Belehani parihara check here : ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ.
ಹೌದು, ರಾಜ್ಯದ ವಿವಿಧ ಜಿಲ್ಲೆಗಳ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುತ್ತಿರುವುದು ತಮಗೆಲ್ಲಾ ಗೊತ್ತಿದ್ದ ಸಂಗತಿ. ಈಗ ಬೀದರ್ ಜಿಲ್ಲೆಯ ರೈತರ ಖಾತೆಗೂ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ.
ಬೀದರ್ ಜಿಲ್ಲೆಯ 1,86,426 ರೈತರಿಗೆ 261.43 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಮೆ ಮಾಡಿವೆ. ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲಾಗಿದೆ.
ಪಿಎಂಎಫ್ಬಿವೈ ಯೋಜನೆಯಡಿ 36.74 ಕೋಟಿ ರೂಪಾಯಿ ವಿಮಾ ಪರಿಹಾರವನ್ನು ವರ್ಗಾಯಿಸಲಾಗಿದೆ. ಹೀಂಗಾರಿ ಹಂಗಾಮಿನ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ.
8615 ರೈತರಿಗೆ ತಾಂತ್ರಿಕ ಕಾರಣದಿಂದ ಪರಿಹಾರ ಇನ್ನೂ ಬರಬೇಕಿದೆ. ಈ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Belehani parihara check here ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಚೆಕ್ ಮಾಡುವುದು ಹೇಗೆ?
ನಿಮ್ಮ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://parihara.karnataka.gov.in/service89/PaymentDetailsReport.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇನ್ ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯ ವಿವರಗಳು ಪೇಜ್ ತೆರೆದುಕೊಳ್ಳುತ್ತದೆ. ವರ್ಷ 2025-26, ಋತು ಆಯ್ಕೆ ಮಾಡಿ ಮೇಲೆ ಕ್ಲಿಕ್ ಮಾಡಬೇಕು ಅಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ನಂತರ ವಿಪತ್ತಿನ ವಿಧದಲ್ಲಿ ಪ್ರವಾಹ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಾದ ನಂತರ ತಾಲೂಕು ಹಾಗೂ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು ನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಆಯ್ಕೆ ಮಾಡಿಕೊಂಡ ಊರಿನಲ್ಲಿ ಯಾರು ಯಾರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ. ಎಷ್ಟು ಕಂತುಗಳು ಜಮೆಯಾಗಿದೆ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಸಿಗುತ್ತದೆ.
ಇದನ್ನೂ ಓದಿ : ನಿಮಗೆ ಗೊತ್ತಿಲ್ಲದೆ ನಿಮ್ಮ ಜಮೀನಿನ ಮೇಲೆ ಯಾರಾದರೂ ಸಾಲ ಪಡೆಯಲಾಗಿದೆಯೇ? ಇಲ್ಲೇ ಚೆಕ್ ಮಾಡಿ
ಅಲ್ಲಿ ಕ್ರಮ ಸಂಖ್ಯೆ, ಆಧಾರ್ ಕಾರ್ಡ್ ನಂಬರ್, ಫಲಾನುಭವಿಯ ಹೆಸರು, ಸರ್ವೆ ನಂಬರ್, ಬೆಳೆಯ ಹೆಸರು, ಬೆಳೆಯ ವಿಧ, ಬೆಳೆ ನಷ್ಟವಾದ ವಿಸ್ತೀರ್ಣ, ಹಣ ಸಂದಾಯದ ಸ್ಥಿತಿ, ಸಂದಾಯವಾದ ದಿನಾಂಕ ಎಷ್ಟು ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ.
Belehani parihara check here ಯಾವ ಬೆಳೆಗೆ ಎಷ್ಟು ಪರಿಹಾರ ಹಣ ನೀಡಲಾಗಿದೆ?
ಮಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಪ್ರತಿ ಹೆಕ್ಟೇರಿಗೆ ಮಳೆಯಾಶ್ರಿತ 8500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 22500 ರೂಪಾಯಗಳಂತೆ ಒಟ್ಟು ರೈತರಿಗೆ 10 ಹಂತಗಳಲ್ಲಿ ಪರಿಹಾರ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದರು.
ಸರ್ಕಾರದಿಂದ ಘೋಷಿಸಲಾದ ಹೆಚ್ಚುವರಿ ಪರಿಹಾರ ಮೊತ್ತ 8500 ರೂಪಾಯಿಗಳನ್ನು ಸಹ ಹಂತ ಹಂತವಾಗಿ 7 ಹಂತಗಳಲ್ಲಿ ಒಟ್ಟು 1,86,426 ರೈತರಿಗೆ 134.27 ಕೋಟಿ ರೂಪಾಯಿ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದರು.





