ಈ ನಂಬರಿಗೆ ಕರೆ ಮಾಡಿ ನಿಮ್ಮೂರಿನಲ್ಲಾಗುವ ಮಳೆಯ ಮಾಹಿತಿ ಪಡೆಯಿರಿ – ಏ. 8 ರವರೆಗೂ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Written by Ramlinganna

Updated on:

ತಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ ಎಂಬ ಮಾಹಿತಿ ಗೊತ್ತಿರುವುದಿಲ್ಲ, ಅಂತಹ ರೈತರು ವರಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಬಹುದು.

ಹೌದು, ರೈತರು ವರುಣಮಿತ್ರ ನಂಬರಿಗೆ ಕರೆ ಮಾಡಿದರೆ ಸಾಕು, ತಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ? ಮಳೆಯೊಂದಿಗೆ ಮಳೆಯ ಮುನ್ಸೂಚನೆ ನೀಡಲಾಗುವುದು.

ಮುಂಗಾರು ಪೂರ್ವ ಮಳೆ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಿದೆ. ಬಿಸಿಲಿಗೆ ಬೆಂಡಾಗಿದ್ದ ಕೆಲವು ಕಡೆ ಜನರಿಗೆ ನೆಮ್ಮದಿ ನೀಡುತ್ತಿದ್ದರೆ ಇನ್ನೂ ಕೆಲವು ಕಡೆ ಗುಡುಗು ಸಿಡಿಲಿನ ಆರ್ಭಟಕ್ಕೆ ಹಾನಿಯೂ ಆಗುತ್ತಿದೆ. ಮಳೆಯ ಮಾಹಿತಿ ಗೊತ್ತಿಲ್ಲದೆ ರೈತರು ಅಪಾರ ಹಾನಿ ಅನುಭವಿಸುತ್ತಿದ್ದಾರೆ.

ಮಳೆಯ ಮಾಹಿತಿ ಪಡೆಯಲು ರೈತರು ಯಾವುದೇ ಕಚೇರಿಗೆ ಹೋಗಬೇಕಿಲ್ಲ, ಮನೆಯಲ್ಲಿಯೇ ಕುಳಿತು ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಹುದು.

ವರುಣ ಮಿತ್ರ ಸಹಾಯವಾಣಿ (Varunamitra helpline Number)

ರೈತರು, ಸಾರ್ವಜನಿಕರು ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ವರುಣಮಿತ್ರ ಸಹಾಯವಾಣಿ

9243345433 ಗೆ

ಕರೆ ಮಾಡಿದರೆ ಸಾಕು, ಕರೆ ಸ್ವೀಕರಿಸಿದ ಸಿಬ್ಬಂದಿಗಳು ರೈತರಿಗೆ, ಸಾರ್ವಜನಿಕರಿಗೆ ಮಳೆಯ ಮಾಹಿತಿ ನೀಡತ್ತಾರೆ. ಈ ಉಚಿತ ಸಹಾಯವಾಣಿಯು ದಿನದ 24 ಗಂಟೆಗಳ ಕಾಲ ಕೆಲಸ ನಿರ್ವಹಿಸುತ್ತದೆ. ಹಾಗಾಗಿ ರೈತರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿ ಪಡೆದುಕೊಳ್ಳಬಹುದು.

ವರುಣ ಮಿತ್ರ ಸಹಾಯವಾಣಿಯಿಂದ ಯಾವ ಯಾವ ಮಾಹಿತಿ ಪಡೆಯಬಹುದು? (what are information will get from Varunmitra Helpline Number)

ವರುಣ ಮಿತ್ರ ಸಹಾಯವಾಣಿಯಿಂದ ಸಾರ್ವಜನಿಕರು ಮಳೆಯ ಮಾಹಿತಿಯೊಂದಿಗೆ, ಹವಾಮಾನ, ಗಾಳಿಯ ವೇಗ, ಗಾಳಿ ಯಾವ ದಿಕ್ಕಿನಿಂದ ಯಾವ ದಿಕ್ಕಿಗೆ ಬಿಸಲಿದೆ? ಮಳೆಯ ಪ್ರಮಾಣ ಹೇಗಿರಲಿದೆ, ಗುಡುಗು ಮಿಂಚಿನ ಮಾಹಿತಿ ಪಡೆಯಲಿದ್ದಾರೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಆ ಗ್ರಾಮದ ಸುತ್ತಮುತ್ತ ವಾತಾವರಣ ಹೇಗಿರಲಿದೆ ಎಂಬ ಮಾಹಿತಿ ಪಡೆಯಲಿದ್ದಾರೆ.

ರಾಜ್ಯದಲ್ಲಿ ಏಪ್ರೀಲ್ 8 ರವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ (Rain alert up to April 8th)

ರಾಜ್ಯದಲ್ಲಿಕಳದ ಕೆಲವು ದಿನಗಳಿಂದ ಶುರವಾಗಿರುವ ಪೂರ್ವ ಮುಂಗಾರು ಮಳೆ ಏಪ್ರೀಲ್ 10 ರವರೆಗೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಜೋರು ಮಳೆ ದಾಖಲಾಗಿದೆ. ಇದೇ ರೀತಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ಇದನ್ನೂ ಓದಿ  : ನೀವು ನಿಂತಿರುವ ಜಮೀನು ಯಾರ ಹೆಸರಿಗಿದೆ? ಸರ್ವೆ ನಂಬರ್ ಏನಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಉತ್ತರ ಒಳನಾಡಿನ ಭಾಗದ ಜಿಲ್ಲೆಗಳ ಒಂದೆಡರು ಕಡೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಏಪ್ರೀಲ್ 8 ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಬೆಂಗಳೂರ ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಗುರುವಾರ ಕಲಬುರಗಿಯಲ್ಲಿ ವಾತಾವರಣ

ಕಲಬುರಗಿಯಲ್ಲಿ ಗುರುವಾರ ಮೋಡ ಕವಿದ ವಾತಾವರಣವಿದೆ. ಸೇಡಂ ತಾಲೂಕಿನಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಿದೆ. ಕಲಬುರಗಿ ನಗರದ ಸುತ್ತಮುತ್ತಲೂ ಬೆಳಗ್ಗೆ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಸುಡು ಬಿಸಿಲು ಸಾಯಂಕಾಲ ಮತ್ತೇ ಮೋಡ ಕವಿದ ವಾತಾವರಣವಿದೆ.

Leave a comment