Campus selection ಜೂನ್ 11 ರಂದು ಕ್ಯಾಂಪಸ್ ಸಂದರ್ಶನ

Written by Ramlinganna

Published on:

Campus selection : ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್. ಹೌದು, ಐಟಿಐ ಪಾಸಾದ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ.

ಹೌದು, ಕೋಲಾರ ಜಿಲ್ಲೆಯ ನರಸಾಪೂರ ಹೋಂಡಾ ಮೋಟರ್ ಸೈಕಲ್ ಆ್ಯಂಡ್ ಸ್ಕೂಟರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ದಲ್ಲಿ ಅಪ್ರೆಂಟಿಶಿಪ್ ಮತ್ತು ಕಂಪನಿ ಟ್ರೈನಿ ಹುದ್ದೆಗಳಿಗೆ ಐಟಿಐ ಪಾಸಾದ ಹಾಗೂ ಪ್ರಸ್ತುತ ಕೊನೆಯ ವರ್ಷದಲ್ಲಿ ಅಭ್ಯಸಿಸುತ್ತಿರುವ ಅಭ್ಯರ್ಥಿಗಳಿಗೆ  ಇದೇ ಜೂನ್ 11 ರಂದು ಬೆಳಗ್ಗ 9 ಗಂಟೆಗೆ ಕಲಬುರಗಿ  (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ತಿಳಿಸಿದ್ದಾರೆ.

Campus selection ಕ್ಯಾಂಪಸ್ ಸಂದರ್ಶನಕ್ಕೆ ಯಾವ ಯಾವ ದಾಖಲೆ ಬೇಕು?

ಅಭ್ಯರ್ಥಿಗಳ ವಯೋಮಿತಿ 18 ರಿಂದ 25 ವಯೋಮಾನದೊಳಗಿರಬೇಕು. ಇಚ್ಚೆಯುಳ್ಳ ಅಭ್ಯರ್ಥಿಗಳು ಮೇಲ್ಕಂಡ ದಿನದಂದು ನಡೆಯುವ ಸಂದರ್ಶನಕ್ಕೆ ಅವಶ್ಯಕ ದಾಖಲೆಗಳಾದ ಬಯೋಡಾಟಾ, ಎಸ್ಎಸ್ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ ಎರಡು ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ಇತರೆ ಮೂಲ ದಾಖಲಾತಿ ಹಾಗೂ ಪ್ರತಿಗಳೊಂದಿಗೆ ಕಲಬುರಗಿ ಎಂ.ಎಸ್.ಕೆ.ಮಿಲ್ ರಸ್ತೆಯ ಸರ್ಕಾರಿ (ಪುರುಷ) ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸರ್ಕಾರಿ (ಪುರುಷ) ಕೈಗಾರಿಕಾ ತರಬೇತಿ ಸಂಸ್ಥೆಯ ಸೂಚನಾ ಫಲಕದಲ್ಲಿ ವಿವರ ನೋಡಲು ಹಾಗೂ ಮೊಬೈಲ್ ಸಂಖ್ಯೆ 7259272146 ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಇನ್ನೇಕೆ ತಡ, ಕೂಡಲೇ ಎಲ್ಲಾ ದಾಖಲೆಗಳೊಂದಿಗೆ ಕ್ಯಾಂಪಸ್ ಸಂದರ್ಶನಕ್ಕೆ ಭಾಗವಹಿಸಲು ಕೋರಲಾಗಿದೆ.

ವಿಜ್ಞಾನ ಅತಿಥಿ ಶಿಕ್ಷಕರ ಹುದ್ದಗೆ ಅರ್ಜಿ ಆಹ್ವಾನ

ಕಲಬುರಗಿ ನಗರದ (ಸಿದ್ದಿಬಾಷಾ ದರ್ಗಾ ಹಿಂದುಗಡೆ) ಜಗತ್ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ ಖಾಲಿಯಿರುವ ವಿಜ್ಞಾನ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಗತ್ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

ಇದನ್ನೂ ಓದಿ ಈ ಲಿಸ್ಟ್ ನಲ್ಲಿರುವವರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ

ಅರ್ಹ ಅಭ್ಯರ್ಥಿಗಳು ಬಿ.ಎಸ್.ಸಿ, ಬಿ.ಇಡಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಟಿಇಟಿ ಪಾಸಾದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ರಿಸ್ಯೂಮ್ ನೊಂದಿಗೆ ಖುದ್ದಾಗಿ ಜೂನ್ 14 ರೊಳಗಾಗಿ ಶಾಲಾ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9538846119 ಗೆ ಸಂಪರ್ಕಿಸಲು ಕೋರಲಾಗಿದೆ.

ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ- ಕೂಡಲೇ ಅರ್ಜಿ ಸಲ್ಲಿಸಿ

ಕಲಬುರಗಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿಯಿರುವ ವಿವಿಧ ವಿಷಯಗಳ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳು ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗುವವರೆಗೆ ಅತಿಥಿ ಉಪನ್ಯಾಸಕರನ್ನು ಸರ್ಕಾರದ ಆದೇಶ ಸಂಖ್ಯೆ ದಿನಾಂಕ  04-07-2016 ರಲ್ಲಿನ ಷರತ್ತುಗೊಳಪಟ್ಟು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿಮೆರಿಟ್ ಆಧಾರದಲ್ಲಿಆಯ್ಕೆ ಮಾಡಲು ಅನುಮತಿ ನೀಡಲಾಗಿದೆ.

ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ 2024 ರ ಜೂನ್ 13 ರೊಳಗಾಗಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಪ್ರಾಂಶುಪಾಲರು ಆಯ್ಕೆ ಮಾಡಿದ ಅಭ್ಯರ್ಥಿಗಳ ವಿಷಯವಾರು ಪಟ್ಟಿಯನ್ನು ಕಚೇರಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್ 14 ಇರುತ್ತದೆ.

ವಿಷಯವಾರು ಖಾಲಿಯಿರುವ  ಹುದ್ದೆಗಳ ಮಾಹಿತಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧ ಆವರಣದಲ್ಲಿರುವ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Leave a Comment