ಅನ್ನಭಾಗ್ಯ ಹಣ ಬಿಡುಗಡೆ ನಿಮಗೆಷ್ಟು ಜಮೆ ಇಲ್ಲೇ ಚೆಕ್ ಮಾಡಿ

Written by Ramlinganna

Published on:

Check annabhagya status : ಅನ್ನಭಾಗ್ಯ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳಿಗೆ ಜುಲೈ ತಿಂಗಳಿಂದ ಇಲ್ಲಿಯವರೆಗೆ ನಿಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.

ಹೌದು, ಅನ್ನಭಾಗ್ಯ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ಮಾಹಿತಿ.

Check annabhagya status ಅನ್ನಭಾಗ್ಯ ಯೋಜನೆಯಡಿ ನಿಮಗೆ ಹಣ ಜಮೆಯಾಗಿದೆ? ಚೆಕ್ ಮಾಡುವುದು ಹೇಗೆ?

ಅನ್ನಭಾಗ್ಯ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://ahara.kar.nic.in/lpg/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಆಹಾರ, ನಾಗರಿಕ, ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ವಿಭಾಗವಾರು ಜಿಲ್ಲೆಗಳು ಕಾಣಿಸುತ್ತವೆ. ನಿಮ್ಮ ಜಿಲ್ಲೆ ಯಾವ ವಿಭಾಗದಲ್ಲಿಬರುತ್ತದೆ. ಆದರ ಮೇಲ್ಗಡೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುವುದು. ಅಲ್ಲಿ (Status of BDT) ನೇರ ನಗದು ವರ್ಗಾವಣೆಯ ಸ್ಥಿತಿ (DBT) ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವ ಯಾವ ತಿಂಗಳ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ತಿಂಗಳು ಆಯ್ಕೆ ಮಾಡಿಕೊಳ್ಳಬೇಕು.

ಉದಾಹರಣೆಗೆ ನೀವು ಜೂನ್ ತಿಂಗಳ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದರೆ ಜೂನ್ ತಿಂಗಳು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆರ್.ಸಿ. ನಂಬರ್ (ಆಧಾರ್ ಕಾರ್ಡ್ ನಂಬರ್) ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ನೀವು ಆಯ್ಕೆ ಮಾಡಿಕೊಂಡ ತಿಂಗಳಲ್ಲಿ ಎಷ್ಟು ಹಣ ಜಮೆ ಆಗಿದೆ ಎಂಬುದನ್ನು ಚೆಕ್ ಮಾಡಬಹುದು.

ಕುಟುಂಬದ ಸದಸ್ಯರಿಗೆ ಎಷ್ಟು ಹಣ ಜಮೆ?

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಅ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಘೋಷಣೆ ಮಾಡಿತ್ತು. ಚುನಾವಣೆ ಘೋಷಣೆಯಂತೆ  ಜುಲೈ ತಿಂಗಳಿನಿಂದ ರಾಜ್ಯದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಹಣ ನೀಡಲಾಗುತ್ತಿದೆ. ಹೌದು, ಅಕ್ಕಿ ಖರೀದಿಗೆ ಸಮಸ್ಯೆಯಾಗಿದ್ದರಿಂದ ಅಕ್ಕಿಯ ಬದಲಾಗಿ ಹಣ ನೀಡಲಾಗುತ್ತಿದೆ. ಸರ್ಕಾರ ಘೋಷಣೆ ಮಾಡಿದಂತೆ ಈಗ ಅಕ್ಕಿಯ ಬದಲಾಗಿ ಜುಲೈ ತಿಂಗಳಿಂದ ಪ್ರತಿ ಸದಸ್ಯರನುಗುಣವಾಗಿ ನೇರವಾಗಿ ಕುಟುಂಬದ ಮುಖ್ಯಸ್ಥರ ಖಾತೆಗೆ ಹಣ ಜಮೆ ಮಾಡುತ್ತಿದೆ.

ಇದನ್ನೂ ಓದಿ ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ? ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಿ

ಕುಟುಂಬದಲ್ಲಿರುವ ಪ್ರತಿಯೊಬ್ಬ ಸದಸ್ಯರಿಗೆ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಒಬ್ಬ ಸದಸ್ಯರಿಗೆ 170 ರೂಪಾಯಿ ನೀಡಲಾಗುತ್ತಿದೆ. ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಒಟ್ಟು ಹಣವನ್ನು ಯಜಮಾನರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ.

ಒಂದು ಕುಟುಂಬದಲ್ಲಿ ಪತಿ ಪತ್ನಿಹಾಗೂ ಇಬ್ಬರು ಮಕ್ಕಳಿದ್ದರೆ ತಲಾ ಒಬ್ಬ ಸದಸ್ಯರಿಗೆ 170 ಒಟ್ಟು ನಾಲ್ಕು ಜನ ಸದಸ್ಯರಿಗೆ  ಒಟ್ಟು 680 ರೂಪಾಯಿ ಐದು ಜನ ಸದಸ್ಯರಿದ್ದರೆ 850 ರೂಪಾಯಿ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ಜಮೆ ಮಾಡಲಾಗುವುದು. ಆದರೆ ಎಪಿಲ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯದ ಯೋಜನೆಯಡಿಯಲ್ಲಿ ಯಾವುದೇ ಹಣ ಜಮೆಯಾಗುವುದಿಲ್ಲ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಚಾಲ್ತಿಯಲ್ಲಿರಬೇಕು. ಕಳೆದ ಮೂರು ತಿಂಗಳಲ್ಲಿ ಅನ್ನಭಾಗ್ಯದ ಯೋಜನೆಯಡಿ ಪಡಿತರ ಪಡಿದಿರಬೇಕು. ಅಂತಹವರಿಗೆ ಮಾತ್ರ ಈ ಹಣ ಜಮೆಯಾಗಲಿದೆ.

Leave a Comment