Belehani parihara amount check : ಮಳೆಯಿಂದ ಬೆಳೆ ಹಾನಿಯಾದ 46,268 ರೈತರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಜೋಡಣೆ ಹಾಗೂ ಹೆಸರಿನಲ್ಲಿ ಆಗಿರುವ ವ್ಯತ್ಯಾಸ ಸರಿಪಡಿಸಿದ ಕೂಡಲೇ ನೇರವಾಗಿ ಅವರ ಖಾತೆಗೆ ಬೆಳೆ ಹಾನಿಯಾದ ಪರಿಹಾರ ಹಣ ಜಮೆ ಮಾಡಲಾಗುವುದು.
ಹೌದು, ಈ ಕುರಿತಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡರವರು ತಿಳಿಸಿದರು.
ಕಾಂಗ್ರೆಸ್ ನ ತಿಪ್ಪಣ್ಣಪ್ಪ ಕಮಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಲಬುರಗಿಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ 3.23.318, ರೈತರಿಗೆ 498.73 ಕೋಟಿ ರೂಪಾಯಿ ಪರಿಹಾರ ಹಣ ಪಾವತಿಸಲಾಗಿದೆ. ಆದರೆ 26,394 ರೈತರಿಗೆ ಹಣ ಪಾವತಿ ಆಗಿಲ್ಲ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೆ ಇರುವುದು ಹಾಗೂ ರೈತರ ಹೆಸರಿನಲ್ಲಿ ವ್ಯತ್ಯಾಸ ಇರುವ ಕಾರಣ ಹಣವನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗಿಲ್ಲ. ರೈತರು ಈ ವ್ಯತ್ಯಾಸ ಸರಿಪಡಿಸಿಕೊಂಡರೆ ಒಂದೆರಡು ದಿನದಲ್ಲಿ ಹಣ ಅವರ ಖಾತೆಗೆ ಜಮೆಯಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ : ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ
ಇದಕ್ಕೂ ಮುನ್ನ ಮಾತನಾಡಿದ ಕಮಕನೂರು, ಬೆಳೆ ಹಾನಿಗೆ ರೈತರ ಇನ್ ಪುಟ್ ಸಬ್ಸಿಡಿ ಹೆಚ್ಚು ಮಾಡಲು ಸಾಧ್ಯವಿದೆಯೇ ಸುಮಾರು 2.76 ಲಕ್ಷ ರೈತರಿಗೆ ಬೆಳೆ ವಿಮೆ ಸರಿಯಾಗಿ ಸಿಕ್ಕಿಲ್ಲ ಎಂದು ಗಮನ ಸೆಳೆದಿದ್ದರು.
Belehani parihara amount check ನಿಮಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆಯೇ ಇಲ್ಲೇ ಚೆಕ್ ಮಾಡಿ
ಬೆಳೆ ಹಾನಿ ಪರಿಹಾರ ಹಣ ನಿಮಗೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು
https://parihara.karnataka.gov.in/service87/
ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪರಿಹಾರ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹೋಬಳಿ ಆಯ್ಕೆ ಮಾಡಿಕೊಂಡು ನೀವುರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ( 2025-26) ಆಯ್ಕೆ ಮಾಡಿಕೊಳ್ಳಬೇಕು. ನಂತರ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಫ್ಲಡ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಇಲ್ಲವೋ ಎಂಬ ಮಾಹಿತಿ ಗೊತ್ತಾಗಲಿದೆ.
Belehani parihara amount check ಬೆಳೆ ಸಮೀಕ್ಷೆ ವ್ಯತ್ಯಾಸವಿದ್ದಲ್ಲಿ ಆಕ್ಷೇಪ ಸಲ್ಲಿಸಿ ಇತ್ಯರ್ಥಪಡಿಸಿಲು ರೈತರಿಗೆ ಅವಕಾಶ
ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಅವರು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಹೆಚ್. ಶ್ರೀನಿವಾಸ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು.
ರಾಜ್ಯದ ಎಲ್ಲಾ ರೈತರ ತಾಕುಗಳು ಬೆಳೆ ಮಾಹಿತಿ ದಾಖಲಿಸುವ ಸಲುವಾಗಿ ಆದ್ಯತೆ ಮೇರೆಗೆ ಪ್ರಥಮವಾಗಿ ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ.
ಸಕಾಲದಲ್ಲಿ ರೈತರು ಬೆಳೆ ಸಮೀಕ್ಷೆ ಮಾಡದೆ ಇದ್ದಲ್ಲಿ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಖಾಸಗಿ ನಿವಾಸಿಗಳ ಬದಲಿಗೆ ಸಂಗ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಅವಕಾಶ ಕಲ್ಪಿಸಿಲ್ಲ. ಬೆಳೆ ಮಾಹಿತಿ ಕುರಿತಂತೆ ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ರಾಜ್ಯದಲ್ಲಿ ಪ್ರತಿ ವರ್ಷ ಸುಮಾರು 4.40 ಕೋಟಿ ತಾಕುಗಳ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಸುಮಾರು 2 ಲಕ್ಷ ಆಕ್ಷೇಪಣೆಗಳೂ ಕೂಡ ಸಲ್ಲಿಕೆಯಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಮರು ಸಮೀಕ್ಷೆ ಮಾಡಿಸಿದ್ದೇವೆ. ಅಧಿಕಾರಿ, ಸಿಬ್ಬಂದಿಗಳು ಎಲ್ಲಿಯೂ ಕುಳಿತು ಬೆಳೆ ಸಮೀಕ್ಷೆ ಮಾಡಲು ಅವಕಾಶ ಇರುವುದಿಲ್ಲ ಎಂದರು.





