ಭಾಗ್ಯಲಕ್ಷ್ಮೀ ಯೋಜನೆ ಹಣ ಜಮೆಯಾಗಿಲ್ಲವೇ? ಈ ದಾಖಲೆ ಸಲ್ಲಿಸಿ

Written by Ramlinganna

Published on:

Bhagyalakshmi bond documents : ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಸಿ ಭಾಗ್ಯಲಕ್ಷ್ಮೀ ಬಾಂಡ್ ಪಡೆದಿರುವ ಯಾವ ಯಾವ ಫಲಾನುಭವಿಗಳಿಗೆಹಣ ಜಮೆಯಾಗಿಲ್ಲವೆ ಅವರು ಕೆಳಗೆ ಸೂಚಿಸಿದ ದಾಖಲೆಗಳನ್ನು ಸಲ್ಲಿಸಲು ಕೋರಲಾಗಿದೆ.

ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಮಾಹಿತಿ ಪಡೆಯಿರಿ

ಹೌದು, ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07 ರಲ್ಲಿ ನೋಂದಣಿಯಾಗಿ 18 ವರ್ಷ  ಪೂರ್ಣಗೊಂಡ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ನೀಡಲು ಅರ್ಜಿಯೊಂದಿಗೆ ಈ ಕೆಳಕಂಡ ದಾಖಲೆಗಳನ್ನು ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕೆಂದು ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಫಲಾನುಭವಿಗಳು ಅರ್ಜಿಯೊಂದಿಗೆ ಭಾಗ್ಯಲಕ್ಷ್ಮೀ ಮ್ಯಾಚುರಿಟಿ ಕ್ಲೇಂ ಫಾರ್ಮ, ಭಾಗ್ಯಲಕ್ಷ್ಮೀ ಮೂಲ ಬಾಂಡ್, ಮೊದಲು ಅರ್ಜಿ ಸಲ್ಲಿಸುವಾಗ ಕೊಟ್ಟಿರುವ ಮಗುವಿನ ಜನನ ಪ್ರಮಾಣ ಪತ್ರ ಶಾಲೆಯಿಂದ ಪಡೆದ ವ್ಯಾಸಂಗ ಪ್ರಮಾಣ ಪತ್ರ , ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಮಗುವಿನ ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಮಗುವಿನ ಹೆಸರಿನಲ್ಲಿರುವ ಬ್ಯಾಂಕ್ ಖಾತೆ ಪುಸ್ತಕ (ಯಾವುದೇ ಜಂಟಿ ಖಾತೆ ನಡೆಯುವುದಿಲ್ಲ) ಬಿಪಿಎಲ್ ಪಡಿತರ ಚೀಟಿ, ತಂದೆ ಮತ್ತು ತಾಯಿಯವರ ಆಧಾರ್ ಕಾರ್ಡ್, ಸಂತಾನಹರಣ ಶಸ್ತ್ರ ಚಿಕಿತ್ಸೆಪ್ರತಿಯನ್ನು ದೃಢೀಕರಣ ಲಗತ್ತಿಸಬೇಕು. ವಿದ್ಯಾಭ್ಯಾಸದ ಬಗ್ಗೆ ಫಲಾನುಭವಿರವರಿಂದ ದೃಢೀಕರಣ, ಕುಟುಂಬದಲ್ಲಿ ಮಕ್ಕಳ ಬಗ್ಗೆ ಸಿಡಿಪಿಓ ಅವರಿಂದ ದೃಢೀಕರಣ ಎಲ್ಲಾ ದಾಖಲೆಗಳ ನಾಲ್ಕು ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕೆಂದು ಅವರುತ ತಿಳಿಸಿದ್ದಾರೆ.

Bhagyalakshmi bond documents ನಿಮ್ಮ ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಮೊಬಲ್ ನಲ್ಲಿ ಹೀಗೆ ಚೆಕ್ ಮಾಡಿ

ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಮೊಬೈಲ್ ನಲ್ಲೇ ನೋಡಲು ಈ

http://blakshmi.kar.nic.in:8080/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭಾಗ್ಯಲಕ್ಷ್ಮೀ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಭಾಗ್ಯಲಕ್ಷ್ಮೀ ಯೋಜನೆಯ ಕುರಿತಂತೆ ಮಾಹಿತಿ ಇರುತ್ತದೆ.  ಯೋಜನೆ ಆರಂಭಾವಾದಾಗ  ಭಾಗ್ಯಲಕ್ಷ್ಮೀ ಯೋಜನೆಯಡಿ ನಿಬಂಧನೆಗಳ ಮಾಹಿತಿ ಇರುತ್ತದೆ. Bhagyalakshi status ಚೆಕ್ ಮಾಡಲು ಮೇಲ್ಗಡೆ Home ಪಕ್ಕದಲ್ಲಿರುವ query/search ಕೆಳಗಡೆ ಕಾಣುವ Multi Search ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ District ನಲ್ಲಿ ನಿಮ್ಮ ಜಿಲ್ಲೆ, Project ನಲ್ಲಿ ತಾಲೂಕು, cercle ನಲ್ಲಿ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮಗುವಿನ ಹೆಸರು ನಮೂದಿಸಬೇಕು. ಹುಟ್ಟಿದ ದಿನಾಂಕ ನಮೂದಿಸಿ ಅಲ್ಲಿ ಕಾಣುವ ಕೋಡ್ ನಂಬರ್ ನ್ನು ಕೆಳಗಡೆ ಇಮೇಜ್ ಕೋಡ್ ಬಾಕ್ಸ್ ನಲ್ಲಿ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು.

