ಬೆಳೆ ಹಾನಿ ಪರಿಹಾರ ಬಿಡುಗಡೆ: ನಿಮಗೆಷ್ಟು ಜಮೆ? ಚೆಕ್ ಮಾಡಿ

Written by Ramlinganna

Updated on:

Belehani parihara status 23 ಮುಂಗಾರು ಹಂಗಾಮಿನ ಬೆಳೆ ಹಾನಿ ಪರಿಹಾರ ಯಾವ ಯಾವ ರೈತರಿಗೆ ಜಮೆಯಾಗಿದೆ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರೈತರು ತಮ್ಮ ಬಳಿಯಿರು ಮೊಬೈಲ್ ನಲ್ಲೇ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.

Belehani parihara status 23 ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ? 

ರೈತರು ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ರೈತರಿಗೆ ಎರಡು ಆಯ್ಕೆಗಳು ಕಾಣಿಸುತ್ತವೆ. ಪರಿಹಾರ ನಮೂದು ಸಂಖ್ಯೆ ಮತ್ತು ಆಧಾರ್ ಸಂಖ್ಯೆ. ಇವೆರಡರಲ್ಲಿ ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ calamity type ನಲ್ಲಿ Drought, Flood, Pest, Destling, landslide,  Heavy rain ಹೀಗೆ ಆಯ್ಕೆಗಳಿರುತ್ತವೆ.

ಇದರಲ್ಲಿ ನೀವು ಮುಂಗಾರು ಹಂಗಾಮಿನ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದರೆ Flood ಆಯ್ಕೆ ಮಾಡಿಕೊಳ್ಳಬೇಕು.  ನಂತರ Year ನಲ್ಲಿ ಯಾವ ವರ್ಷದ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ವರ್ಷ ಆಯ್ಕೆ ಮಾಡಿಕೊಳ್ಳಬೇಕು. ಹೌದು, ಇಲ್ಲಿ ಐದಾರು ವರ್ಷಗಳ ಆಯ್ಕೆಗಳಿರುತ್ತವೆ.

ಇದರಲ್ಲಿ ನೀವು ಉದಾಹರಣೆಗೆ ಪ್ರಸಕ್ತ ವರ್ಷ ಅಂದರೆಕಳೆದ ಮುಂಗಾರು ಹಂಗಾಮಿನ 2022-23ನೇ ಸಾಲಿನ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುತಿದ್ದರೆ 2022-23 ಆಯ್ಕೆ ಮಾಡಿಕೊಳ್ಳಬೇಕು.

ನಂತರ ನಿಮ್ಮ 12 ಅಂಕಿಗಳ ಆಧಾರ್ ಕಾರ್ಡ್ ನಂಬರ್ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು. ನಂತರ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಬೇಕು.  ಆಗ ನೀವು ಆಯ್ಕೆ ಮಾಡಿದ ಸಾಲಿನ ಬೆಳೆ ಹಾನಿ ಪರಿಹಾರ ಸ್ಟೇಟಸ್ ಪೇಜ್ ತೆರೆದುಕೊಳ್ಳುತ್ತದೆ.

ಇದನ್ನೂ ಓದಿ ರೈತರ ಜಮೀನಿಗೆ ಹೋಗುವ ಕಾಲಾದಾರಿ, ಬಂಡಿದಾರಿ ಹಳ್ಳಕೊಳ್ಳಗಳ ಮಾಹಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಅಲ್ಲಿ ನಿಮ್ಮ ಜಿಲ್ಲೆ, ಬ್ಯಾಂಕಿನ ಹೆಸರು, ನಿಮ್ಮ ಹೆಸರು, ಯಾವ ದಿನಾಂಕ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ? ಅದರ ಕೆಳಗಡೆ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಕಾಣಿಸುತ್ತದೆ. ನಿಮ್ಮ ಸರ್ವೆ ನಂಬರ್ ಕಾಣಿಸುತ್ತದೆ. ಯಾವ ಬೆಳೆಗೆ ಬೆಳೆ ಹಾನಿ ಜಮೆಯಾಗಿದೆ ಹಾಗೂ ಎಷ್ಟು ಎಕರೆಗೆ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

ಬೆಳೆ ಹಾನಿ ಪರಿಹಾರ ಎಷ್ಟು ಘೋಷಣೆ?

ಒಣ ಬೇಸಾಯ ಭೂಮಿಗೆ ಪ್ರತಿ 1 ಹೆಕ್ಟೇರಿಗೆ 6800 ರೂಪಾಯಿ ನಿಗದಿಯಾಗಿತ್ತು. ಇದಕ್ಕೆ ರಾಜ್ಯ ಸರ್ಕಾರದಿಂದ 6800 ರೂಪಾಯಿ ಹೆಚ್ಚುವರಿ ಹಣ ಸೇರಿಸಲಾಗಿದೆ. ಇದರಿಂದಾಗಿ ಪ್ರತಿ ಹೆಕ್ಟೇರಿಗೆ 13600 ರೂಪಾಯಿ ಪರಿಹಾರ ನಿಗದಿಯಾಗಿದೆ.

ನೀರಾವರಿ ಜಮೀನಿಗೆ ಪ್ರತಿ ಹೆಕ್ಟೇರಿಗೆ 13500 ರೂಪಾಯಿ ಪರಿಹಾರ ಹಣ ನೀಡಲಾಗುತ್ತಿತ್ತು. ಅದಕ್ಕೆ ಹೆಚ್ಚುವರಿಯಾಗಿ 11500 ರೂಪಾಯಿ ಸೇರಿಸುವ ಮೂಲಕ ಒಟ್ಟು ಪ್ರತಿ ಹೆಕ್ಟೇರಿಗೆ 25 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.

ಅದೇ ರೀತಿ ತೋಟಗಾರಿಕೆ  ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ 18000 ರೂಪಾಯಿ ನೀಗದಿಯಾಗಿತ್ತು. ಇದಕ್ಕೆ ಹೆಚ್ಚುವರಿಯಾಗಿ 10 ಸಾವಿರ ರೂಪಾಯಿ ಸೇರಿಸಿ ಒಟ್ಟು ಪ್ರತಿ ಹೆಕ್ಟೇರಿಗೆ 28 ಸಾವಿರ ರೂಪಾಯಿ ಬೆಳೆ ಹಾನಿ ಪರಿಹಾರ ನೀಡಲು ಘೋಷಣೆ ಮಾಡಲಾಗಿದೆ.

ರಾಜ್ಯದ ಎಲ್ಲಾ ರೈತರ ಖಾತೆಗೆ ಹಂತ ಹಂತವಾಗಿ ಬೆಳೆಹಾನಿ ಪರಿಹಾರ ಹಣ ಬಿಡುಗಡೆ ಮಾಡಲಾಗುತ್ತಿದೆ. ಯಾವ ರೈತರಿಗೆ ಬೆಳೆ ಹಾನಿ ಪರಿಹಾರ ಜಮೆಯಾಗಿಲ್ಲವೋ ಅವರಿಗೆ ಮುಂದಿನ ಹಂತದ ಬಿಡುಗಡೆಯಾಗುವಾಗ ಜಮೆಯಾಗುವ ಸಾಧ್ಯತೆಯಿದೆ.

Leave a Comment