Bele vime released : ಪ್ರಸಕ್ತ ವರ್ಷದಲ್ಲಿ ತಾಲೂಕಿನ ದ್ರಾಕ್ಷಿ ಬೆಳೆಗಾರರಿಗೆ 40.10 ಕೋಟಿ ವಿಮೆ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿ ತಾಲೂಕಿನ ಘಟನಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಥಣಿ ಹಾಗ ಕೋರಮಂಡಲ ಇಂಟರ್ನ್ಯಾಶನಲ್ ಲಿ. ಸಹಯೋಗದಲ್ಲಿ ಜರುಗಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶಾಲಾ ಕಂಪೌಂಡ್ ನಿರ್ಮಾಣ, ಅಡುಗೆ ಕೋಣೆ ನಿರ್ಮಾಣಕ್ಕೆ ಅಡಿಗಲ್ಲು, ಪ್ರಧಾನಮಂತ್ರಿ ಅವಾಸ್ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಹಾಗೂ ಗ್ರಂಥಾಲಯಕ್ಕೆ ಕಂಪ್ಯೂಟರ್ ವಿತರೆಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಳೆದ ಸಾಲಿನಲ್ಲಿದ್ರಾಕ್ಷಿ ಬೆಳೆಗಾರರಿಗೆ36 ಕೋಟಿ ರೂಪಾಯಿ ಬೆಳೆವಿಮೆ ಮಾಡಲಾಗಿತ್ತು. ಈ ವರ್ಷ ಎಕರೆಗೆ 50 ರಿಂದ 90 ಸಾವಿರದಂತೆ ತಾಲೂಕಿನಲ್ಲಿ 40.10 ಕೋಟಿ ಸರ್ಕಾರದಿಂದ ಪರಿಹಾರ ನೀಡಲಾಗಿದೆ. ಇದರಿಂದ ಕಷ್ಟ ಕಾಲದಲ್ಲಿರೈತರಿಗೆ ಅನುಕೂಲವಾಗಲಿದೆ ಎಂದು ಅವರು ಕೃಷಿ ವಿಮೆ, ತಾಂತ್ರಿಕ ದೋಷ ಹಾಗೂ ಮಾಹಿತಿ ಕೊರತೆಯಿಂದ ರೈತರಿಗೆ ಸರಿಯಾದ ಸಮಯಕ್ಕೆ ವಿಮೆ ಹಣ ಬರುತ್ತಿಲ್ಲ. ಮುಂಬರುವ ದಿನಗಳಲ್ಲಿ ಈಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿಸರ್ಕಾರ ಚಿಂತನೆ ನಡೆಸಿದೆ. ಮೆಕ್ಕೆಜೋಳ, ಸೋಯಾಬಿನ್, ತೊಗರಿ, ಶೇಂಗಾ ಸೇರಿದಂತೆ ಇನ್ನಿತರ ಬೆಳೆಗಳ ಹಾನಿ ಹಾಗೂ ವಿಮೆ ಹಣ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಅಥಣಿ ಪೂರ್ವ ಭಾಗದ ರೈತರ ಬಹುದಿನಗಳ ಕನಸಾಗಿದ್ದ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಕೃಷ್ಣಾ ನದಿ ದಡದ ಝಂಡರವಾಡ ಗ್ರಾಮದ ರೈತರು ಭೂಮಿ ನೀಡಲು ಒಪ್ಪಿದ್ದು, ಶೀಘ್ರದಲ್ಲಿಯೇ ನೀರಾವರಿ ಕಾಮಗಾರಿ ಆರಂಭಿಸುವ ಮೂಲಕ ಬರುವ 20 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಆ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
Bele vime released ನಿಮಗೆ ಬೆಳೆ ವಿಮೆ ಜಮೆಯಾಗಿದೆಯೋ ಇಲ್ಲವೋ ? ಮೊಬೈಲ್ ನಲ್ಲೇ ಚೆಕ್ ಮಾಡಿ
ಕಳೆದ ಸಾಲಿನಲ್ಲಿ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರ ವಿಮೆ ಹಣ ಜಮೆಯಾಗಲು ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗನಿಮಗೆ ಬೆಳೆ ವಿಮೆ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ವರ್ಷದ ಆಯ್ಕೆ 2023-2024 ಆಯ್ಕೆ ಮಾಡಿಕೊಳ್ಳಬೇಕು.ನಂತರ ಮುಂದೆ / ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗಿದ್ದು ಕಾಣಿಸುತ್ತದೆ. ಅಲ್ಲಿ ನೀವು check Status ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ ಮೂರು ಆಯ್ಕೆಗಳು ಕಾಣಿಸುತ್ತವೆ. Proposal Mobile No and Aadhaar ಹೀಗೆ ಮೂರು ಆಯ್ಕೆಗಳು ಕಾಣಿಸುತ್ತವೆ.
ಅದರಲ್ಲಿ ನೀವು Mobile No. ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಬರೆಯಬೇಕು. ಇದಾದ ನಂತರ ಅಲ್ಲಿ ಕಾಣುವ Captcha ಕೋಡ್ ಹಾಕಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಅರ್ಜಿ ವಿಮಾ ಕಂಪನಿಯಿಂದ ಸ್ವೀಕೃತವಾಗಿರುವ ಮಾಹಿತಿ ಕಾಣಿಸುತ್ತದೆ.
ಇದನ್ನೂ ಓದಿ : ಪಿಎಂ ಕಿಸಾನ್ ಜಮೆಯಾಗಲು ಈ ಮಾಹಿತಿಗಳು ಸರಿಯಿರಬೇಕು
ಇದಾದ ನಂತರ ಅಲ್ಲಿ ಕಾಣುವ Select ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ View Details ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿನೀವು ಯಾವ ಸರ್ವೆ ನಂಬರಿಗೆ ವಿಮೆ ಮಾಡಿಸಿದ್ದೀರಿ ಎಷ್ಟು ವಿಮೆ ಹಣ ಪಾವತಿಸಿದ್ದೀರಿ?ನಿಮ್ಮ ಬೆಳೆ ಸಂಪೂರ್ಣ ಹಾನಿಯಾದರೆ ಎಷ್ಟುವಿಮೆ ಹಣ ಜಮೆಯಾಗಬಹುದು ಎಂಬ ಮಾಹಿತಿ ಕಾಣಿಸುತ್ತದೆ.