ರೈತರಿಗೆ ಗುಡ್ ನ್ಯೂಸ್ ಈ ನಂಬರಿಗೆ ಕರೆ ಮಾಡಿದರೆ ಸಾಕು, ಕೃಷಿಗೆ ಸಂಬಂಧಿಸಿದ ಮಾಹಿತಿ ಸಿಗಲಿದೆ- ಇಲ್ಲಿದೆ ಮಾಹಿತಿ

Written by Ramlinganna

Published on:

ರಾಜ್ಯದ ರೈತರಿಗೆ ಅನುಕೂಲವಾಗಲೆಂದು ಕೃಷಿಗೆ ಸಂಬಂಧಿಸಿದ ಹೆಲ್ಪ್ ಲೈನ್ ಆರಂಭಿಸಿದೆ. ಹೌದು, ಈ ನಂಬರಿಗೆ ಕರೆ ಮಾಡಿದರೆ ಸಾಕು, ಒಂದೇ ನಿಮಿಷದಲ್ಲಿ ಕೃಷಿಗೆ ಸಂಬಂಧಿಸಿದ ಮಾಹಿತಿ ಪಡೆಯಬಹುದು. ಹಾಗಾದರೆ ಕೃಷಿಗೆ ಸಂಬಂಧಿಸಿದ ಯಾವ್ಯಾವ ಮಾಹಿತಿ ಪಡೆಯಬಹುದು? ಕೃಷಿಗೆ ಸಂಬಂಧಿಸಿದ ಹೆಲ್ಪ್ ಲೈನ್ ನಂಬರ್ ಯಾವುದು? ಈ ಹಿಂದಿನ ಹಳೆ ನಂಬರ್ ಗಳು ಕಾರ್ಯನಿರ್ವಹಿಸುತ್ತವೆಯೋ ಇಲ್ಲವೋ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

ಕೃಷಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಈ ಹಿಂದೆ 8 ಪ್ರತ್ಯೇಕ ಹೆಲ್ಪ್ ಲೈನ್ ನಂಬರ್ ಗಳಿದ್ದವು. ಈಗ ಇವುಗಳ ಬದಲಾಗಿ ಒಂದು ಸಹಾಯವಾಣಿಯನ್ನು ಆರಂಭಿಸಲಾಗಿದೆ. ರೈತರು ಕೃಷಿಗೆ ಸಂಬಂಧಿಸಿದ ಮಾಹಿತಿ ಪಡೆಯಲು

1800 425 3553 ಗೆ

ಕರೆ ಮಾಡಿದರೆ ಸಾಕು, ಕೃಷಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪಡೆಯಬಹುದು.

ಕೃಷಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮಾರ್ಗದರ್ಶನ, ಸಲಹೆ, ಪರಿಹಾರ ಕಲ್ಪಿಸಲು ಕೃಷಿ ಇಲಾಖೆಯಿಂದ ಏಕೀಕೃತ ಹೆಲ್ಪ್ ಲೈನ್ ನಂಬರನ್ನು ಕೃಷಿ ಸಚಿವರ ಲೋಕಾರ್ಪಣೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಚಲುವರಾಯ ಸ್ವಾಮಿ, ಬೆಳೆ, ಹವಾಮಾನ, ವಿಮೆ, ರೈತ ವಿದ್ಯಾನಿಧಿ, ಕೃಷಿ ಸಂಜೀವಿನಿ ಮತ್ತಿತರ ಮಾಹಿತಿ ಪಡೆಯಲು 8 ಪ್ರತ್ಯೇಕ ಕರೆ ಸಂಖ್ಯೆಗಳಿದ್ದವು.ರೈತರಿಗೆ ಸುಲಭವಾಗಿ ಮಾಹಿತಿ ದೊರೆಯಲು ಇದೀಗ ನೂತನ ಸಹಾಯವಾಣಿ ಸಂಖ್ಯೆ 1800 425 3553 ಸ್ಥಾಪಿಸಿದ್ದು, ಎಲ್ಲಾ ಮಾಹಿತಿ ಪಡೆಯಬಹುದು ಎಂದು ಸ್ಪಷ್ಟಪಡಿಸಿದರು.

ಮಾಹಿತಿ ಹಾಗೂ ತಾಂತ್ರಿಕ ನೆರವಿನ ಜತೆಗೆ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೂ ಇಲಾಖೆ ಮುಂದಾಗಿದೆ. ರೈತರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಲು ಬೆಳೆ ಸಮೀಕ್ಷೆ ಕೂಡ ಪ್ರಮುಖವಾಗಿದೆ. ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆ ನಡೆಸುವವರಿಗೆ ರಾಜ್ಯಮಟ್ಟದಲ್ಲಿ ಬೆಳೆ ಸಮೀಕ್ಷೆ ಮಾಸ್ಟರ್ ತರಬೇತುದಾರರ ತರಬೇತಿ ಹಮ್ಮಿಕೊಳ್ಳಲಾಗಿದೆ. ಎಲ್ಲಾಸಿಬ್ಬಂದಿ ಜವಾಬ್ದಾರಿಯಿಂದ ರೈತರ ಹಿತ ಗಮನದಲ್ಲಿ ಇಟ್ಟುಕೊಂಡು ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿದರು.

