ಈ ದಿನ ಪಿಎಂ ಕಿಸಾನ್ ಹಣ ಜಮೆ- ನಿಮ್ಮ ಹೆಸರು ಚೆಕ್ ಮಾಡಿ

Written by Ramlinganna

Updated on:

PM kisan date : ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಗುಡ್ ನ್ಯೂಸ್. ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಫಲಾನುಭವಿಗಳ ರೈತರ ಪಟ್ಟಿ ಬಿಡುಗಡೆಯಾಗಿದೆ. ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ? ಹಾಗೂ  ಯಾವ ಯಾವ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಲಿದೆ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಪಿಎಂ ಕಿಸಾನ್ 15ನೇ ಕಂತಿನ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ಈಗ 15ನೇ ಕಂತಿನ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ  ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದನಂತರ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ Get Report ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಮಾಡಿಸಿದ್ದಾರೋ ಇಲ್ಲವೋ?

ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕಾಗುತ್ತದೆ.  ಇಕೆವೈಸಿ ಆಗಿದ್ದರೆ ಮಾತ್ರ ನಿಮಗೆ ಮುಂದಿನ ಕಂತಿನ ಹಣ ಜಮೆಯಾಗುತ್ತದೆ. ಇದರೊಂದಿಗೆ ನಿಮ್ಮ ಜಮೀನಿನ ದಾಖಲೆ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ನಿಮ್ಮ ಹೆಸರು ಒಂದೇ ರೀತಿಯಾಗಿರಬೇಕು. ಹೆಸರು ಅಥವಾ ತಂದೆಯ ಹೆಸರು ತಾಳೆಯಾಗದಿದ್ದರೂ ಸಹ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ತಡೆಹಿಡಿಯಲಾಗುವುದು.

PM kisan date ಹಣ ಯಾವಾಗ ಜಮೆಯಾಗುವುದು?

ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣ ಮುಂದಿನ ತಿಂಗಳು ನವೆಂಬರ್ 27 ರಂದು ಜಮೆಯಾಗುವ ಸಾಧ್ಯತೆಯಿದೆ. ಏಕೆಂದರೆ 14ನೇ ಕಂತಿನ ಹಣ ಜುಲೈ 27 ರಂದು ರೈತರ ಖಾತೆಗೆ ಜಮೆಯಾಗಿತ್ತು. ಹಾಗಾಗಿ ಮುಂದಿನ ಕಂತು ಅಂದರೆ 15ನೇ ಕಂತಿನ ಹಣ ನವೆಂಬರ್ 27 ರಂದು ದೇಶಾದ್ಯಂತ ಎಲ್ಲಾ ಫಲಾನುಭವಿಗಳ ರೈತರ ಖಾತೆಗೆ ಏಕಕಾಲದಲ್ಲಿ ಜಮೆಯಾಗಲಿದೆ.

ಇದನ್ನೂ ಓದಿ ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಯಾರ್ಯಾರಿಗೆ ಜಮೆಯಾಗಲಿದೆ? ಇಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಹಣ ಪ್ರತಿ ವರ್ಷ ಮೂರು ಕಂತುಗಳಲ್ಲಿ ಜಮೆಯಾಗುತ್ತದೆ. ಹೌದು ಏಪ್ರೀಲ್ –ಜುಲೈ ತಿಂಗಳಲ್ಲಿ ಮೊದಲ ಕಂತು ಜಮೆಯಾದರೆ, ಆಗಸ್ಟ್ – ನವೆಂಬರ್ ತಿಂಗಳ ಮಧ್ಯದಲ್ಲಿ ಎರಡನೇ ಕಂತು ಜಮೆಯಾಗಲಿದೆ. ಅದೇ ರೀತಿ ಡಿಸೆಂಬರ್ – ಮಾರ್ಚ್ ತಿಂಗಳಲ್ಲಿ ಮೂರನೇ ಕಂತು ಜಮೆಯಾಗಲಿದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ. ಕಳೆದ ತಿಂಗಳ ಆಧಾರದ ಮೇಲೆ ಮುಂದಿನ ತಿಂಗಳ ರೈತರ ಖಾತೆಗೆ ಜಮೆಯಾಗಲಿದೆ. ರೈತರು ಇಕೆವೈಸಿ ಮಾಡಿಸದರೂ ಸಹ ಒಮ್ಮೆ ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಪರಿಶೀಲಿಸಿಕೊಳ್ಳಬಹುದು. ಹೌದು, ಪರೀಶೀಲಿಸಿದ ನಂತರ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗುವುದೋ ಇಲ್ಲವೋ ಗೊತ್ತಾಗುತ್ತದೆ,

Leave a Comment