2021 ನೇ ಸಾಲಿನ ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ (Best national teacher) ಅರ್ಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರಿಂದ ಕೇಂದ್ರ ಸರ್ಕಾರ ಶಿಕ್ಷಣ ಇಲಾಖೆ (ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಶಿಕ್ಷಕರು ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದೆ. ಸರ್ಕಾರ ಅಧಿಸೂಚನೆಯಲ್ಲಿರುವ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ಕಾಯಂಗೊಂಡ ಶಿಕ್ಷಕರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಆಹ್ವಾನಿಸಿರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಬೇಕು. ಹೆಚ್ಚಿನ ಮಾಹಿತಿಗಾಗಿ
https://nationalawardstoteachers.education.gov.in/ ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್ ಸೈಟ್ ನೋಡಬಹುದು.