Best state level farmer award ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರಾಜ್ಯ ಮಟ್ಟದ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ (ತನ್ನ ಆಡಳಿತದ ವ್ಯಾಪ್ತಿಯಲ್ಲಿ ಬರುವ 10 ಜಿಲ್ಲೆಗಳ) ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ಈ ಕೆಳಕಂಡ ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಜಿಲ್ಲಾಮಟ್ಟದ ಅತ್ಯುತ್ತಮ ರೈತ, ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮತ್ತು ಯುವರೈತ ಮಹಿಳೆ ಪ್ರಶಸ್ತಿಗೂ ಅರ್ಜಿ ಆಹ್ವಾನಿಸಲಾಗಿದೆ.
Best state level farmer award ರಾಜ್ಯ ಮಟ್ಟದ ಪ್ರಶಸ್ತಿಗಳು
- ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ
- ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ
- ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ/ರೈತಮಹಿಳೆ ಪ್ರಶಸ್ತಿ
- ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ
- ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಪ್ರಶಸ್ತಿ
- ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತಮಹಿಳೆ ಪ್ರಶಸ್ತಿ
Best District level farmer award ಜಿಲ್ಲಾ ಮಟ್ಟದ ಪ್ರಶಸ್ತಿಗಳು
- ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ
- ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ
Best Taluka level farmer award ತಾಲ್ಲೂಕು ಮಟ್ಟದ ಪ್ರಶಸ್ತಿಗಳು
- ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ
- ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ
ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ
ಮೇಲಿನ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಅಕ್ಟೋಬರ್-2021ರಲ್ಲಿ ಆಯೋಜಿಸಲಿರುವ ಕೃಷಿಮೇಳ-2021ರ ಸಂದರ್ಭದಲ್ಲಿ ನೀಡಲಾಗುತ್ತದೆ. ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಛೇರಿ, ವಿಸ್ತರಣಾ ನಿರ್ದೇಶಕರ ಕಛೇರಿ, ಜಿಕೆವಿಕೆ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳಿ-ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ-ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ.ಫಾರಂ-ಮಂಡ್ಯ, ಕುರುಬೂರು ಫಾರಂ-ಚಿAತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ) ವಿಸ್ತರಣಾ ಶಿಕ್ಷಣ ಘಟಕ (ನಾಗನಹಳ್ಳಿ-ಮೈಸೂರು)ದಲ್ಲಿ ದೊರೆಯುತ್ತದೆ. ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವೆಬ್ಸೈಟ್ನಲ್ಲೂ www.uasbangalore.edu.in ಲಭ್ಯವಿರುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ:31-07-2021. ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಛೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560 065 ಇವರನ್ನು ಸಂಪರ್ಕಿಸಬಹುದು. ಅಥವಾ ದೂರವಾಣಿ ಸಂಖ್ಯೆ. 080-23330153, ಗೆ ಕರೆ ಮಾಡಿ ಸಂಪರ್ಕಿಸಬಹುದು.
ಎಲೆಮರೆ ಕಾಯಿಯಂತೆ ಸಾಧನೆ ಮಾಡುತ್ತಿರುವ ರೈತರಿಗೆ ಗುರುತಿಸಿ ಅವರಿಗೆ ರಾಜ್ಯಮಟ್ಟದ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮೇಲೆ ತಿಳಿಸಿದ ಲಿಂಕ್ ಬಳಸಿ ಅರ್ಜಿ ಸಲ್ಲಿಸಲು ಕೋರಲಾಗಿದೆ.