Borewell subsidy : ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಮೂರವರೆ ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದವರು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನಲ್ಲಿ ಅನುಷ್ಠಾನ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೀವಜಲ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ – III ಬಿ) ಅಭಿವೃದ್ಧಿಗಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
Borewell subsidy ಯಾವ ರೈತರಿಗೆ ಸೌಲಭ್ಯ ಒದಗಿಸಲಾಗುವುದು?
ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂಪಾಯಿ ಹಾಗೂ ಪಟ್ಟಣ ಪ್ರದೇಶದವರಿಗೆ 1,20000 ರೂಪಾಯಿಗಳ ಸಣ್ಣ ಮತ್ತುಅತೀ ಸಣ್ಣ ರೈತರ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ದಕ್ಷಿಣಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತೇರ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫಾರ್ಮರ್ಸ್ ಫ್ರೂಟ್ಸ್ ಐಡಿ ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.
Borewell subsidy ಯಾವ ಜಿಲ್ಲೆಯ ರೈತರಿಗೆ ಎಷ್ಟು ಸಬ್ಸಿಡಿ ಸಿಗಲಿದೆ?
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜ ಜಿಲ್ಲೆಗಳ ರೈತರಿಗೆ ಬೋರ್ವೆಲ್ ಕೊರೆಯಲು ಒಟ್ಟು ಘಟಕ ವೆಚ್ಚ 4,75,000 ಇರುತ್ತದೆ. ಇದರಲ್ಲಿ ಬೋರ್ವೆಲ್ ಡ್ರಿಲಿಂಗ್ ಹಾಗೂ ಪಂಪ್ಸೆಟ್ ವೆಚ್ಚ 3,50,000 ರೂಪಾಯಿ ಸಬ್ಸಿಡಿ ದೊರೆಯಲಿದೆ. ಉಳಿದ 50 ಸಾವಿರ ರೂಪಾಯಿ ಸಾಲದ ರೂಪದಲ್ಲಿ ನೀಡಲಾಗುವುದು. 75 ಸಾವಿರ ರೂಪಾಯಿ ವಿದ್ಯುತ್ ಸರಬರಾಜು ಬಾಬ್ತು ಇರಲಿದೆ. ಬ್ಯಾಂಕಿನಲ್ಲಿ ಪಡೆದ ಸಾಲಕ್ಕೆ ಶೇ. 4 ರಷ್ಟು ಬಡ್ಡಿ ದರ ಇರಲಿದೆ.
ಇದನ್ನೂ ಓದಿ : Baragala Parihara Status ಇಲ್ಲೇ ಚೆಕ್ ಮಾಡಿ ನಿಮಗೆಷ್ಟು ಜಮೆ
ಮೇಲೆ ತಿಳಿಸಿದ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳ ರೈತರಿಗಾಗಿ ಬೋರ್ವೆಲ್ ಘಟಕದ ವೆಚ್ಚ್ 3 ,75,000 ರೂಪಾಯಿ ಇರಲಿದೆ. ಇದರಲ್ಲಿ 2 ಲಕ್ಷ 50 ಸಾವಿರ ರೂಪಾಯಿ ಸಬ್ಸಿಡಿ ಇರಲಿದೆ. 75 ಸಾವಿರ ವಿದ್ಯುತ್ ಸರಬರಾಜು ಬಾಬ್ತು ಇರಲಿದೆ. 50ಸಾವಿರ ರೂಪಾಯಿ ಬ್ಯಾಂಕಿನಿಂದ ಶೇ.4 ರೂಪಾಯಿಯಂತೆ ಸಾಲ ನೀಡಲಾಗುವುದು.
ರೈತರು ಸೌಲಭ್ಯ ಪಡೆಯಲು ಇರಬೇಕಾದ ಸೌಲಭ್ಯಗಳು
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು.
ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಅರ್ಹ ಫಲಾಫೇಕ್ಷಿಗಳು ಗ್ರಾಮ ಒನ್ , ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ಆಧಾರ್ ಕಾರ್ಡ್ ಹಾಗೂ ರೇಶನ್ ಕಾರ್ಡ್ ಇರಬೇಕು ಸಣ್ಣ ಅಥವಾ ಅತೀ ಸಣ್ಣ ರೈತರ ದೃಢೀಕರಣ ಪತ್ರ ಇರಬೇಕು. ರೈತರ ಫ್ರೂಟ್ಸ್ ಐಡಿ ಕಡ್ಡಾಯವಾಗಿ ಸಲ್ಲಿಸಬೇಕು. ಜಮೀನಿನ ಪಹಣಿ (ಆರ್.ಟಿ.ಸಿ) ಮೂಲ ಪತ್ರ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080 22865522 ಅಥವಾ 9900012351 ಅನ್ನು ಸಂಪರ್ಕಿಸಬಹುದು.