ಅರಣ್ಯ ಇಲಾಖೆಗೂ ಅಗತ್ಯ

ರಾಜ್ಯದಲ್ಲಿ 2017  ಕ್ಕೂ ಮೊದಲು ಬೆಳೆಗಳ ವಿವರವನ್ನು ಅಧಿಕಾರಿಗಳು ಭೌತಿಕವಾಗಿ ಮಾಡುತ್ತಿದ್ದು ಸರಿಯಾಗಿ ಮಾಹಿತಿ ದಾಖಲಾಗುತ್ತಿರಲಿಲ್ಲ. ಆದ್ದರಿಂದ ಇ ಆಡಳಿತ ಇಲಾಖೆ ಅಭಿವೃದ್ಧಿಪಡಿಸಿದ ಜಿಪಿಎಸ್ ಆಧಾರಿತ ಮೊಬೈಲ್ ತಂತ್ರಂಶ ಬಳಸಿ ಈಗ ಸರ್ವೆ ಸಂಖ್ಯೆ, ಹಿಸ್ಸಾವಾರು ಬೆಳೆ ಮಾಹಿತಿ ದಾಖಲಿಸುವ ಕಾರ್ಯ ಚಾಲ್ತಿಯಲ್ಲಿದೆ.

ಇದನ್ನೂ ಓದಿ : ಪಿಎಂ ಕಿಸಾನ್ 15 ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆ- ನಿಮ್ಮ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ

ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಜಂಟಿಯಾಗಿ ಬೆಳೆ ಸಮೀಕ್ಷೆಯಲ್ಲಿ ತೊಡಗುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳನ್ನು ತೊಡಗಿಸಿಕೊಂಡರೆ ಉತ್ತಮ ಎಂದರು.

ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ಅನ್ಬುಕುಮಾರ ಮಾತನಾಡಿ, ಏಕೀಕೃತ ರೈತ ಕರೆ ಕೇಂದ್ರದಿಂದ ರೈತರಿಗೆ ಮಾಹಿತಿ ನೀಡುವ ಜೊತೆಗೆ ಸಮಸ್ಯೆಗಳನ್ನು ತಿಳಿಯಬಹುದು ಎಂದರು.

ಪ್ರತಿ ಜಿಲ್ಲೆಯಲ್ಲಿಯೂ ರೈತರೊಂದಿಗೆ ಸಂವಾದ

ಪ್ರತಿ ಜಿಲ್ಲೆಯಲ್ಲೂ ಕೃಷಿ ಬಗ್ಗೆ ರೈತರೊಂದಿಗೆ ಸಂವಾದ ನಡೆಸಲು ಕೃಷಿ ಸಚಿವ ಚಲುವರಾಯಸ್ವಾಮಿ ಮುಂದಾಗಿದ್ದಾರೆ. ಜಿಲ್ಲೆಗಳಲ್ಲಿಪ್ರವಾಸ ಮಾಡುವ ಸಂದರ್ಭದಲ್ಲಿ ಇಲಾಖೆ ಅಧಿಕಾರಿಗಳ ಜತೆಗೆ ಸಭೆ ಮಾಡುವುದು ಮಾಹಿತಿ ಪಡೆಯುವುದು ಮತ್ತು ನಿರ್ದೇಶನ ನೀಡುವುದಕ್ಕೆ ಮಾತ್ರ ಸಿಮೀತವಾಗುವುದು ಬೇಡ. ಅದರ ಆಚೆಗೂ ಸಾಮಾನ್ಯ ರೈತರ ಜತೆಗೆ ಒಡನಾಡುವುದು ಬಹಳ ಮುಖ್ಯ ಎನ್ನುವ ಚಿಂತನೆ ಹಿನ್ನೆಲೆಯಲ್ಲಿ ಸಂವಾದ ಕಾರ್ಯಕ್ರಮ ರೂಪುಗೊಂಡಿದೆ.

ಮುಂದಿನ ವಾರ ಚಿತ್ರದುರ್ಗ ಜಿಲ್ಲೆಯಿಂದಲೇ ಸಂವಾದ ಕಾರ್ಯಕ್ರಮ ಪ್ರಾರಂಭಿಸಲು ಚಲುವರಾಯ ಸ್ವಾಮಿ ಒಲವು ತೋರಿಸಿದ್ದು, ಈಗಾಗಲೇ ಈ ಬಗ್ಗೆ ಸಿದ್ದತೆಗೂ ಸೂಚನೆಗಳನ್ನು ನೀಡಲಾಗಿದೆ ಎಂದು ಆಪ್ತ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಸಾಧಕ ಬಾಧಕಗಳನ್ನು ನೋಡಿಕೊಂಡು ಮುಂದಿನ ಸಂವಾದದ ನೀಲನಕ್ಷೆ ರೂಪಿಸಲುಸಾಧ್ಯವಾಗಲಿದೆ ಎಂದು ನಿರ್ಧರಿಸಲಾಗಿದೆ. ಕೃಷಿ ಇಲಾಖೆ ಪೂರ್ಣವಾಗಿ ರೈತರಿಗೆ ಸಂಬಂಧಿಸಿದ್ದು, ಆದ್ದರಿಂದ ಕೃಷಿ ಬಗ್ಗೆ ರೈತರೊಂದಿಗೆ ನೇರ ಸಂವಾದ ಮಾಡುವ ವಿಶೇಷ ಕಾರ್ಯಕ್ರಮಗಳನ್ನು ಪ್ರತಿ ಜಿಲ್ಲೆಯಲ್ಲಿ ನಡೆಸಲು ನಿರ್ಧರಿಸಿದ್ದೇನೆ ಎಂದು ಚಲುವರಾಯ ಸ್ವಾಮಿ ತಿಳಿಸಿದ್ದಾರೆ.

Leave a Comment