ಈ ಬೆಳೆಗಳಿಗೆ ವಿಮೆ ಮಾಡಿಸಲು ಇನ್ನೂ 6 ದಿನ ಬಾಕಿ

Written by Ramlinganna

Updated on:

Before 28th insure your crop  ಬೇಸಿಗೆ ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಲು ಇನ್ನೂ ಕೇವಲಲ 6 ದಿನ ಉಳಿದಿದೆ. ಹೌದು, ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಿದಂತೆ ಬೇಸಿಗೆ ಹಂಗಾಮಿನ ಬೆಳೆಗಳಿಗೂ ವಿಮೆ ಮಾಡಿಸಬಹುದು. ಆದರೆ ಇನ್ನೂ 6 ದಿನಗಳೊಳಗೆ ವಿಮೆ ಮಾಡಿಸಿದರೆ ವಿಮಾ ಸೌಲಭ್ಯ ಪಡೆಯಬಹುದು. ಹಾಗಾದರೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು?  ಯಾವ ಬೆಳೆಗೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು? ಹಾಗೂ ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Before 28th insure your crop  ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು?

ರೈತರು ಬೇಸಿಗೆ ಹಂಗಾಮಿನ ಸೂರ್ಯಕಾಂತಿ, ನೆಲಗಡಲೆ (ಶೇಂಗಾ), ಈರುಳ್ಳಿ ಬೆಳೆಗಳಿಗೆ ವಿಮೆ ಮಾಡಿಸಬಹುದು. ಹೌದು ಈ ಬೆಳೆಗಳಿಗೆ ವಿಮೆ ಮಾಡಿಸಲು ಫೆಬ್ರವರಿ 28 ಕೊನೆಯ ದಿನವಾಗಿದೆ. ಈ ದಿನಾಂಕದೊಳಗೆ ವಿಮೆ ಮಾಡಿಸಬಹುದು.

ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು?

ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ರೈತರು ಈ

https://www.samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ತಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಹಾಗೂ ವಿಮೆ ಮಾಡಿಸಲು ಕೊನೆಯ ದಿನ ಯಾವುದು? ವಿಮೆ ಮಾಡಿಸಲು ಇನ್ನೂ ಎಷ್ಟು ದಿನ ಬಾಕಿ ಉಳಿದಿದೆ ಎಂಬ ಪಟ್ಟಿ ಕಾಣುತ್ತದೆ.

ಯಾವ ಬೆಳೆಗೆ ಎಷ್ಟು ವಿಮೆ ಹಣ ಪಾವತಿಸಬೇಕು? ಎಷ್ಟು ವಿಮೆ ಹಣ ಜಮೆಯಾಗುತ್ತದೆ?

ರೈತರು ಯಾವ ಬೆಳೆಗೆ ಎಷ್ಟು ವಿಮೆ ಹಣ ಪಾವತಿಸಬೇಕಾಗುತ್ತದೆ ಅಂದರೆ ರೈತರ ವಂತಿಗೆ ಎಷ್ಟಿದೆ? ವಿಮೆ ಮಾಡಿಸಿದ ನಂತರ ರೈತರ ಬೆಳೆ ಹಾಳಾದರೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/Premium/Premium_Chart.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಂಡ ನಂತರ ಹೋಬಳಿ ಸೆಲೆಕ್ಟ್ ಮಾಡಿಕೊಳ್ಳಬೇಕು. ನಂತರ ನಿಮ್ಮ ಗ್ರಾಮ ಸೆಲೆಕ್ಟ್ ಮಾಡಿಕೊಳ್ಳಬೇಕು. ಆಗ ನಿಮ್ಮ ಊರಿನಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬ ಪಟ್ಟಿ ಕಾಣುತ್ತದೆ. ಆ ಪಟ್ಟಿಯಲ್ಲಿರುವ ಬೆಳೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಎಷ್ಟು ಎಕರೆಗೆ ವಿಮೆ ಮಾಡಿಸಬೇಕೆಂದುಕೊಂಡಿದ್ದೀರೋ ಅಲ್ಲಿ ಕಾಣುವ Area in acre ಬಾಕ್ಸ್ ನಲ್ಲಿ ನಮೂದಿಸಬೇಕು. ಗುಂಟೆಯಲ್ಲಿ ಜಮೀನು ಇದ್ದರೆ ಗುಂಟೆ ಸಹ ನಮೂದಿಸಬೇಕು. ಇದಾದನಂತರ Show Premium ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಎಷ್ಟು ವಿಮಾ ಹಣ ಜಮೆಯಾಗುತ್ತದೆ. ರೈತರು ಎಷ್ಟು ವಿಮೆ ಹಣ ಪಾವತಿಸಬೇಕು ಎಂಬ ಪಟ್ಟಿ ಕಾಣುತ್ತದೆ.

ಇದನ್ನೂ ಓದಿ : ಕೃಷಿ ಸೌಲಭ್ಯ ಪಡೆಯಲು K-Kisan ನೋಂದಣಿ ಕಡ್ಡಾಯ – ಮೊಬೈಲ್ ನಲ್ಲಿ ಹೀಗೆ ನೋಂದಣಿ ಮಾಡಿಸಿ

ಉದಾಹರಣೆಗ ನೀವು ಶೇಂಗಾ ಬೆಳೆಗೆ ವಿಮೆ ಮಾಡಿಸಬೇಕೆಂದುಕೊಂಡರೆ ಒಂದು ಎಕರೆಗೆ 23067 ರೂಪಾಯಿ ಜಮೆಯಾಗುತ್ತದೆ. ಇದಕ್ಕೆ ರೈತರು 346 ರೂಪಾಯಿ ವಿಮೆ ಪಾವತಿಸಬೇಕು. ಕೇಂದ್ರ ಸರ್ಕಾರವು 1664ಹಾಗೂ ರಾಜ್ಯ ಸರ್ಕಾರವು 1664 ರೂಪಾಯಿ ಪಾವತಿಸುತ್ತದೆ. ಒಟ್ಟು 3674 ರೂಪಾಯಿ ವಿಮೆ ಹಣ ಪಾವತಿಸಲಾಗುವುದು.

ಬೆಳೆ ಹಾನಿಯಾದರೆ ಯಾರಿಗೆ ಯಾವಾಗ ಕರೆ ಮಾಡಬೇಕು?

ವಿಮೆ ಮಾಡಿಸಿದ ರೈತರು ಬೆಳೆ ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾನಿಯಾದರೆ 72 ಗಂಟೆಯೊಳಗೆ ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೋ ಆ ವಿಮಾ ಕಂಪನಿಗೆ ಕರೆ ಮಾಡಬೇಕು. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ರೈತರ ಜಮೀನಿಗೆ ಬಂದು ಪರಿಶೀಲನೆ ಮಾಡಿ ಬೆಳೆ ಹಾನಿ ಪರಿಹಾರಕ್ಕಾಗಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತಾರೆ.

Leave a Comment