ವಿಮೆ ಹಣ ಜಮೆಯಾಗಿಲ್ಲವೇ? ಈ ನಂಬರಿಗೆ ಕರೆ ಮಾಡಿ ಬೆಳೆ ವಿಮೆ ಮಾಹಿತಿ ಪಡೆಯಿರಿ

Written by Ramlinganna

Updated on:

ಬೆಳೆ ವಿಮೆ ಹಣ ನಿಮಗೆ ಜಮೆಯಾಗಿಲ್ಲವೇ? ವಿಮೆ ಕುರಿತಂತೆ ಯಾರಿಗೆ ಸಂಪರ್ಕಿಸಬೇಕು? ನಿಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿಯನ್ನು ನಿಯೋಜಿಸಲಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಕಳೆದ ವರ್ಷ ಹಾಗೂ ಪ್ರಸಕ್ತ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ ರೈತರು ಯಾವ ವಿಮಾ ಕಂಪನಿಗೆ ಹಣ ಪಾವತಿಸಿದ್ದಾರೆ? ಆಯಾ ತಾಲೂಕಿನ ವಿಮಾ ಕಂಪನಿಯ ಸಿಬ್ಬಂದಿಗಳ ಮೊಬೈಲ್ ನಂಬರ್ ಇಟ್ಟುಕೊಳ್ಳುವುದು ಅತೀ ಮುಖ್ಯವಾಗಿದೆ. ಏಕೆಂದರೆ ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ನಷ್ಟವಾದಾಗ ವಿಮಾ ಸಿಬ್ಬಂದಿಗೆ ಕರೆ ಮಾಡುವುದು ಅತೀ ಮುಖ್ಯವಾಗಿರುತ್ತದೆ.

ಬೆಳೆ ವಿಮೆ ಮಾಡಿಸಿದ ನಂತರ ರೈತರು ತಮ್ಮ ಬೆಳೆ ಪ್ರಾಕೃತಿಕ ವಿಕೋಪ, ಆಲಿಕಲ್ಲು ಮಳೆ, ಭೂ ಕುಸಿತ, ಪ್ರವಾಹ, ಬೆಳೆ ಮುಳುಗಡೆ ಹಾಗೂ ಗುಡುಗ ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘಡಕ್ಕೆ ಬೆಳೆ ನಷ್ಟವಾದರೆ ರೈತರಿಗೆ ವಿಮೆ ನೀಡುವುದಕ್ಕಾಗಿ ಬೆಳೆ ವಿಮೆ ಯೋಜನೆಯನ್ನು ಆರಂಭಿಸಲಾಗಿದೆ.

ರೈತರು ಬೆಳೆ ವಿಮೆ ಮಾಡಿಸಿರುತ್ತಾರೆ. ಆದರೆ ಯಾವ ವಿಮಾ ಕಂಪನಿಗೆ ವಿಮೆ ಪಾವತಿಸಿರುತ್ತಾರೆ ಎಂಬುದು ಗೊತ್ತಿರುವುದಿಲ್ಲ. ಹಾಗೂ ತಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿಯನ್ನು ನಿಯೋಜಿಸಲಾಗಿದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ನಿಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿಯನ್ನು ನಿಯೋಜಿಸಲಾಗಿದೆ?

ನಿಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿಯನ್ನು ನಿಯೋಜಿಸಲಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/HomePages/frmKnowYourInsCompany.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಜಿಲ್ಲೆ ಮತ್ತು ಅದರ ಮುಂದುಗಡೆ ಯಾವ ವಿಮೆ ಕಂಪನಿಯನ್ನು ನಿಯೋಜಿಸಲಾಗಿದೆ ಎಂಬ ಪಟ್ಟಿ ಕಾಣಿಸುತ್ತದೆ. ನೀವು ನಿಮ್ಮ ಜಿಲ್ಲೆಯ ವಿಮಾ ಕಂಪನಿಯನ್ನು ಬರೆದಿಟ್ಟುಕೊಳ್ಳಬೇಕು. ಅಥವಾ ನೆನಪಿಟ್ಟುಕೊಂಡರೂ ನಡೆಯುತ್ತದೆ. ಆದರೆ ನಿಮಗೆ ವಿಮಾ ಕಂಪನಿಯ ಸಹಾಯವಾಣಿ ನಂಬರ್ ಗೊತ್ತಿರುವುದಿಲ್ಲ. ಹಾಗಾಗಿ ಇಲ್ಲಿ ನಿಮಗೆ ಸಹಾಯವಾಗಲೆಂದು ಇಲ್ಲಿ ಎಲ್ಲಾ ವಿಮಾ ಕಂಪನಿಯ ಉಚಿತ ಸಹಾಯವಾಣಿ ನಂಬರ್ ಗಳನ್ನೂ ನೀಡಲಾಗಿದೆ.