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Child Id ಕೆಳಗಡೆ ಕಾಣುವ ನಂಬರ್ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮತ್ತೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಭಾಗ್ಯಲಕ್ಷ್ಮೀ ಬಾಂಡ್ ಸ್ಟೇಟಸ್ ಮಾಹಿತಿ ಕಾಣುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿನ ಪೋಡಿ ನೀವೇ ಮಾಡಿ ಇಲ್ಲಿದೆ ಮಾಹಿತಿ

ಸ್ಟೇಟಸ್ ನಲ್ಲಿ ಬಾಂಡ್ ವಿತರಿಸಲಾಗಿದೆಯೋ ಇಲ್ಲವೋ?  ಎಲ್ಐಸಿಯಿಂದ ಪ್ರಿಂಟ್ ಆಗಿದೆಯೋ ಇಲ್ಲವೋ? ಜಿಲ್ಲೆ, ತಾಲೂಕು, ಗ್ರಾಮ, ಮಗುವಿನ ಹೆಸರು, ತಂದೆ ತಾಯಿಯ ಹೆಸರು, ಯಾವ ವರ್ಗಕ್ಕೆ ಮಗು ಸೇರಿದೆ?  ಭಾಗ್ಯಲಕ್ಷ್ಮೀ ಪಾಲಿಸಿ ಮಾಡಿಸುವಾಗ ತಂದೆ ತಾಯಿಯ ವಯಸೆಷ್ಟಿತ್ತು.ಮಗುವಿನ ಹೆಸರಿಗೆ ಎಷ್ಟು ಹಣ ಜಮೆ ಮಾಡಲಾಗಿದೆ ಹಾಗೂ ಚೆಕ್ ನಂಬರ್ ಸೆರಿದಂತೆ ಇನ್ನಿತರ ಮಾಹಿತಿ ಇರುತ್ತದೆ.

ಭಾಗ್ಯಲಕ್ಷ್ಮೀ ಯೋಜನೆಯನ್ನು ಬಿಜೆಪಿ ಸರ್ಕಾರ ಅಧಿಕಾರವಿದ್ದಾಗ ಜಾರಿಗೆ ತಂದಿತ್ತು. ನಂತರ ಭಾಗ್ಯಲಕ್ಮೀ ಯೋಜನೆಯನ್ನು ಆಗಸ್ಟ್ 2008 ರಲ್ಲಿ ಮಾರ್ಪಡಿಸಲಾಗಿದೆ. ಮಾರ್ಪಡಿಸಿದ ದಿನಾಂಕ 1-8-2008 ರ ನಂತರ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಣಿಯಾದ ಕುಟುಂಬದ ಮೊದಲ  ಮಗುವಿನ ಹೆಸರಿನಲ್ಲಿ 19300 ರೂಪಾಯಿ ಹಾಗೂ ಎರಡನೇ ಮಗುವಿನ ಹೆಸರಿನಲ್ಲಿ 18350 ರೂಪಾಯಿ ಮೊತ್ತವನ್ನು ಠೇವಣಿ ಮಾಡಲಾಗಿರುತ್ತದೆ. ಮೊದಲು 10 ಸಾವಿರ ರೂಪಾಯಿ ಠೇವಣಿ ಇಲಡಾಗುತ್ತಿತ್ತು. 18 ವರ್ಷ ಪೂರ್ಣಗೊಂಡು ನಿಬಂದನೆಗಳನ್ನು ಪೂರೈಸಿದ ಕುಟುಂಬದ ಮೊದಲನೇ ಫಲಾನುಭವಿಗೆ 100097 ರೂಪಾಯಿ ಹಾಗೂ ಎರಡನೇ ಫಲಾನುಭವಿಗೆ 100052 ರೂಪಾಯಿ ದೊರೆಯುತ್ತದೆ.

ಫಲಾನುಭವಿಗೆ 15 ವರ್ಷ ತಲುಪಿದ ನಂತರ 10ನೇ ತರಗತಿಯಲ್ಲಿ ಉತ್ತೀರ್ಣಳಾಗಿ ಮುಂದಿನ ವಿಧ್ಯಾಭ್ಯಾಸ ಕೈಗೊಳ್ಳಲು ಆಸಕ್ತಿಯಿದ್ದಲ್ಲಿ ಬಾಂಡ್ ಅಂಗೀಕೃತ ಬ್ಯಾಂಕುಗಳಲ್ಲಿ ಅಡಮಾನವಿರಿಸಿ 50 ಸಾವಿರ ರೂಪಾಯಿಯವರೆಗೆ ಸಾಲ ಪಡೆಯಬಹುದು.

Leave a Comment