ಮುಂಗಾರು, ಹಿಂಗಾರು ಬೆಳೆ ವಿಮೆ ನಿಮಗೆ ಜಮೆಯಾಗುತ್ತೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

Written by Ramlinganna

Published on:

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳಿಗೆ ವಿಮೆ ಮಾಡಿಸಿದ ರೈತರು ತಮ್ಮ ಬೆಳೆ ವಿಮೆಯ ಅರ್ಜಿ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ರೈತರು ಬೆಳೆ ವಿಮೆ ಮಾಡಿಸಿರುತ್ತಾರೆ. ಬೆಳೆ ವಿಮೆ ಮಾಡಿಸಿದ ನಂತರ ವಿಮೆ ಅರ್ಜಿ ಸ್ಟೇಟಸ್ ನ್ನು ಚೆಕ್ ಮಾಡಬಹುದು. ಸ್ಟೇಟಸ್ ಚೆಕ್ ಮಾಡಲು ರೈತರು ಯಾರ ಸಹಾಯವೂ ಇಲ್ಲದೆ ಅತ್ಯಂತ ಸರಳವಾಗಿ ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಸ್ಟೇಟಸ್ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ರೈತರು ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸಂರಕ್ಷಣೆ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಸೆಲೆಕ್ಟ್ ಇನ್ಸುರೆನ್ಸ್ ಇಯರ್್ ಎದುರುಗಡೆ 2022-2023 ಆಯ್ಕೆ ಮಾಡಿಕೊಳ್ಳಬೇಕು.

ಋುತು ಆಯ್ಕೆ (select Insurance Season) ನಲ್ಲಿ ಮೂರು ಆಯ್ಕೆಗಳು ಇರುತ್ತದೆ. ಮುಗಾರು (Kharif), ಹಿಂಗಾರು (Rabi) ಬೇಸಿಗೆ ( Summer) ಹೀಗೆ ಮೂರು ಆಯ್ಕೆಗಳು ಇರುತ್ತವೆ. ನೀವು ಮುಂಗಾರು ಹಿಂಗಾಮಿಗೆ ಬೆಳೆ ವಿಮೆ ಮಾಡಿಸಿದ್ದರೆ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ್ದರೆ (Rabi) ಆಯ್ಕೆ ಮಾಡಿಕೊಳ್ಳಬೇಕು.

ಅದೇ ರೀತಿ ನೀವು ಬೇಸಿಗೆ ಹಂಗಾಮಿಗೆ ಬೆಳೆವಿಮೆ ಮಾಡಿಸಿದ್ದರೆ ಸಮ್ಮರ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ Farmers ಕಾಲಂ ಕೆಳಗಡೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು Check status ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಇದನ್ನೂ ಓದಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ- ಏ. 11 ರವರೆಗೆ ಹೆಸರು ಸೇರಿಸಲು ಅವಕಾಶ

ಅಲ್ಲಿ ರೈತರಿಗೆ ಮೂರು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ಮೊಬೈಲ್ ನಂಬರ್ ಮೂಲಕ ಚೆಕ್ ಮಾಡಬೇಕಾದರೆ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮೊಬೈಲ್ ನಂಬರ್ ಹಾಕಬೇಕು. ನಂತರ Captcha ಕೋಡ್ ಹಾಕಬೇಕು. ನಂತರ Search ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಅಲ್ಲಿ ನೀವು ಬೆಳೆ ವಿಮೆ ಯಾವಾಗ ಮಾಡಿಸಿದ್ದೀರಿ? ಬೆಳೆ ವಿಮೆ ಕಂಪನಿಯಿಂದ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ? ಹಾಗೂ ಬೆಳೆ ವಿಮೆ ಹಣ ಯಾವಾಗ ಪಾವತಿಸಿದ್ದೀರಿ ಎಂಬ ಮಾಹಿತಿ ಕಾಣಿಸುತ್ತದೆ. View Details ಮೇಲೆ ಕ್ಲಿಕ್ ಮಾಡಬೇಕು.

ಆಗ ಮತ್ತೊಂದು ಪೇಜ್ ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರು, ತಂದೆಯ ಹೆಸರು, ಯಾವ ಬ್ಯಾಂಕಿನಲ್ಲಿ ಯಾವ ಬೆಳೆಗೆ ವಿಮೆ ಮಾಡಿಸಿದ್ದೀರಿ? ಎಷ್ಟು ಬೆಳೆ ವಿಮೆ ಹಣ ಪಾವತಿಸಿದ್ದೀರಿ? ಎಷ್ಟು ಎಕರೆಗೆ ಬೆಳೆ ವಿಮೆಮಾಡಿಸಿದ್ದೀರಿ ಎಂಬುದು ಸೇರಿದಂತೆ ಇತರ ಮಾಹಿತಿಗಳು ಕಾಣಿಸುತ್ತವೆ.

ಬೆಳೆ ವಿಮೆ ಕುರಿತಂತೆ ಉಚಿತ ಸಹಾವಾಣಿಗೆ ಕರೆ ಮಾಡಿ (crop insurance free toll free number)

ಬೆಳೆ ವಿಮೆ ಮಾಡಿಸಿದ ರೈತರು ಬೆಳೆ ವಿಮೆ ಕುರಿಂತೆ ವಿಮಾ ಕಂಪನಿಯ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಬೇಕು. ಹೌದು, 1800 180 1551 ಗೆ ಕರೆ ಮಾಡಿ ಬೆಳೆ ವಿಮೆ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಪಡೆಯಬಹುದು. ಬೆಳೆ ವಿಮಾ ಕಂಪನಿಗಳ ಸಿಬ್ಬಂದಿಗಳ ಮೊಬೈಲ್ ನಂಬರ್ ಸಹ ಪಡೆಯಬಹುದು.

Leave a comment