ತಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ ಎಂಬ ಮಾಹಿತಿ ಗೊತ್ತಿರುವುದಿಲ್ಲ, ಅಂತಹ ರೈತರು ವರಣಮಿತ್ರ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಬಹುದು.
ಹೌದು, ರೈತರು ವರುಣಮಿತ್ರ ನಂಬರಿಗೆ ಕರೆ ಮಾಡಿದರೆ ಸಾಕು, ತಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಮಳೆಯೊಂದಿಗೆ ಮಳೆಯ ಮುನ್ಸೂಚನೆ ನೀಡಲಾಗುವುದು.
ಮುಂಗಾರು ಪೂರ್ವ ಮಳೆ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಿದೆ. ಬಿಸಿಲಿಗೆ ಬೆಂಡಾಗಿದ್ದ ಕೆಲವು ಕಡೆ ಜನರಿಗೆ ನೆಮ್ಮದಿ ನೀಡುತ್ತಿದ್ದರೆ ಇನ್ನೂ ಕೆಲವು ಕಡೆ ಗುಡುಗು ಸಿಡಿಲಿನ ಆರ್ಭಟಕ್ಕೆ ಹಾನಿಯೂ ಆಗುತ್ತಿದೆ. ಮಳೆಯ ಮಾಹಿತಿ ಗೊತ್ತಿಲ್ಲದೆ ರೈತರು ಅಪಾರ ಹಾನಿ ಅನುಭವಿಸುತ್ತಿದ್ದಾರೆ.
ಮಳೆಯ ಮಾಹಿತಿ ಪಡೆಯಲು ರೈತರು ಯಾವುದೇ ಕಚೇರಿಗೆ ಹೋಗಬೇಕಿಲ್ಲ, ಮನೆಯಲ್ಲಿಯೇ ಕುಳಿತು ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು.
ವರುಣಮಿತ್ರ ಸಹಾಯವಾಣಿ ನಂಬರ್ (Varunamitra helpline Number)
ರೈತರು, ಸಾರ್ವಜನಿಕರು ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ
Varunamitra helpline Number 9243345433 ಗೆ
ಕರೆ ಮಾಡಿದರೆ ಸಾಕು, ಕರೆ ಸ್ವೀಕರಿಸಿದ ಸಿಬ್ಬಂದಿಗಳು ರೈತರಿಗೆ, ಸಾರ್ವಜನಿಕರಿಗೆ ಮಳೆಯ ಮಾಹಿತಿ ನೀಡತ್ತಾರೆ. ಈ ಉಚಿತ ಸಹಾಯವಾಣಿಯು ದಿನದ 24 ಗಂಟೆಗಳ ಕಾಲ ಕೆಲಸ ನಿರ್ವಹಿಸುತ್ತದೆ. ಹಾಗಾಗಿ ರೈತರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿ ಪಡೆದುಕೊಳ್ಳಬಹುದು.
ವರುಣಮಿತ್ರ ಸಹಾಯವಾಣಿ ನಂಬರ್ ನಿಂದ ಯಾವ ಯಾವ ಮಾಹಿತಿ ಪಡೆಯಬಹುದು?
ವರುಣ ಮಿತ್ರ ಸಹಾಯವಾಣಿಯಿಂದ ಸಾರ್ವಜನಿಕರು ಮಳೆಯ ಮಾಹಿತಿಯೊಂದಿಗೆ, ಹವಾಮಾನ, ಗಾಳಿಯ ವೇಗ, ಗಾಳಿ ಯಾವ ದಿಕ್ಕಿನಿಂದ ಯಾವ ದಿಕ್ಕಿಗೆ ಬಿಸಲಿದೆ? ಮಳೆಯ ಪ್ರಮಾಣ ಹೇಗಿರಲಿದೆ, ಗುಡುಗು ಮಿಂಚಿನ ಮಾಹಿತಿ ಪಡೆಯಲಿದ್ದಾರೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಆ ಗ್ರಾಮದ ಸುತ್ತಮುತ್ತ ವಾತಾವರಣ ಹೇಗಿರಲಿದೆ ಎಂಬ ಮಾಹಿತಿ ಪಡೆಯಲಿದ್ದಾರೆ.
ಮಾರ್ಚ್ 22 ರಿಂದ ಈ ಜಿಲ್ಲೆಗಳಲ್ಲಿ ಮಳೆ
ಮಾರ್ಚ್ 22 ರಿಂದ 23 ರವರೆಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಯಚೂರು, ಬೀದರ್, ಯಾದಗಿರಿ, ಕಲಬುರಗಿ ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
Four days rain alert again ಮಾರ್ಚ್ 23 ರಂದು ಉಡುಪಿ, ರಾಮನಗರ, ಕೊಪ್ಪಳ, ಗದಗ ಜಿಲ್ಲೆಗಳ ಪ್ರತ್ಯೇಕ ಸ್ಥಳದಲ್ಲಿ ಲಘು ಮಳೆಯಾಗಲಿದೆ. ಇದೇ ಮಾರ್ಚ್ 24 ಮತ್ತು 25 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಮೈಸೂರು, ಹಾಸನ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಚಾಮರಾಜಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಗುರುವಾರ ಮತ್ತು ಶುಕ್ರವಾರ 30-40 ಕಿ.ಮೀ ವೇಗದಲ್ಲಿ ಗಾಳಿಯು ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಕಡೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.
ಇದನ್ನೂ ಓದಿ : ನೀವು ನಿಂತಿರುವ ಜಮೀನು ಯಾರ ಹೆಸರಿಗಿದೆ? ಸರ್ವೆ ನಂಬರ್ ಏನಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿ ಐದು ದಿನ ಮೊದಲೇ ಮಳೆಯ ಮಾಹಿತಿ ಪಡೆಯುವುದು ಹೇಗೆ?
ರೈತರು ಮನೆಯಲ್ಲಿಯೇ ಕುಳಿತು ಐದು ದಿನ ಮೊದಲೇ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು. ಹೌದು, ಈ
https://play.google.com/store/apps/details?id=com.aas.meghdoot&hl=en_IN&gl=US
ಲಿಂಕ್ ಮೇಲ ಕ್ಲಿಕ್ ಮಾಡಿ ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನೀವು ಯಾವ ಭಾಷೆಯಲ್ಲಿ ಮಾಹಿತಿ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆ ಆಯ್ಕೆ ಮಾಡಿಕೊಳ್ಳಬೇಕು, ನಂತರ ಮುಂದೆ ಮೇಲೆ ಕ್ಲಿಕ್ ಮೇಘದೂತ್ ಆ್ಯಪ್ ಲಾಗಿನ್ ಆಗಬೇಕು. ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಬೇಕು. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಜಿಲ್ಲೆಯ ಕನಿಷ್ಠ, ಗರಿಷ್ಠ ತಾಪಮಾನ, ಗಾಳಿಯ ವೇಗ ಹಾಗೂ ಗಾಳಿಯ ದಿಕ್ಕು ತೇವಾಂಶದ ಮಾಹಿತಿ ಕಾಣಿಸುತ್ತದೆ.