ಯಾವ ನಿಗಮದಿಂದ ಎಷ್ಷು ಸಬ್ಸಿಡಿ ಸಿಗಲಿದೆ? ಇಲ್ಲಿದೆ ಮಾಹಿತಿ

Written by Ramlinganna

Updated on:

ರೈತರು, ಸಾರ್ವಜನಕರಿಗೆ ವಿವಿಧ ಯೋಜನೆಗಳಡಿಯಲ್ಲಿ ಸಬ್ಸಿಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಯಾವ ನಿಗಮದಿಂದ ಎಷ್ಷು ಸಬ್ಸಿಡಿ ಸಿಗಲಿದೆ ಎಂಬ ಮಾಹಿತಿ ಇಲ್ಲಿದೆ.

ಹಾಗಾದರೆ ಯಾವ ಯೋಜನೆಗಳಿಂದ ಏನೇನು ಸೌಲಭ್ಯ ಸಿಗಲಿದೆ? ಯಾರಿಗೆ ಎಷ್ಟು ಸಬ್ಸಿಡಿ ಸಿಗಲಿದೆ? ಅರ್ಜಿ ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಏನೇನು ಅರ್ಹತೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಯಾವ ಯಾವ ಯೋಜನೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ?

ರೈತರಿಗೆ ಸಾರ್ವಜನಿಕರಿಗೆ ಸೌಲಭ್ಯ ನೀಡಲು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರಡ ಚೌಡಯ್ಯ ಅಭಿವೃದ್ಧಿ ನಿಗಮ,  ಕರ್ನಾಟಕ ಒಕ್ಕಲಿಗರ ಸಮುದಾಯ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ, ಅರೆ ಅಲೆ ಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಸಹಾಯಧನ (ಸಬ್ಸಿಡಿ) ಹಾಗೂ ಸಾಲ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಯೋಜನೆಗಳಡಿಯಲ್ಲಿ ಯಾವ ನಿಗಮದಿಂದ ಎಷ್ಷು ಸಬ್ಸಿಡಿ ಸಿಗಲಿದೆ?

ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಬಸವ ಬೆಳಗು ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕ ಆರ್ಥಿಕ ನೆರವು ಹೀಗೆ ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಯೋಜನೆಗಳಡಿಯಲ್ಲಿ ಕರೆದ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಹೌದು, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಇದೇ ತಿಂಗಳು ಅಕ್ಟೋಬರ್ 30 ರವರೆಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ ಬೆಳೆ ಹಾನಿ ಪರಿಹಾರ ಯಾವಾಗ ಯಾರಿಗೆ ಜಮೆ ಆಗುತ್ತದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದವರಿಗೆ ನವೆಂಬರ್ 2 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು?

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಇತ್ತೀಚಿನ 3 ಫೋಟೋಗಳು ಬೇಕು. ಗಂಗಾ ಕಲ್ಯಾಣ ಯೋಜನೆಗೆ ಜಮೀನಿನ ಪಹಣಿ ಸಲ್ಲಿಸಬೇಕು.ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ ಸಲ್ಲಿಸಬೇಕು.

ಅರ್ಜಿಗಳನ್ನು ಎಲ್ಲಿ ಸಲ್ಲಿಸಬೇಕು?

ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬೇಕು. ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್. ಸಿಎಸ್ಸಿ ಕೇಂದ್ರಗಳಲ್ಲಿ  ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಬಹುದು. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವವರು

https://kvldcl.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬಹುದು. ಅದೇ ರೀತಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಡಿಯಲ್ಲಿ ಬರುವವರು ಈ

https://ambigaradevelopment.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿ ಪಡೆಯಬಹುದು. ಅದೇ ರೀತಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದವರು ಆಯಾ ನಿಗಮದ ವೆಬ್ಸೈಟ್ ನಲ್ಲಿ ಸಂಪರ್ಕಿಸಬಹುದು. ಇನ್ನೂ ಹೆಚ್ಚಿನ ಮಾಹಿತಿಗೆ ನಿಮ್ಮ ಹತ್ತಿರದ ನಿಗಮದ ಕಚೇರಿಯಲ್ಲಿ ಕೇಳಬಹುದು.

Leave a Comment