3 ಲಕ್ಷ ರೈತರಿಗೆ ಒಟ್ಟು 250 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಜಮೆ

Written by Ramlinganna

Published on:

Belehani parihara jame : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆಯ ವರದಿಯಂತೆ ಒಟ್ಟು 3.24 ಲಕ್ಷ ಹೆಕ್ಟೇರ್ ಹಿ ಪ್ರದೇಶದ ಕುರಿತು ಜಿಲ್ಲಾ ವಿಪತ್ತು ನಿರ್ಹಹಣಾ ಪ್ರಾಧಿಕಾರ ಕಲಬುರಗಿಯಿಂದ ಸರ್ಕಾರಕ್ಕೆ ಪರಿಹಾರ ಮಂಜೂರಾತಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು.

ಸದರಿ ಪ್ರಸ್ತಾವನೆಯಂತೆ ಈಗಾಗಲೇ ಪರಿಹಾರ ತಂತ್ರಾಂಶದಲ್ಲಿ ಅರ್ಹ ರೈತರ ಹಾಗೂ ಹಾನಿ ಪ್ರದೇಶದ ಮಾಹಿತಿಯನ್ನು ಅಳವಡಿಸಲಾಗಿದೆ. ಮೊದಲ ಹಂತದಲ್ಲಿ ಸರ್ಕಾರದ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಪ್ ಮಾರ್ಗಸೂಚಿ ಅನ್ವಯ ಒಟ್ಟು 2.26, 183 ಫಲಾನುಭವಿ ರೈತರಿಗೆ ಒಟ್ಟು 250.97 ಕೋಟಿ ರೂಪಾಯಿ ಹಣ ಮಂಜೂರಾತಿ ನೀಡಲಾಗಿದ್ದು. ಸದರಿ ಇನ್ ಪುಟ್ ಸಬ್ಸಿಡಿ ನೇರವಾಗಿ ಆಧಾರ್ ಸಂಖ್ಯೆಗೆ ಜೋಡಣೆ ಹೊಂದಿರುವ ಸಂಬಂಧಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಬೇಕಿದೆ.

Belehani parihara jame ಬೆಳೆ ಹಾನಿ ಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ

ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ

https://parihara.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಪರಿಹಾರ ಪೆಜ್ ತೆರೆದುಕೊಳ್ಳುತ್ತದೆ. ಅಲ್ಲಿ  ಪರಿಹಾರ ಹಣ ಸಂದಾಯ ವರದಿ ಕೆಳಗಡೆ Select Calamity Type ನಲ್ಲಿ  Flood, ಆಯ್ಕೆ ಮಾಡಿಕೊಳ್ಳಬೇಕು. ನಂತರ Select Year ನಲ್ಲಿ 2025-26 ಆಯ್ಕೆ ಮಾಡಿಕೊಳ್ಳಬೇಕು. ನಂತರ ಆಧಾರ್ ಕಾರ್ಡ್ ನಮೂದಿಸಬೇಕು ಇದಾದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು.ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ ಅಲ್ಲಿ ಕೇಳಲಾದ ಮಾಹಿತಿ ಭರ್ತಿ ಮಾಡಿ ಸ್ಟೇಟಸ್ ತಿಳಿದುಕೊಳ್ಳಬೇಕು.

ಬೆಳೆ ಹಾನಿ ಎಕರೆಗೆ ಎಷ್ಟು ಪರಿಹಾರ ಸಿಗಲಿದೆ

ಸರ್ಕಾರ ಮತ್ತು ಎನ್.ಡಿ.ಆರ್.ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17 ಸಾವಿರ ರೂಪಾಯಿ ನೀಡಲಾಗುವುದು. ಅದೇ ರೀತಿ ನೀರಾವರಿ ಜಮೀನಿಗೆ 17500 ರೂಪಾಯಿ ಪರಿಹಾರ ನೀಡಲಾಗುವುದು. ಬಹು ಬೆಳೆ ಬೆಳೆಯುವ ಜಮೀನಿಗೆ 31 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆ ಹಾನಿಯ ಜಂಟಿ ಸಮೀಕ್ಷೆ  ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆ ಹಾನಿಯಾದ ಎಲ್ಲಾ 10 ಲಕ್ಷ ಹೆಕ್ಟೇರ್ ಗೆ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ ನಿಮ್ಮ ಜಮೀನಿನ ಮೇಲೆ ಯಾವ ಬ್ಯಾಂಕಿನಿಂದ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಪರಿಹಾರ ಘೋಷಣೆಯಿಂದಾಗಿ ಮಳೆಯಾಶ್ರಿತ ಪ್ರತಿ ಹೆಕ್ಟೇರ್‌ಗೆ 8,500 + 8,500 ಸೇರಿ 17,000 ರೂಪಾಯಿ, ನೀರಾವರಿ ಬೆಳೆಗಳಿಗೆ 17,000 + 8,500 ಸೇರಿ 25,500 ರೂಪಾಯಿ ಹಾಗೂ ಬಹು ವಾರ್ಷಿಕ ಬೆಳೆಗಳಿಗೆ 22,500 + 8,500 ಸೇರಿ 31,000 ರೂಪಾಯಿ ಪರಿಹಾರ ಸಿಗಲಿದೆ.

Leave a Comment