ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

Written by Ramlinganna

Published on:

Best farmer award application : 2025-26ನೇ ಸಾಲಿನ ಆತ್ಮ ಯೋಜನೆಯಡಿ ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಕಲಬುರಗಿ ಜಿಲ್ಲೆಯ ರೈತ ಮಹನೀಯರುಗಳಿಂದ ನಾಮನಿರ್ದೇಶನ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರಾದ ಸಮದ್ ಪಟೇಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಪ್ರಗತಿಪರ ರೈತರ ಸಾಧನೆಗಳನ್ನು ಗುರುತಿಸಿ ಪುರಸ್ಕರಿಸಲು ಸರ್ಕಾರ ತೀರ್ಮಾನಿಸಿದೆ. ಕೃಷಿ ವಲಯದಲ್ಲಿ ತಮ್ಮದೇ ಆದ ಅಮೂಲ್ಯ ಅನ್ವೇಷಣೆ/ ವಿಶಿಷ್ಟ ಸಾಧನೆ ಮೂಲಕ ರೈತರ ಸಮುದಾಯಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿರುವ ಪರಿಣಿತ ಕೃಷಿಕ ರೈತ ಮಹನಿಯರನ್ನು ಗುರುತಿಸಿ ಜಿಲ್ಲಾಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲ್ಲೂಕ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ನಗದು ಬಹುಮಾನದೊಂದಿಗೆ ನೀಡಿ ಗೌರವಿಸಲಾಗುತ್ತದೆ.

ಇದನ್ನೂ ಓದಿ ನಿಮ್ಮ ಹೊಲಕ್ಕೆ ಹೋಗುವ ಬಂಡಿದಾರಿ ಮುಚ್ಚಿಹೋಗಿದೆಯೇ ? ಇಲ್ಲೇ ಚೆಕ್ ಮಾಡಿ

ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲಿಚ್ಛಿಸುವ ರೈತ ಮಹನೀಯರು ಕೃಷಿ ಕ್ಷೇತ್ರದಲ್ಲಿ ಗಮನಾರ್ಹ/ವಿಶಿಷ್ಟ ಸಾಧನೆಯನ್ನು ಮಾಡಿರಬೇಕು. ಅವರ ಸಂಶೋಧನೆಗಳು/ ಸಾಧನೆಗಳು ವ್ಯಾಪಕವಾಗಿ ಅಳವಡಿಸಲು ಕೃಷಿ ಕ್ಷೇತ್ರದ ಏಳಿಗೆಗೆ ಪೂರಕವಾಗಿರಬೇಕು. ಅಭ್ಯರ್ಥಿಗಳು ಮಾಡಿರುವ ಸಾಧನೆಯ ಮೂಲ ಸ್ವರೂಪವಾಗಿದ್ದು, ಬೇರೆಯವರು ಮಾಡಿರುವ ಸಾಧನೆಗಿಂತ ಭಿನ್ನವಾಗಿರಬೇಕು. ರಾಜ್ಯ/ ಕೇಂದ್ರ ಸರಕಾರಗಳ ವಿವಿಧ ಇಲಾಖೆ ಮತ್ತು ಅಂಗಸAಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ/ ನಿರ್ವಹಿಸುತ್ತಿರುವ ಅಭ್ಯರ್ಥಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಈಗಾಗಲೇ ರಾಜ್ಯಮಟ್ಟ, ಜಿಲ್ಲಾ ಮಟ್ಟ ಮತ್ತು ತಾಲ್ಲೂಕಾ ಮಟ್ಟದಲ್ಲಿ ಯಾವುದೇ ಪ್ರಶಸ್ತಿ ಪಡೆದಲ್ಲಿ ಅಂತಹ ರೈತರು ಅರ್ಹರಿರುವುದಿಲ್ಲ.

ಪ್ರಶಸ್ತಿಗೆ ಆಯ್ಕೆಯಾಗುವ ರೈತ ಮಹನೀಯರು ತಮ್ಮ ನಾಮನಿರ್ದೇಶನಗಳ ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2025ರ ನವೆಂಬರ್ 10 ರೊಳಗಾಗಿ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ತಾಲೂಕಾ ತಾಂತ್ರಿಕ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಉಪ ಯೋಜನಾ ನಿರ್ದೇಶಕರು (ಆತ್ಮ), ಕಲಬುರಗಿ ಹಾಗೂ ತಾಲೂಕ ತಾಂತ್ರಿಕ ವ್ಯವಸ್ಥಾಪಕರನ್ನು, ಕಲಬುರಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ನಿಖೀಲ್ ಆರ್. ಕಟ್ಟೋಳ್ಳಿ-8123679990, ಆಳಂದ-ಸAಜಯಕುಮಾರ 9481880805, ಆಫಜಲಪೂರ-ಅನೀತಾ 8095094038, ಜೇವರ್ಗಿ ಮತ್ತು ಯಡ್ರಾಮಿ-ಬಸವರಾಜ 6362441982, ಕಲಬುರಗಿ ಮತ್ತು ಕಮಲಾಪೂರ-ಶಿವರಾಯ 9900383618, ಸೇಡಂ-ಬಾಲರಾಜ 9035802555, ಚಿತ್ತಾಪೂರ, ಕಾಳಗಿ ಮತ್ತು ಶಾಹಬಾದ-ಸಚೀನ ಕುಮಾರ 8884444371 ಹಾಗೂ ಚಿಂಚೋಳ್ಳಿ -ವೀರೇಶ ಜೈನ್ 8550866178 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Best farmer award application ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ನೇರ ಸಾಲ-ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ

ಕಲಬುರಗಿ,ಅ.18(ಕರ್ನಾಟಕ ವಾರ್ತೆ) ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಸಕ್ತ 2025-26ನೇ ಸಾಲಿನ ನೇರ ಸಾಲ-ಸಹಾಯಧನ ಮಂಜೂರಾತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಮಂಡಳಿಯ ವೆಬ್‌ಸೈಟ್

www.ksbdb.karnataka.gov.in

ಮೂಲಕ ಅಕ್ಟೋಬರ್ 31ರ ಸಂಜೆ 5 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಬೇಕೆಂದು ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ವಾರ್ಷಿಕ ಶೇ.4 ಬಡ್ಡಿ ದರದಲ್ಲಿ ಕನಿಷ್ಠ 1 ಲಕ್ಷ ರೂ. ಗಳಿಂದ ಗರಿಷ್ಠ 2 ಲಕ್ಷ ರೂ. ವರೆಗೆ ಆರ್ಥಿಕ ಸಾಲ-ಸಹಾಯಧನ ನೀಡಲಾಗುತ್ತದೆ. ಪಡೆದ ಸಾಲಕ್ಕೆ ಶೇ.20ರಷ್ಟು ಸಬ್ಸಿಡಿ ಇರಲಿದೆ.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ (ಇWS ಪ್ರಮಾಣ ಪತ್ರ) ಹೊಂದಿರುವ 18 ರಿಂದ 65 ವರ್ಷದ ವಯೋಮಾನದವರಾಗಿರಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8029605888 ಮತ್ತು 8762249230 ಸಂಪರ್ಕಿಸಬಹುದಾಗಿದೆ.

Leave a Comment