43 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಸ್ಟೇಟಸ್ ಇಲ್ಲೇ ಚೆಕ್ ಮಾಡಿ

Written by Ramlinganna

Published on:

Belevime status check here : ರಾಜ್ಯದಲ್ಲಿ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಇತಿಹಾಸದಲ್ಲೇ ನೀಡದಂತಹ ಪರಿಹಾರವನ್ನು ರೈತರಿಗೆ ನೀಡಲಾಗಿದೆ. ಸುಮಾರು 43 ಲಕ್ಷ ರೈತರಿಗೆ ವಿಮಾ ಮೂಲಕ ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಸಭೆಯಲ್ಲಿಂದು ಹೇಳಿದರು.

ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಅಲ್ಲಮಪ್ರಭು ಪಾಟೀಲ್ ರವರ ಪ್ರಶ್ನೆಗೆ ಉತ್ತರಿಸಿದ ಅವರು, ರೈತ ಸುರಕ್ಷತಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 28 ಲಕ್ಷ ರೈತರನ್ನು ನೋಂದಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಬೆಳೆ ನಷ್ಟವಾದ 43 ಲಕ್ಷ ರೈತರಿಗೆ ಸುಮಾರು ೫ ಸಾವಿರ ಕೋಟಿಗೂ ಹೆಚ್ಚು ಪರಿಹಾರ ನೀಡಲಾಗಿದೆ. ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಟ್ಟಿರಲಿಲ್ಲ ಎಂದರು.

ಅತಿವೃಷ್ಠಿ ಪರಿಹಾರ ಬೇರೆ, ಬೆಳೆ ಹಾನಿ ಪರಿಹಾರ ಬೇರೆ ಎಂದು ಹೇಳಿದ ಅವರು, ಫಸಲ್ ಭೀಮಾ ಯೋಜನೆಯಡಿ ರೈತರು ವಿಮಾ ಹಣದ ಶೇ. 2 ರಷ್ಟನ್ನು ಮಾತ್ರ ಕಟ್ಟಬೇಕು. ಉಳಿದ ಶೇ. 98 ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಎಂದು ಹೇಳಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಲ್ಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2022-23ನೇ ಸಾಲಿನಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನವರೆಗೂ ಒಟ್ಟು 23,782 ರೈತರು 31,338.13 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ವಿಮೆಯಡಿ ನೋಂದಾಯಿಸಿಕೊಂಡಿದ್ದಾರೆ ಎಂದರು.

ಇದನ್ನೂ ಓದಿ : ನಿಮ್ಮ ಸರ್ವೆ ನಂಬರ್ ಹಾಕಿದರೆ ಸಾಕು ನಿಮ್ಮ ಜಮೀನಿನ ಮುಟೇಶನ್ ಓಪನ್ ಆಗುತ್ತದೆ

ಇದುವರೆಗೂ ಈ ಕ್ಷೇತ್ರ ವ್ಯಾಪ್ತಿಯಲ್ಲಿ 13,728 ರೈತರಿಗೆ ಬೆಳೆ ವಿಮೆ ಪರಿಹಾರ ನೀಡಲಾಗಿದೆ. 945 ಪ್ರಕರಣಗಳು ಬಾಕಿಯಿದ್ದು, ಅವುಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಲಾಗುವುದು. ವಿಮೆಯಡಿ ರೈತರಿಗೆ ಯಾವುದೇ ಬಾಕಿ ಇಲ್ಲದಂತೆ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ಅವರು ಹೇಳಿದರು.

Bele vime status ಚೆಕ್ ಮಾಡುವುದು ಹೇಗೆ?

2022-23ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು Bele vime status ನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು.

ಸ್ಟೇಟಸ್ ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು 2025-26 ರ ಕೆಳಗಡೆ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ.  ಫಾರ್ಮರ್ಸ್ ಕಾಲಂ ಕೆಳಗಡೆ Check Status ಮೇಲೆ ಕ್ಲಿಕ್ ಮಾಡಬೇಕು.

ರೈತರು ಇಲ್ಲಿ ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಬೆಳೆ ವಿಮೆ ಮಾಡಿಸುವಾಗ ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ಮೇಲೆ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಒಂದು ವೇಳೆ ಕ್ಯಾಪ್ಚ್ಯಾ ಕೋಡ್ ಸರಿಯಾಗಿ ಕಾಣಿಸದಿದ್ದರೆ ರಿಫ್ರೆಶ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಹೊಸ ಕ್ಯಾಪ್ಚ್ಯಾ ಕೋಡ್ ಅಪ್ಡೇಟ್ ಆಗುತ್ತದೆ. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.

Belevime status check here ಪೇಜ್ ನಲ್ಲಿ ಯಾವ ಯಾವ ಮಾಹಿತಿ ಇರುತ್ತದೆ?

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.ಅಲ್ಲಿ ನಿಮ್ಮ ಮೊಬೈಲ್ ನಂಬರ್ ಕೊನೆಯ ಮೂರು ಅಂಕಿ  ಅದರ ಮುಂದುಗಡೆ ನಿಮ್ಮಹೆಸರು ಕಾಣುತ್ತದೆ. ಸ್ಟೇಟಸ್ ಬಾಕ್ಸ್ ನಲ್ಲಿ ವಿಮಾ ಕಂಪನಿಯಿಂದ ನಿಮ್ಮ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋಎಂಬುದು ಕಾಣುತ್ತದೆ. ಅದರ ಮುಂದುಗಡೆ ಅರ್ಜಿ ಎಲ್ಲಿ ಸಲ್ಲಿಸಿದ್ದೀರಿ ಗ್ರಾಮ ಒನ್ ಕೇಂದ್ರದಲ್ಲಿಯೇ ಅಥವಾ ಸಿಎಸ್ಸಿ ಕೇಂದ್ರದಲ್ಲಿ ಸಲ್ಲಿಸಿದ್ದೀರೋ ಎಂಬುದು ಕಾಣುತ್ತದೆ. ಸೆಲೆಕ್ಟ್ಮೇಲೆ ಕ್ಲಿಕ್ ಮಾಡಿದ ಮೇಲೆ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಯಾವ ದಿನಾಂಕದಂದು ನಿಮ್ಮ ಅರ್ಜಿ ಸಲ್ಲಿಸಲಾಗಿದೆ. ಬೆಳೆ ವಿಮೆ ಹಣ ಪಾವತಿಸಲಾಗಿದೆಯೋ ಇಲ್ಲವೋ ಎಂಬುದು ಕಾಣುತ್ತದೆ. ಬೆಳೆ ವಿಮೆ ಹಣ ಪಾವತಿಸಿದ್ದರೆ ಯಾವ ದಿನಾಂಕದಂದು ಪೇಮೆಂಟ್ ಸಕ್ಸೆಸಫುಲ್ ಆಗಿದೆ ಎಂಬುದು ಕಾಣುತ್ತದೆ. ಬ್ಯಾಂಕಿನಿಂದ ಅಪ್ರೂವ್ ಆಗಿ ಬೆಳೆ ವಿಮೆ ಮಾಡಿಸಿದ ಕಂಪನಿಗೆ ಅರ್ಜಿ ಕಳಿಸಿದ್ದರೆ ಯಾವ ದಿನಾಂಕದಂದು ಅರ್ಜಿ ಕಳಿಸಲಾಗಿದೆ ಎಂಬುದು ಕಾಣುತ್ತದೆ. ಈ ಆಧಾರದ ಮೇಲೆ ಅರ್ಜಿ ಸ್ವೀಕೃತವಾಗಿ ಯಾವ ಹಂತದಲ್ಲಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

Leave a Comment