ಬೆಳೆ ವಿಮೆ ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 080-2656 4535, 080 2656 4536, 080 2656 4537 ಗೆ ಸಂಪರ್ಕಿಸಬಹುದು.

ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯ ಉಚಿತ ಸಹಾಯವಾಣಿ 1800 425 0505 ಗೆ ಸಂಪರ್ಕಿಸಬಹುದು.

ಯೂನಿವರ್ಸಲ್ ಸ್ಯಾಂಪೂ  ಕಂಪನಿಯ ಉಚಿತ ಸಹಾಯವಾಣಿ 1800 200 5142 ಗೆ ಸಂಪರ್ಕಿಸಬಹುದು.

ಇದನ್ನೂ ಓದಿ 200 ಯೂನಿಟ್ ವರೆಗಿನ ಉಚಿತ ವಿದ್ಯುತ್ ಪಡೆಯಲು ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಿ

ಎಸ್.ಬಿ.ಐ ಕಂಪನಿಯ ಉಚಿತ ಸಹಾಯವಾಣಿ 1800 180 1551 ಗೆ ಸಂಪರ್ಕಿಸಬಹುದು.

ಹೆಚ್.ಡಿ.ಎಫ್.ಸಿ ಎರ್ಗೋ ಉಚಿತ ಸಹಾಯವಾಣಿ 1800 266 0700 ಗೆ ಸಂಪರ್ಕಿಸಬಹುದು.

ಫ್ಯೂಚರ್ ಜನರಲ್ ಇನ್ಸುರೆನ್ಸ್ ಕಂಪನಿಯ ಉಚಿತ ಸಹಾಯವಾಣಿ  1800 266 4141 ಗೆ ಸಂಪರ್ಕಿಸಬಹುದು.

ಐಸಿಐಸಿಐ ಲೋಂಬಾರ್ಡ್ ಇನ್ಸುರೆನ್ಸ್ ಕಂಪನಿ ಉಚಿತ ಸಹಾಯವಾಣಿ 1800 103 7712 ಗೆ ಸಂಪರ್ಕಿಸಬಹುದು.

ಬಜಾಜ್ ಅಲಾಯನ್ಸ್ ಇನ್ಸುರೆನ್ಸ್ ಕಂಪನಿ ಉಚಿತ ಸಹಾಯವಾಣಿ 1800 209 5959 ಗೆ ಸಂಪರ್ಕಿಸಬಹುದು.

ನಿಮ್ಮ ಜಿಲ್ಲೆಗೆ ನಿಯೋಜಿಸಿದ ಬೆಳೆ ವಿಮಾ ಕಂಪನಿಯ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ನಿಮ್ಮ ತಾಲೂಕಿನ ಸಿಬ್ಬಂದಿ ನಂಬರ್ ಪಡೆದುಕೊಳ್ಳಬೇಕು. ಏಕೆಂದರೆ ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾಳಾದಾಗ ವಿಮಾ ಕಂಪನಿಯ ಸಿಬ್ಬಂದಿಗೆ 72 ಗಂಟೆಯೊಳಗೆ ತಿಳಿಸುವುದು ಅತೀ ಮುಖ್ಯವಾಗಿರುತ್ತದೆ. ಆಗ ವಿಮಾ ಕಂಪನಿಯ ಸಿಬ್ಬಂದಿ ನಿಮ್ಮ ಜಮೀನಿಗೆ ಬಂದು ಪರಿಶೀಲನೆ ಮಾಡಿ ವಿಮೆಗೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತಾರೆ. ಆಗ ಮಾತ್ರ ನಿಮಗೆ ಬೆಳೆ ವಿಮೆ ಹಣ ಜಮೆಯಾಗುವುದು.

Leave a Comment