ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇನ್ನೂ ಮುಂದೆ ಮೊಬೈಲ್ ನಲ್ಲಿ ಪಡೆಯಿರಿ: ಇಲ್ಲಿದೆ ಮಾಹಿತಿ

Written by Ramlinganna

Published on:

ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಆನ್ಲೈನ್ ಮೂಲಕ ಪಡೆಯಬಹುದು. ಹೌದು, ವಿದ್ಯಾರ್ಥಿಯ ಬಳಿ ರೇಶನ್ ಕಾರ್ಡ್  ಅಥವಾ ಆಧಾರ್ ಕಾರ್ಡ್ ಒಂದಿದ್ದರೆ ಸಾಕು, ರೇಶನ್ ಕಾರ್ಡ್ ದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮದ್ಯವರ್ತಿಗಳ ಹಾವಳಿ ತಪ್ಪಿಸುವುದಕ್ಕಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ವ್ಯವಸ್ಥೆ ಜಾರಿದೆ ತರಲಾಗಿದೆ. ಇದರಿಂದಾಗಿ ಸಮಯದ ಉಳಿತಾಯದೊಂದಿಗೆ ಅನಾವಶ್ಯಕ ಖರ್ಚು ಉಳಿತಾಯವಾಗುತ್ತದೆ. ಹೌದು, ಕೇವಲ 5 ರಿಂದ 10 ನಿಮಿಷದಲ್ಲಿ ಆನ್ಲೈನ್ ಮೂಲಕ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಬಹುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳ ಶುಲ್ಕವನ್ನು ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕನಿಂದ ಪಾವತಿಸಬಹುದು.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯುವುದು ಹೇಗೆ? (How to taken caste and income certificate online)

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಈ

https://nadakacheri.karnataka.gov.in/ajsk

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಾಡಕಚೇರಿಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆನ್ಲೈನ್ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಬೇಕು. ನಂತರ  ಅಪ್ಲೈ ಆನ್ಲೈನ್ ಮೇಲೆ ಕ್ಲಿಕ್ ಮಾಡಿದಾಗ ಇನ್ನೊಂದು ಪೇಜ್ ಓಪನ್ ಆಗುತ್ತದೆ.  ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಹಾಕಬೇಕು ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಟಿಪಿ ಸೆಂಟ್ ಟು ದ ಮೊಬೈಲ್ ಮೆಸೆಜ್ ಕಾಣಿಸುತ್ತದೆ.ಅಲ್ಲಿ ಓಕೆ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಿಮ್ಮ ಮೊಬೈಲಿಗೆ ಬಂದ ಓಟಿಪಿ ನಮೂದಿಸಿ ಲಾಗಿನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ.

ನ್ಯೂ ರೆಕ್ವೆಸ್ಟ್  ಮೇಲೆ ಕ್ಲಿಕ್ ಮಾಡಬೇಕು. Caste Certificate ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ರೇಶನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಎರಡು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಆಧಾರ್ ಕಾರ್ಡ್ ಆಯ್ಕೆ ಮಾಡಿಕೊಂಡ ನಂತರ ನಿಮ್ಮ ಆಧಾರ್ ಕಾರ್ಡ್ ಐಡಿ ಹಾಕಬೇಕು.  ಅಲ್ಲಿ ಜಿಎಸ್ಸಿ ನಂಬರ್ ಭರ್ತಿ ಮಾಡುವ ಅಗತ್ಯವಿಲ್ಲ.

ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಂಡು ನಿಮ್ಮ ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಂಡು ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನೀವು ಅರ್ಜಿ ಕನ್ನಡದಲ್ಲಿ ಭರ್ತಿ ಮಾಡಬೇಕಾದರೆ ಕನ್ನಡ ಆಯ್ಕೆ ಮಾಡಿಕೊಳ್ಳಬೇಕು. ಇಂಗ್ಲೀಷ್ ನಲ್ಲಿ ಬರೆಯಬೇಕಾದರೆ ಇಂಗ್ಲೀಷ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಹೆಸರು, ತಂದೆಯ ಹೆಸರು ಬರೆಯಬೇಕು.

ಇದನ್ನೂ ಓದಿ : ನಿಮ್ಮ ಯಾವ ಸರ್ವೆ ನಂಬರ್ ಮೇಲೆ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ರಿಸರ್ವೆಶನ್ ಕೆಟಗೇರಿಯಲ್ಲಿ ನೀವು ಯಾವ ಕೆಟಗೇರಿಗೆ ಸಂಬಂಧಿಸಿದ್ದೀರೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ  ಅರ್ಜಿದಾದರ ಹೆಸರು ಇಂಗ್ಲೀಷ್ ನಲ್ಲಿಭರ್ತಿ ಮಾಡಬೇಕು. ಇದು ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರುಇರಬೇಕು. ಪ್ರಿಂಟ್ consent ಮೇಲೆ ಕ್ಲಿಕ್ ಮಾಡಿ ನಿಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು.

ಜಾತಿ ಮತ್ತು ಪ್ರಮಾಣ ಪತ್ರದ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಾಗುತ್ತದೆ.  ಆನ್ಲೈನ್ ಮೂಲಕ ಹಣ ಪಾವತಿಸಿದ ನಂತರ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ಪಡೆಯಬಹುದು.

ಆನ್ಲೈನ್ ಅಪ್ಲಿಕೇಶನ್ಹಾಕುವಾಗ, ನಿಮ್ಮ ಕಂಪ್ಯೂಟರ್ ಗೆ ಸಂಪರ್ಕಿವಿದ್ದರೆ ತಕ್ಷಣ ನೀವು ಪ್ರಿಂಟ್ ತೆಗೆದುಕೊಳ್ಳಬಹುದು.

Leave a comment