243.52 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ವಿತರಣೆಗೆ ಚಾಲನೆ

Written by Ramlinganna

Published on:

Bele vime parihara release : 2.90 ಲಕ್ಷ ರೈತರಿಗೆ ಬೆಳೆ ವಿಮೆ ಯೋಜನೆಯಡಿ ಮಧ್ಯಂತರ ಪರಿಹಾರ ಹಣ ಡಿಬಿಟಿ ಮೂಲಕ ಬಿಡುಗಡೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು.

ಅವರು ಕಲಬುರಗಿಯಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಸಿರಿಧಾನ್ಯ ಮೇಳ ಹಾಗೂ ಬೆಳೆ ವಿಮೆ ಮಧ್ಯಂತರ ಪರಿಹಾರ ಹಣ ಡಿಬಿಟಿ ಮೂಲಕ ಬಿಡುಗಡೆಗೆ ಚಾಲನೆ ನೀಡಿ ಮಾತನಾಡಿದರು.

Bele vime parihara release ಮೂರು ವರ್ಷದಲ್ಲಿ 2590 ಕೋಟಿ ರೂಪಾಯಿ ರೈತರಿಗೆ ಪರಿಹಾರ

ಪ್ರಸಕ್ತ ಸಾಲಿನಲ್ಲಿ ಕಲಬುರಗಿ ಜಿಲ್ಲೆಯ 3.01 ಲಕ್ಷ ರೈತರು ಬೆಳೆ ವಿಮೆ ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಅಪಾರ ಮಳೆಯಿಂದ  3.24 ಲಕ್ಷ ಹೆಕ್ಟೇರ್  ಪ್ರದೇಶ ಹಾನಿಯಾಗಿತ್ತು. ಬೆಳೆ ವಿಮೆ ಮಾಡಿಸಿಕೊಂಡವರ ಪೈಕಿ 2.90 ಲಕ್ಷ ರೈತರಿಗೆ 243.52 ಕೋಟಿ ರೂಪಾಯಿ ಬೆಳೆ ವಿಮೆ ಮಧ್ಯಂತರ ಪರಿಹಾರ ನೀಡಲು ಚಾಲನೆ ನೀಡಿದೆ. ಕಳೆದ ಮೂರು ವರ್ಷದಲ್ಲಿ ನಮ್ಮ ಸರ್ಕಾರ ಬಂದ ಮೇಲೆ ತೊಗರಿ ನೆಟೆ ರೋಗ ಪರಿಹಾರ, ಬೆಳೆ ಪರಿಹಾರ, ಬರಗಾಲ ಪರಿಹಾರ, ಕಬ್ಬಿಗೆ ಪರಿಹಾರ ಧನ ಹೀಗೆ 15.47 ಲಕ್ಷ ರೈತರಿಗೆ 2590 ಕೋಟಿ ರೂಪಾಯಿ ಪರಿಹಾರ ನೀಡಿದ್ದು, ಹಿಂದೆ ಯಾವ ಸರ್ಕಾರವು ಇಷ್ಟೊಂದು ಪರಿಹಾರ ಅನ್ನದಾತರಿಗ ನೀಡಿಲ್ಲ. ರೈತರ ಏಳಿಗೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಇವೆಲ್ಲಾ ಜಾರಿಗೊಳಿಸಿದೆ. ಇದು ರೈತಪರ ಸರ್ಕಾರ. ನುಡಿದಂತೆ ನಡೆಯುವ ಸರ್ಕಾರ ಎಂದರು.

ವೈಜ್ಞಾನಿಕ ಸಮೀಕ್ಷೆಯಿಂದ ಬೆಳೆ ಪರಿಹಾರ ಹೆಚ್ಚು

ಆಳಂದ ಶಾಸಕ ಬಿ.ಆರ್. ಪಾಟೀಲ್ ಮಾತನಾಡಿ, ಕೃಷಿ ಮತ್ತು ಕಂದಾಯ ಅಧಿಕಾರಿಗಳು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿದ ಪರಿಣಾಮ ಜಿಲ್ಲೆಯ ರೈತರಿಗೆ ಪ್ರಸಕ್ತ ಸಾಲಿನ ಬೆಳೆ ವಿಮೆ ಯೋಜನೆಯಡಿ 243 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಪಡೆಯಲು ಸಾಧ್ಯವಾಗಿದೆ.

