ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು? ಮೊಬೈಲ್ ನಲ್ಲಿ ಚೆಕ್ ಮಾಡಿ

Written by Ramlinganna

Published on:

Bele vime last date : ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು. ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

2026-27ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.  ಬೆಳೆ ವಿಮೆ ಮಾಡಿಸಲು ಇಚ್ಚಿಸುವ ರೈತರು ನಿಗದಿತ ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಖಆತೆ ಪಾಸ್ ಪುಸ್ತಕ, ಆಧಾರ್ ಕಾರ್ಡ್ ನಕಲು ಪ್ರತಿಗಳನ್ನು ಲಗತ್ತಿಸಿ ತಾವು ಖಾತೆ ಹೊಂದಿರುವ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅಥವಾ ಗ್ರಾಪಂ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

Bele vime last date ನೀವು ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು ? ಹೀಗೆ ಚೆಕ್ ಮಾಡಿ

ನೀವು ಯಾವ ಯಾವ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಈ

https://www.samrakshane.karnataka.gov.in/CropHome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದ. ಅಲ್ಲಿ ನೀವು ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. Crop you can insure ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಮೇಲೆ ಕ್ಲಿಕ್ ಮಾಡಬೇಕು ಇದಾದ ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Display ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ನಿಮ್ಮ ಊರಿನಿಂದ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದರ ಪಟ್ಟಿ ಕಾಣಿಸುತ್ತದೆ. ಇಷ್ಟೇ ಅಲ್ಲ ನೀವು ಬೆಳೆ ವಿಮೆ ಮಾಡಿಸಿದ ನಂತರ ನಿಮಗೆ  ಪ್ರತಿ ಹೆಕ್ಟೇರಿಗೆ ಎಷ್ಟು ಬೆಳೆ ವಿಮೆ ಹಣ ಜಮೆಯಾಗಬಹುದು ಎಂಬ ಮಾಹಿತಿಯೂ ಅಲ್ಲಿ ಕಾಣಿಸುತ್ತದೆ.

ಬೆಳೆ ವಿಮೆ ಮಾಡಿಸುವ ಕೊನೆಯ ದಿನಾಂಕ ಚೆಕ್ ಮಾಡುವುದು ಹೇಗೆ ?

ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬುದನ್ನು ಚೆಕ್ ಮಾಡಲು ಈ

View Cut of dates ಮೇಲೆ ಕ್ಲಿಕ್ ಮಾಡಬೇಕು. ಅಥವಾ ಇಲ್ಲಿ ನೀಡಲಾದ

https://www.samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬ ಬೆಳೆಗಳ ಪಟ್ಟಿ ಕಾಣಿಸುತ್ತದೆ. ಅದರ ಎದುರುಗಡೆ ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬ ಮಾಹಿತಿಯೊಂದಿಗೆ ವಿಮೆ ಮಾಡಿಸಲು ಇನ್ನೂ ಎಷ್ಟು ದಿನ ಬಾಕಿ ಇದೆ ಎಂಬ ಮಾಹಿತಿ ಕಾಣಿಸುತ್ತದೆ.

ಮುಂಗಾರು ಬೆಳೆ ವಿಮೆ ನೋಂದಣಿ ಆರಂಭ

2026-27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಶಲ್ ಬಿಮಾ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ಎಲ್ಲಾ ಅರ್ಹ ರೈತರು (ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರು) ನಿಗದಿತ ಅವಧಿಯೊಳಗೆ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು.

ಇದನ್ನೂ ಓದಿ ಬೆಳೆ ವಿಮೆ ಹೆಕ್ಟೇರಿಗೆ ಎಷ್ಟು ಕಟ್ಟಿದರೆ ಎಷ್ಟು ಜಮೆಯಾಗುತ್ತದೆ ? ಇಲ್ಲಿದೆ ಮಾಹಿತಿ

ಜೋಳ, ಸೂರ್ಯಕಾಂತಿ, ಹತ್ತಿ, ಕೆಂಪು ಮೆಣಸಿನ ಕಾಯಿ, ಈರುಳ್ಳಿ, ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ಸಜ್ಜೆ, ನೆಲಗಡಲೆ, ಬೆಳೆಗಳಿಗೆ ವಿಮೆ ನೋಂದಣಿ ಮಾಡಲು ಅವಕಾಶವಿದೆ.

ಕೃಷಿ ಇಲಾಖೆಯ ನಿಯಮಾವಳಿಗಳ ಪ್ರಕಾರ ಭತ್ತ (ನೀರಾವರಿ) ಮುಸುಕಿನ ಜೋಳ ಗ್ರಾಪಂ ಮಟ್ಟದ ಬೆಳೆ, ಇನ್ನುಳಿದ ಬೆಳೆಗಳನ್ನು ಹೋಬಳಿ ಮಟ್ಟದ ಬೆಳೆಗಳೆಂದು ಪರಿಗಣಿಸಲಾಗಿದೆ.

ಅರ್ಹ ರೈತರು ತಮ್ಮ ಹತ್ತಿರದ ಯಾವದೇ ಸ್ಥಳೀಯ ಬ್ಯಾಂಕುಗಳು, ಸಾರ್ವಜನಿಕ ಸೇವಾ ಕೇಂದ್ರಗಳು, ಗ್ರಾಪಂ ಮಟ್ಟದಲ್ಲಿ ಹೊಸದಾಗಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಿ ವಿಮೆ ನೋಂದಾಯಿಸಿಕೊಳ್ಳಬಹುದು.

Leave a Comment