಂಖ್ಯೆ ಆಧಾರ್ ಸಂಖ್ಯೆ ಎಂಬ ಎರಡು ಆಯ್ಕೆಗಳು ಕಾಣಿಸುತ್ತವೆ. ಅಲ್ಲಿ ನೀವು ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ನೀವು  Calamity Type ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು Year ನಲ್ಲಿ 2025-27 ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನೀವು ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬರ ಪರಿಹಾರ ಹಣ ಜಮೆಯಾಗಿದ್ದರೆ ಯಾವ ಸರ್ವೆ ನಂಬರಿಗೆ ಯಾವಾಗ ಬ್ಯಾಂಕ್ ನ ಖಾತೆಗೆ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಇದನ್ನೂ ಓದಿ : ಗೂಡ್ಸ್ ವಾಹನ ಟ್ಯಾಕ್ಸಿ ವಾಹನ ಖರೀದಿಗೆ 4 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಜಂಟಿ ಬೆಲೆ ಹಾನಿ ಮೌಲ್ಯಮಾಪನ ವರದಿ ಪ್ರಕಾರ ರಾಜ್ಯದಲ್ಲಿ 57.93 ಲಕ್ಷ ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ. ಈ ವಿಪತ್ತಿನಿಂದ ರೈತರು ಕಂಗೆಟ್ಟಿದ್ದಾರೆ. 226 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡುವ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಯೇ ಮಾಡಲಾಗಿದೆ. ಯಾರ ಒತ್ತಡಕ್ಕೂ ಮಣಿಯದೆ ಪರಿಶೀಲನೆ ನಡೆಸಿ ವರದಿ ಸಿದ್ದಪಡಿಸಲಾಗಿದೆ. ಕಾನೂನು ಪ್ರಕಾರರವೇ ಕಂದಾಯ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಪರಮೇಶ್ವರ ಅವರು ಅನುಮೋದನೆ ಪಡೆದ ನಾನು ಬರಪೀಡಿತ ತಾಲೂಕು ಘೋಷಣೆ ಮಾಡಿದ್ದೇನೆ ಎಂದರು.

ಬರಗಾಲದಿಂದ ರಾಜ್ಯದಲ್ಲಿ 62 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ. ಕೇಂದ್ರದಿಂದ 22400 ಕೋಟಿ ರೂಪಾಯಿ ಪರಿಹಾರ ಒದಗಿಸಲು ಕೋರಲಾಗಿದೆ.  ಈ ಸಂಬಂಧ ಪ್ರಧಾನಿ ಅವರನ್ನು ಭೇಟಿಗೆ ನಿರ್ಧರಿಸಲಾಗಿದ್ದು ಅದಕ್ಕಾಗಿ ಸಮಯ ಕೇಳಿದ್ದೇವೆ. ಸರ್ವ ಪಕ್ಷ ನಿಯೋಗ ಕರೆತರುವುದಾಗಿ ತಿಳಿಸಿದ್ದೇವೆ. ಸರ್ವ ಪಕ್ಷದವರನ್ನು ನಮ್ಮ ಜತೆ ಬಂದು ಕೇಂದ್ರದ ಮೇಲೆ ಒತ್ತಡ ಹಾಕಲು ಕೋರಿದ್ದೇವೆ ಎಂದು ಹೇಳಿದರು.

 

Baraparihara

Barapariharareleased

Bara parihara amount

Bara parihara money released

Bara parihara installment

 

Leave a Comment