ಬೆಳೆ ಕಟಾವು ಆಧಾರ್ದ ಮೇಲೆ ಇದಕ್ಕಿಂತ ಡಬಲ್ ಬರಬಹುದು. ಇಲ್ಲಿರುವುದು ಅದಾನಿ ಕಂಪನಿ ಅಲ್ಲ, ಇಫ್ಕೋ ಕಂಪನಿ, ಇದು ರೈತರ ಹಿ ಹಿಡಿಯುವ ಕಂಪನಿ, ಇದಕ್ಕಾಗಿ ಅಧಿಕಾರಿಗಳಿಗೆ ವೈಯಕ್ತಿಕ ಅಭಿನಂದನೆಗಳು ಸಲ್ಲಿಸುವೆ ಎಂದರು.

ರೈತರಿಗೆ ಇರುವ ಸಂಕಷ್ಟ ಹೆಚ್ಚು ಸಸಿಯಿಂದ ರಾಶಇ ಮಾಡುವವರೆಗೂ ನೂರಾರು ವಿಘ್ನ ಎಲ್ಲವೂ ಸರಿಯಿದ್ದಾಗ ನೈಸರ್ಗಿಕ ವಿಕೋಪದಿಂದಾಗಿ ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಬೇಕೆಂದು ಮನವಿ ಮಾಡಿದ ಅವರು, ಕೇಂದ್ರ ಸರ್ಕಾರ ಇತ್ತೀಚೆಗೆ ಮನರೇಗಾ ಕಾಯ್ದೆ ತಿದ್ದುಪಡಿ ತಂದಿದ್ದಾರೆ.

ಇದನ್ನೂ ಓದಿ ಯಾವುದೇ ಹಗ್ಗ ಟೇಪ್ ಇಲ್ಲದೆ ನಿಮ್ಮ ಜಮೀನಿನ ಅಳತೆ ಮೊಬೈಲ್ ನಲ್ಲಿ ಹೀಗೆ ಮಾಡಿ

ಅಫಜಲ್ಪುರ ಶಾಸಕ ಎಂ.ವೈ. ಪಾಟೀಲ್ ಮಾತನಾಡಿ, ಬಹುಸಂಖ್ಯಾತ ಜನರಿಗೆ ಉದ್ಯೋಗ ನೀಡುವುದು. ಕೃಷಿ ಕ್ಷೇತ್ರ ಕಾರ್ಖಾನೆ ಸ್ಥಾಪನೆಯಿಂದ 100 ರಿಂದ 200 ಜನರಿಗೆ ಕೆಲಸ ಕೊಡಬಹುದು. ಎಲ್ಲರಿಗೂ ಉದ್ಯೋಗ ನೀಡುವುದು ಅಸಾಧ್ಯ. ಅನ್ನದಾತ ಬೆಳೆ ಬೆಳೆದರೆ ಮಾತ್ರ ಎಲ್ಲರಿಗೂ ಉದ್ಯೋಗ ಸಿಗಲಿದೆ ಎಂದರು.

ಕಲಬುರಗಿ ದಕ್ಷಿಣ ಶಾಸಕ ಅಲ್ಲಂಪ್ರಭು ಪಾಟೀಲ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜಿಲ್ಲೆಯ ರೈತರಿಗೆ 2509 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ನೀಡಿದೆ ಎಂದರು.

ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಹೀಗೆ ಚೆಕ್

ಬೆಳೆ ವಿಮೆ ಹಣ ನಿಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ನೀವು ಋತು ಆಯ್ಕೆಯಲ್ಲಿ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ Check status ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನೀವು ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬ್ರ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Search ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣುವ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕಾಣುವು ವಿವ್ ಡಿಟೇಲ್ ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.

Leave a Comment