ಈ ಲಿಸ್ಟ್ ನಲ್ಲಿರುವವರಿಗೆ ಅನ್ನಭಾಗ್ಯದ ಹಣ ಜಮೆ

Written by Ramlinganna

Updated on:

Check beneficiary list annabhagya ಅನ್ನಭಾಗ್ಯದ ಯೋಜನೆಯಡಿಯಲ್ಲಿ ನೋಂದಾಯಿಸಿದ ಫಲಾನುಭವಿಗಳ ಖಾತೆಗೆ ಇದೇ ತಿಂಗಳು ಹಣ ನೇರವಾಗಿ ಅವರ ಖಾತೆಗೆ ಬಿಡುಗಡೆ ಮಾಡಲಾಗುವುದು.

ಹೌದು, ಪಡಿತರ ಚೀಟಿ ಹೊಂದಿರುವ  ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಕಳೆದ ತಿಂಗಳು ಹಣ ಬಿಡುಗಡೆ ಮಾಡಿದ್ದು, ಫಲಾನುಭವಿಗಳ ಖಾತೆಗೂ ಸಹ ಹಣ ಜಮೆಯಾಗಿದೆ. ಈಗ ಈ ತಿಂಗಳಿನಲ್ಲಿಯೂ ಸಹ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ಯಾರು ಯಾರಿಗೆ ಅನ್ನಭಾಗ್ಯದ ಹಣ ಜಮೆಯಾಗಲಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ತಮ್ಮ ಬಳಿಯಿರು ವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಭರವಸೆ ನೀಡಿತ್ತು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 5 ಕೆಜಿ ಅಕ್ಕಿ ನೀಡಲಾಗುವುದು ಎಂದು ಘೋಷಣೆ ಮಾಡಿತ್ತು. ಫಲಾನುಭವಿಗಳಿಗೆ ಅ್ಕಕಿ ನೀಡಲು ಸಮಸ್ಯೆಯಾಗಿದ್ದರಿಂದ ಅಕ್ಕಿ ಬದಲಿಗೆ ಪ್ರತಿ ಸದಸ್ಯರಿಗೆ 170 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ವರ್ಗಾವಣೆ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಕಾಂಗ್ರೆಸ್ ಪಕ್ಷವು ನೀಡಿದ ಭರವಸೆಯಂತೆ ಮೇ ತಿಂಗಳಲ್ಲಿ ಈಗಾಗಲೇ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಿತ್ತು. ಕಳೆದ ತಿಂಗಳಿನಂತೆ ಜೂನ್ ತಿಂಗಳಿನಲ್ಲಿ ಯಾರ ಯಾರ ಖಾತೆಗೆ ಜಮೆಯಾಗಲಿದೆ ಎಂಬುದನ್ನು ಚೆಕ್ಮಾಡಬಹುದು.

Check beneficiary list annabhagya  ಆಗಸ್ಟ್ ತಿಂಗಳ ಅನ್ನಭಾಗ್ಯದ ಹಣ ಯಾರಿಗೆ ಜಮೆಯಾಗಲಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಅನ್ನಭಾಗ್ಯದ ಯೋಜನೆಯಡಿಯಲ್ಲಿ ಯಾರಿಗೆ ಹಣ ಜಮೆಯಾಗಲಿದೆ ಎಂಬುದನ್ನು ಚೆಕ್ ಮಾಡಲು ಈ

https://ahara.kar.nic.in/Home/EServices

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ  ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ನಂತರ ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಂಡ ನಂತರ ನಿಮ್ಮ ಊರು ಆಯ್ಕೆಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಫಲಾನುಭವಿಯ ಹೆಸರು, ತಂದೆಯಹೆಸರು ಹಾಗೂ ಎಷ್ಟು ಜನ ಫಲಾನುಭವಿಗಳಾಗಿದ್ದಾರೆ ಎಂಬುದು ಕಾಣಿಸುತ್ತದೆ.

ಒಂದು ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದರೆ ಅಂದರೆ ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದರೆ ಆ ಕುಟುಂಬಕ್ಕೆ  ಪ್ರತಿ ಕೆಜಿಗೆ 34 ರೂಪಾಯಿಯಂತೆ ಒಬ್ಬ ಸದಸ್ಯರಿಗೆ 5 ಕೆಜಿಗೆ 170 ರೂಪಾಯಿ ಜಮೆ ಮಾಡಲಾಗುವುದು. ಒಂದು ಕುಟುಂಬದ ನಾಲ್ಕು ಜನ ಸದಸ್ಯರಿಗೆ 680 ರೂಪಾಯಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ.

ಇದನ್ನೂ ಓದಿ : ನಿಮ್ಮ ಜಮೀನಿನ ಮೇಲೆ ಸಾಲವೆಷ್ಟಿದೆ? ಅಕ್ಕಪಕ್ಕದ ಜಮೀನು ಯಾರ ಹೆಸರಿಗೆ ಎಷ್ಟಿದೆ? ಇಲ್ಲೇ ಚೆಕ್ ಮಾಡಿ

ಜೂನ್ ತಿಂಗಳಲ್ಲಿ ಯಾರು ಯಾರು ಪಡಿತರ ಚೀಟಿಯಿಂದ ಅಕ್ಕಿ ಪಡೆದಿರುತ್ತಾರೋ ಅವರಿಗೆಲ್ಲಾ ಈ ತಿಂಗಳು ಹಣ ಜಮೆಯಾಗಲಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಮಾತ್ರ ಅನ್ನಭಾಗ್ಯದ ಹಣ ಜಮೆಯಾಗಲಿದೆ. ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯದ ಯೋಜನೆಯಡಿ ಹಣ ಜಮೆಯಾಗುವುದಿಲ್ಲ.  ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಸದಸ್ಯರನುಗುಣವಾಗಿ ಹಣ ಜಮೆಯಾಗಲಿದೆ.  ನಿಮ್ಮ ಪಡಿತರ ಚೀಟಿಯಲ್ಲಿ ಎಷ್ಟು ಜನ ಕುಟುಂಬದ ಸದಸ್ಯರಿದ್ದಾರೋ ಅದನ್ನು ಲೆಕ್ಕ ಹಾಕಿಕೊಂಡು ಹಣ ಜಮೆ ಮಾಡಲಾಗುವುದು.

ಒಂದು ವೇಳೆ ನಿಮ್ಮ ಮನೆಯಲ್ಲಿ ನಿಮ್ಮ ಐದು ವರ್ಷದ ಮೇಲ್ಪಟ್ಟ ಮಕ್ಕಳ ಹೆಸರು ಸೇರಿರದಿದ್ದರೆ ಕೂಡಲೇ  ಪಡಿತರ ಚೀಟಿಯಲ್ಲಿ ಮಕ್ಕಳ ಹೆಸರು ಸೇರಿಸಿಕೊಳ್ಳಬಹುದು.

Leave a Comment